ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಜಯನಗರದಲ್ಲಿ 'ಕಾಲ'ದ ವಿಜ್ಞಾನ ಲೋಕ; ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ

ಪರಮ್ ಫೌಂಡೇಶನ್‌ನಿಂದ ಜಯನಗರದಲ್ಲಿ 'ಕಾಲ'ದ ವಿಜ್ಞಾನ ಲೋಕ

Param Foundation: ಪರಮ್‌ ಫೌಂಡೇಶನ್ ವತಿಯಿಂದ ಬೆಂಗಳೂರಿನ ಜಯನಗರದಲ್ಲಿರುವ 'ಪಾರ್ಸೆಕ್‌' (ParSEC) ನಲ್ಲಿ 'ಕಾಲ' ಎಂಬ ವಿಶಿಷ್ಟ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಇಲ್ಲಿ ಮಕ್ಕಳು ಮತ್ತು ದೊಡ್ಡವರು ಸಮಯದ ಹಿಂದಿನ ವಿಜ್ಞಾನವನ್ನು ಆಟ-ಪಾಠದ ಮೂಲಕ ಕಲಿಯಬಹುದಾಗಿದೆ. ಈ ಕುರಿತ ವಿವರ ಇಲ್ಲಿದೆ.

Belagavi Rains: ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಭಾರೀ ಮಳೆ; 1 ಗಂಟೆಗೂ ಹೆಚ್ಚು ಕಾಲ ವರ್ಷಧಾರೆ!

ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಅಬ್ಬರಿಸಿದ ಮಳೆರಾಯ!

Karnataka Rains: ರಾಜ್ಯದಲ್ಲಿ ಬೆಳಗಾವಿ ಮಾತ್ರವಲ್ಲದೇ ಚಿಕ್ಕಮಗಳೂರು ಜಿಲ್ಲೆಯಲಲ್ಲೂ ಮಂಗಳವಾರ ಮಳೆ ಅಬ್ಬರಿಸಿದೆ. ಬೆಳಗಾವಿಯಲ್ಲಿ ಅಕಾಲಿಕ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಹೈರಾಣಾದರು. ರಾಜ್ಯ ವಿವಿಧೆಡೆ ವರ್ಷದ ಮೊದಲ ಮಳೆ ಸಿಂಚನವಾಗಿದೆ.

Muda Case: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಪ್ರಕರಣ; ಆದೇಶ ಕಾಯ್ದಿರಿಸಿದ ಕೋರ್ಟ್‌

ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣ; ಆದೇಶ ಕಾಯ್ದಿರಿಸಿದ ಕೋರ್ಟ್‌

ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಮೂಡಾ ಸೈಟ್ ಹಂಚಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಕ್ಲೀನ್ ಚಿಟ್ ನೀಡಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು. ಇದನ್ನು ಆಕ್ಷೇಪಿಸಿ ಸ್ನೇಹಮಯಿ ಕೃಷ್ಣ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸದ್ಯ ಅರ್ಜಿಯ ಆದೇಶವನ್ನು ಕೋರ್ಟ್‌ ಕಾಯ್ದಿರಿಸಿದೆ.

ಬೆಸ್ಕಾಂನಿಂದ ಇವಿ ಮೂಲಸೌಕರ್ಯಕ್ಕಾಗಿ ದೇಶದ ಮೊದಲ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌ ಬಿಡುಗಡೆ

ಇವಿ ಮೂಲಸೌಕರ್ಯಕ್ಕೆ ಬೆಸ್ಕಾಂನಿಂದ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌

BESCOM: ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್‌ ಸಂಪರ್ಕಕ್ಕೆ ಏಕ ಗವಾಕ್ಷಿ ವ್ಯವಸ್ಥೆಯನ್ನು ಹೊಂದಿರುವ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್, ಇತ್ತೀಚೆಗೆ ಬೆಸ್ಕಾಂ ನಿಗಮ ಕಚೇರಿಯಲ್ಲಿ ಈ ವಿಶಿಷ್ಟ ಪೋರ್ಟಲ್‌ಗೆ ಚಾಲನೆ ನೀಡಿದರು.

