ಸಂಘಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಸಹಕಾರ ಕ್ಷೇತ್ರ ಬಲವರ್ಧನೆ
ನ.14ರಿಂದ 20ರವರೆಗೆ ಸಹಕಾರ ಸಪ್ತಾಹ ಆಚರಿಸುವ ಮೂಲಕ ಪಂಡಿತ್ ಜವಾಹರಲಾಲ್ ನೆಹರು ಅವರ ಸಹಕಾರ ಚಳವಳಿಯ ಆಶಯಗಳನ್ನು ಸ್ಮರಿಸಲಾಗುತ್ತದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಬಲವರ್ಧನೆಯಲ್ಲಿ ಎಂ.ವಿ.ಕೃಷ್ಣಪ್ಪ ಅವರ ಕೊಡುಗೆ ಮಹತ್ವದ್ದಾಗಿದೆ. ಸಹಕಾರ ಸಂಸ್ಥೆಗಳ ಬೆಳವಣಿಗೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ವೃತ್ತಿಪರ ಸೇವೆ, ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಹಾಗೂ ವಿಶ್ವಶಾಂತಿಯ ಆಶಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.