ಕನ್ನಡ ನಾಡಿನ ಬಗ್ಗೆ ಅವಹೇಳನಕಾರಿ ಹೇಳಿಕೆ; ಎಂಇಎಸ್‌ ಮುಖಂಡ ಶುಭಂ ಶೆಳಕೆ ಗಡಿಪಾರಿಗೆ ಕರವೇ ಒತ್ತಾಯ

ಎಂಇಎಸ್‌ ಮುಖಂಡ ಶುಭಂ ಶೆಳಕೆ ಗಡಿಪಾರಿಗೆ ಕರವೇ ಒತ್ತಾಯ

Savadatti News: ಕನ್ನಡ ನಾಡಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಎಂಇಎಸ್‌ ಮುಖಂಡ ಶುಭಂ ವಿಕ್ರಾಂತ್‌ ಶೆಳಕೆಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಗ್ರೇಡ್ 2 ತಹಸೀಲ್ದಾರ್ ಎಂ.ಎನ್. ಮಠದ ಅವರ ಮೂಲಕ ಗೃಹ ಸಚಿವರಿಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾ ಘಟಕದಿಂದ ಮನವಿ ಸಲ್ಲಿಸಲಾಗಿದೆ.

ಶಬರಿಮಲೆಗೆ ಹೋಗಿ ಬಂದು ಪತ್ನಿಯನ್ನು ಕೊಂದು ನದಿಗೆ ಎಸೆದ ಪತಿ; 2ನೇ ಮದುವೆ ಪ್ರಶ್ನಿಸಿದ್ದಕ್ಕೆ ಕೃತ್ಯ!

ಹಾಸನದಲ್ಲಿ ಪತ್ನಿಯನ್ನು ಕೊಂದು ನದಿಗೆ ಎಸೆದ ಪತಿರಾಯ!

ಹಾಸನ ಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ಘಟನೆ ನಡೆದಿದೆ. ಎರಡನೇ ಮದುವೆ ವಿಚಾರವಾಗಿ ಗಂಡ ಮತ್ತು ಹೆಂಡತಿ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಪತ್ನಿಯ ಕಪಾಳಕ್ಕೆ ಗಂಡ ಹೊಡೆದಿದ್ದ‌. ಇದರಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಳು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕನಾಯಕನಹಳ್ಳಿಯ ಜೀರ್ಣೋದ್ಧಾರಗೊಂಡ ಹಜರತ್ ಸೈಯದ್ ಪೀರಾಕ್ ಶಾ ಖಾದ್ರಿ ದರ್ಗಾ ಜ.15ಕ್ಕೆ ಉದ್ಘಾಟನೆ

ಜ.15ರಂದು ಹಜರತ್ ಸೈಯದ್ ಪೀರಾಕ್ ಶಾ ಖಾದ್ರಿ ದರ್ಗಾ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ದಶಕಗಳ ಇತಿಹಾಸವಿರುವ ಹಜರತ್ ಸೈಯದ್ ಪೀರಾಕ್ ಶಾ ಖಾದ್ರಿ ದರ್ಗಾ ಶಿಥಿಲಗೊಂಡಿದ್ದ ಕಾರಣ ನವೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಸದ್ಯ ದರ್ಗಾದ ವಿನ್ಯಾಸ, ಬಣ್ಣದ ಕೆಲಸ ಹಾಗೂ ಆವರಣದ ಸೌಂದರ್ಯೀಕರಣದ ಕೆಲಸಗಳು ಅತಿ ವೇಗವಾಗಿ ಸಾಗುತ್ತಿದ್ದು, ಜ.15ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ರಾಹುಲ್ ಗಾಂಧಿ ಜತೆಗೆ ರಾಜಕಾರಣ ಚರ್ಚೆ ಮಾಡಿಲ್ಲ; ಅಧಿಕಾರ ಹಂಚಿಕೆ ಗೊಂದಲವೂ ಇಲ್ಲ ಎಂದ ಸಿಎಂ

ರಾಹುಲ್ ಗಾಂಧಿ ಜತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Rahul Gandhi Mysore Visit: ತಮಿಳುನಾಡಿನ ಗೂಡ್ಲೂರು ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಮಂಗಳವಾರ ಆಗಮಿಸಿದ್ದರು. ಈ ವೇಳೆ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ವಾಗತಿಸಿದರು.

ಜಪಾನ್‌ ಯುವತಿ ಬಾಯಲ್ಲಿ ಸಿರಿಗನ್ನಡ ಕೇಳಿ ಕನ್ನಡಿಗರು ಫುಲ್‌ ಖುಷ್‌; ವಿಡಿಯೊ ನೋಡಿ

ಕನ್ನಡ ಮಾತನಾಡಿ ಮೆಚ್ಚುಗೆ ಗಳಿಸಿದ ಜಪಾನ್ ಯುವತಿ

Viral Video: ಬೆಂಗಳೂರಿನಲ್ಲಿ ಎಲ್ಲ ಹೊಂದಾಣಿಕೆಯಾದರೂ ಭಾಷೆ ವಿಚಾರಕ್ಕಾಗಿ ಆಗಾಗ ಚರ್ಚೆ ನಡೆಯುತ್ತಲೇ ಇರುತ್ತದೆ. ಅದರಲ್ಲೂ ಕನ್ನಡ ಮಾತನಾಡುವ ವಿಚಾರಕ್ಕೆ ಅಸಮಾಧಾನ ಹೊಂದಿ ಸ್ಥಳೀಯರೊಂದಿಗೆ ಪರಭಾಷಿಕರು ವಾಗ್ವಾದ ನಡೆಸಿದ ಅನೇಕ ಘಟನೆ ನಡೆದಿವೆ. ಆದರೆ ಇದೀಗ ಬೆಂಗಳೂರಿನಲ್ಲಿ ವಾಸಿಸುವ ಜಪಾನ್‌ನ ಮಹಿಳೆಯೊಬ್ಬರು ಕನ್ನಡ ಭಾಷೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ವೇದಿಕೆಯ ಮೇಲೆ ಕನ್ನಡ ಮಾತ‌ನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ವಿಡಿಯೊ ವೈರಲ್‌ ಆಗಿದೆ.

ಗ್ರಾಮೀಣ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಕೊಂದಿದೆ: ಡಿ.ಕೆ. ಶಿವಕುಮಾರ್ ಆಕ್ರೋಶ

ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಕೊಂದಿದೆ: ಡಿ.ಕೆ. ಶಿವಕುಮಾರ್

MGNREGA Bachao Sangram: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ʼಮನರೇಗಾ ಬಚಾವ್ ಸಂಗ್ರಾಮʼ ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ್ದಾರೆ. ನರೇಗಾ ಯೋಜನೆಯಿಂದ ರಾಜ್ಯದ ಪ್ರತಿ ಪಂಚಾಯಿತಿಗಳಿಗೆ ಪ್ರತಿ ವರ್ಷ ಕನಿಷ್ಠ 1-2 ಕೋಟಿ ರೂ. ಸರಾಸರಿ ಅನುದಾನ ಸಿಗುತ್ತಿತ್ತು. ಆದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಇದೆಲ್ಲದಕ್ಕೂ ಕುತ್ತು ಬಂದಿದೆ ಎಂದು ಕಿಡಿಕಾರಿದ್ದಾರೆ.

ಕಾಡು ಹಂದಿ ಬೇಟೆಗೆ ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡು ರೈತನಿಗೆ ಗಂಭೀರ ಗಾಯ

ಮಧುಗಿರಿಯಲ್ಲಿ ಸಿಡಿಮದ್ದು ಸ್ಫೋಟಗೊಂಡು ರೈತನಿಗೆ ಗಂಭೀರ ಗಾಯ

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ವೀರನಾಗೇನಹಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ಗಾಯಾಳು ರೈತನನ್ನು ಆಂಬ್ಯುಲೆನ್ಸ್ ಮೂಲಕ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ, ಕೊಡಿಸಲಾಗಿದೆ. ಪ್ರಾಣಿಗಳ ಬೇಟೆಗೆ ಕೆಲ ಕಿಡಿಗೇಡಿಗಳು ಅಕ್ರಮವಾಗಿ ಸಿಡಿಮದ್ದುಗಳನ್ನು ಇಡುತ್ತಿರುವುದು ರೈತರ ಜೀವಕ್ಕೆ ಮಾರಕವಾಗಿದೆ ಎಂದು ಗ್ರಾಮಸ್ಥರು ಆತಂಕ ಹೊರಹಾಕಿದ್ದಾರೆ.

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನದಲ್ಲಿ ಮಹಿಳೆಯನ್ನು ಬೆನ್ನಟ್ಟಿ ತುಳಿದು ಕೊಂದ ಕಾಡಾನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಾವಳಿ ಹೆಚ್ಚಳವಾಗಿರುವ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Bengaluru Traffic: ಬೆಂಗಳೂರಲ್ಲಿ ‌ಇನ್ನು ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ರೆ ಜೋಕೆ, ಎಫ್‌ಐಆರ್‌ ಬೀಳಬಹುದು!

ಇನ್ನು ಟ್ರಾಫಿಕ್‌ ನಿಯಮ ಉಲ್ಲಂಘಿಸಿದ್ರೆ ಜೋಕೆ, ಎಫ್‌ಐಆರ್‌ ಬೀಳಬಹುದು!

ಸಿಗ್ನಲ್ ಜಂಪ್ ಮಾಡುವುದು ಮತ್ತು ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುವುದು ಬೆಂಗಳೂರಿನಲ್ಲಿ ಸಾಮಾನ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿರುವ ಕಾರಣ ಇಲಾಖೆ ಕಠಿಣ ಕ್ರಮ ಜಾರಿಗೆ ಮುಂದಾಗಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್‌ 285 (ಸಾರ್ವಜನಿಕ ಮಾರ್ಗದಲ್ಲಿ ಅಪಾಯ ಅಥವಾ ಅಡ್ಡಿ ಉಂಟುಮಾಡುವುದು) ಅಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ.

ವಿಪ್ರ ಬಿಸಿನೆಸ್‌ ಫೋರಂ ನೂತನ ಪದಾಧಿಕಾರಿಗಳ ನೇಮಕ; ಅಧ್ಯಕ್ಷ ಆನಂದ್‌, ಗೌರವಾಧ್ಯಕ್ಷ ಕೆ.ರಾಧಾಕೃಷ್ಣ ಹೊಳ್ಳ ಆಯ್ಕೆ

ವಿಪ್ರ ಬಿಸಿನೆಸ್‌ ಫೋರಂ ನೂತನ ಪದಾಧಿಕಾರಿಗಳ ನೇಮಕ

ಕಳೆದ ಏಳು ವರ್ಷಗಳಿಂದ ಸಕ್ರಿಯವಾಗಿರುವ, ವ್ಯಾಪಾರ ಮತ್ತು ಉದ್ಯಮ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ವಿಪ್ರ ಬಿಸಿನೆಸ್ ಫೋರಂನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನಡೆದಿದೆ. ಸಂಘಟನೆಯಡಿ ಕಾರ್ಯನಿರ್ವಹಿಸುತ್ತಿರುವ ಆತ್ರೇಯ, ಅಗಸ್ತ್ಯ, ಭಾರದ್ವಾಜ, ವಸಿಷ್ಠ ಮತ್ತು ಕಾಶ್ಯಪ ವಾಹಿನಿಗಳ ಸದಸ್ಯರು ಭಾಗವಹಿಸಿದ್ದರು.

Makar Sankranti 2026: ಈ ವರ್ಷ ಮಕರ ಸಂಕ್ರಾಂತಿ ಜನವರಿ 14ಕ್ಕಾ ಅಥವಾ 15ಕ್ಕಾ? ಉತ್ತರ ಇಲ್ಲಿದೆ

ಈ ವರ್ಷ ಮಕರ ಸಂಕ್ರಾಂತಿ ಜನವರಿ 14ಕ್ಕಾ ಅಥವಾ 15ಕ್ಕಾ? ಉತ್ತರ ಇಲ್ಲಿದೆ

ಮಕರ ಸಂಕ್ರಾಂತಿಯ ಶುಭ ಸಮಯ ಜನವರಿ 15ರಂದು ಸೂರ್ಯೋದಯದ ನಂತರ ಇರುತ್ತದೆ. ನಿರ್ಣಯ ಸಿಂಧು ಪ್ರಕಾರ ಈ ಬಾರಿ ಮಕರ ಸಂಕ್ರಾಂತಿಯ ಶುಭ ಸಮಯ ಜನವರಿ 15 ರಂದು. ಏಕೆಂದರೆ ಸೂರ್ಯ ಹಿಂದಿನ ಮಧ್ಯಾಹ್ನ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಆದ್ದರಿಂದ, ಜನವರಿ 15 ರ ಗುರುವಾರದಂದು ಮಕರ ಸಂಕ್ರಾಂತಿಯನ್ನು ಆಚರಿಸುವುದು ಶಾಸ್ತ್ರಗಳ ಪ್ರಕಾರ ಸರಿಯಾದುದು.

Bengaluru News: ಬೆಂಗಳೂರಿನಲ್ಲಿ ಬಾಂಗ್ಲಾದೇಶಕ್ಕೆ ಜೈಕಾರ ಹಾಕಿದ ಮಹಿಳೆ ಬಂಧನ

ಬೆಂಗಳೂರಿನಲ್ಲಿ ಬಾಂಗ್ಲಾದೇಶಕ್ಕೆ ಜೈಕಾರ ಹಾಕಿದ ಮಹಿಳೆ ಬಂಧನ

ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್ ಎಂಬ ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗಿದ್ದಾಳೆ. ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ದೇಶವಿರೋಧಿ ಘೋಷಣೆ ಕೂಗಿದ ಮಹಿಳೆಯನ್ನು ಬಂಧಿಸಿದ್ದಾರೆ.

Self Harming: ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಶಾಲೆಗೆ ಹೋಗು ಎಂದದ್ದಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬಾಲಕ ಜಗದೀಶನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಸ್ ಬಂದಿದ್ದ. ನಂತರ ಶಾಲೆಗೆ ಹೋಗಲು ನಿರಾಕರಿಸಿದ್ದ. ಇದರಿಂದ ತಂದೆ ಬುದ್ದಿವಾದ ಹೇಳಿದ್ದಕ್ಕೆ ಶಾಲೆಗೆ ತೆರಳಿದ್ದ ಬಾಲಕ ಗೆಳೆಯನ ಜೊತೆಗೆ ಮನೆಗೆ ವಾಪಸ್ ಬರುವಾಗ ಗೆಳೆಯನನ್ನು ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Lakkundi Gold Treasure: ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯಲ್ಲಿ ಒಂದು ಪಾಲು ಕುಟುಂಬಕ್ಕೆ! ನಮಗೆ ಆ ಜಾಗ ಬೇಡ ಎಂದು ಕುಟುಂಬ!

ಸಿಕ್ಕ ನಿಧಿಯಲ್ಲಿ ಒಂದು ಪಾಲು ಕುಟುಂಬಕ್ಕೆ! ನಮಗೆ ಆ ಜಾಗ ಬೇಡ ಎಂದು ಕುಟುಂಬ!

ರಿತ್ತಿ ಕುಟುಂಬದ ಸದಸ್ಯರಿಗೆ, ನಿಧಿ ಪತ್ತೆಯಾದ ಬಳಿಕ ಆ ಜಾಗದಲ್ಲಿ ಅನಾಹುತಗಳು ಸಂಭವಿಸುವ ಭಯ ಕಾಡುತ್ತಿದೆ. “ಆ ಜಾಗದಿಂದ ದೊಡ್ಡ ಸರ್ಪ ಎದ್ದಿದೆ. ಒಂದಲ್ಲ ಒಂದು ದಿನ ಕಚ್ಚಬಹುದು ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ನಮಗೆ ಒಬ್ಬನೇ ಮಗ ಇದ್ದಾನೆ. ಅವನ ಭವಿಷ್ಯ ನಮಗೆ ಮುಖ್ಯ. ಹೀಗಾಗಿ ಆ ಜಾಗ ನಮಗೆ ಬೇಡ” ಎಂದು ಕುಟುಂಬಸ್ಥರು ಹೇಳಿದ್ದಾರೆ.

GBA Elections: ಕೊನೆಗೂ ಜಿಬಿಎ ಚುನಾವಣೆಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ ಸುಪ್ರೀಂ ಕೋರ್ಟ್‌

ಕೊನೆಗೂ ಜಿಬಿಎ ಚುನಾವಣೆಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ ಸುಪ್ರೀಂ ಕೋರ್ಟ್‌

ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಅಡಿಯಲ್ಲಿ ರಚನೆಯಾಗಲಿರುವ ಐದು ಮಹಾನಗರ ಪಾಲಿಕೆಗಳ ವಾರ್ಡ್‌ಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಅದರ ಅಂತಿಮ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ 2026ರ ಫೆಬ್ರವರಿ 20ರವರೆಗೆ ಕಾಲಾವಕಾಶ ನೀಡಿದೆ. ಇದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡಲಾದ ಕೊನೆಯ ಅವಕಾಶವಾಗಿದೆ ಎಂದು ಕೋರ್ಟ್ ತಿಳಿಸಿದೆ.

Lalbagh Flower Show: ನಾಳೆಯಿಂದ ಲಾಲ್​​ಬಾಗ್​ನಲ್ಲಿ ಗಣರಾಜ್ಯೋತ್ಸವ ಫ್ಲವರ್ ಶೋ: ಈ ಬಾರಿ ʼತೇಜಸ್ವಿ ವಿಸ್ಮಯʼ! ಟಿಕೆಟ್​ ದರವೆಷ್ಟು?

ನಾಳೆಯಿಂದ ಲಾಲ್​​ಬಾಗ್​ನಲ್ಲಿ ʼತೇಜಸ್ವಿʼ ಫ್ಲವರ್ ಶೋ! ಟಿಕೆಟ್​ ದರವೆಷ್ಟು?

ತೋಟಗಾರಿಕೆ ಇಲಾಖೆಯಿಂದ ಆಯೋಜಿಸುತ್ತಿರುವ 219ನೇ ಪ್ರದರ್ಶನ ಇದಾಗಿದೆ. ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಕುರಿತ 'ತೇಜಸ್ವಿ ವಿಸ್ಮಯ' ವಿಷಯವನ್ನಾಧರಿಸಿದ ಈ ಪ್ರದರ್ಶನದಲ್ಲಿ ಗಾಜಿನ ಮನೆಯಲ್ಲಿ ಪೂರ್ಣಚಂದ್ರ ತೇಜಸ್ವಿಯವರ ನೆಚ್ಚಿನ ಕಾಡನ್ನು ನಿರ್ಮಿಸಲಾಗುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಹತ್ತು-ಹಲವು ಆಕರ್ಷಣೆಗಳಿದ್ದು, ಒಟ್ಟಾರೆ 3 ಕೋಟಿ ರೂ.ಗೂ ಅಧಿಕ ಹಣ ಖರ್ಚು ಮಾಡಲಾಗುತ್ತಿದೆ.

Mallikarjun Kharge: ಗಂಟೆ ಬಾರಿಸಿದರೆ ದೇವರು ಪ್ರಸನ್ನ ಆಗಲ್ಲ: ಮೋದಿ ಸೋಮನಾಥ ದೇಗುಲ ಭೇಟಿಗೆ ಖರ್ಗೆ ವ್ಯಂಗ್ಯ

ಗಂಟೆ ಬಾರಿಸಿದರೆ ದೇವರು ಪ್ರಸನ್ನ ಆಗಲ್ಲ: ಮೋದಿಗೆ ಖರ್ಗೆ ವ್ಯಂಗ್ಯ

ಸೋಮನಾಥ ದೇವಸ್ಥಾನಕ್ಕೆ ಸಾವಿರ ವರ್ಷ ಆಯ್ತು ಎಂದು ಈಗ ಮೋದಿಗೆ ಆ ದೇವಾಲಯ ನೆನಪಾಗಿದೆ. ಈ ಮುಂಚೆ ಏಕೆ ಈ ದೇವಸ್ಥಾನ ನೆನಪಾಗಲಿಲ್ಲ? ಮುಂಬರುವ ಹಲವು ರಾಜ್ಯಗಳ ಚುನಾವಣೆ ದೃಷ್ಟಿಯಿಂದ ಮೋದಿ ಈ ರೀತಿ ಮಾಡುತ್ತಿದ್ದಾರೆ. ದೇವರು ನಿಮ್ಮ ಕೆಲಸಗಳಿಂದ ಪ್ರಸನ್ನವಾಗುತ್ತಾನೆಯೇ ಹೊರತು ಗುಡಿಗೆ ಹೋಗಿ ಗಂಟೆ ಬಾರಿಸಿದರೆ ದೇವರು ಪ್ರಸನ್ನ ಆಗಲ್ಲ ಎಂದು ಖರ್ಗೆ ಹೇಳಿದ್ದಾರೆ.

Chikkaballapur News: ಮಕ್ಕಳು ಓದಿನ ವಿಚಾರದಲ್ಲಿ ಹೆತ್ತವರಿಗೆ ತಲೆನೋವಾಗಬಾರದು : ಧ್ಯಾನೋಪಾಸಕ ಅನಂತ ಭಟ್

ಮಕ್ಕಳು ಓದಿನ ವಿಚಾರದಲ್ಲಿ ಹೆತ್ತವರಿಗೆ ತಲೆನೋವಾಗಬಾರದು

ವಿದ್ಯಾಭ್ಯಾಸದ ಅವಧಿಯಲ್ಲಿ ವಿದ್ಯಾರ್ಥಿ ಮನಸ್ಸಿನಲ್ಲಿ ಶರಣಾಗತ ಭಾವ, ಭಾವಶುದ್ಧಿ ಮತ್ತು ಅರ್ಪಣಾ ಭಾವ ಇದ್ದಲ್ಲಿ ಯಶಸ್ಸು ಖಚಿತವಾಗುತ್ತದೆ. ಉತ್ತಮ ಅಂಕಗಳನ್ನು ಪಡೆದು ಬ್ರೈಟ್ ಶಾಲೆಗೆ ಗೌರವ ತರುತ್ತೇನೆ ಎಂಬ ಸಂಕಲ್ಪದೊಂದಿಗೆ ವಿದ್ಯಾರ್ಥಿಗಳು ಮುಂದುವರಿಯಬೇಕು. ಅಂಕಗಳೇ ವಿದ್ಯಾರ್ಥಿ ಜೀವನದ ಅಂತಿಮ ಸತ್ಯವಲ್ಲ.

ರಾಗಿ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಮನವಿ ಸ್ವೀಕಾರ, ಕ್ರಮ ವಹಿಸುವ ಭರವಸೆ

ಎ.ಕೆ.ಆರ್.ಎಸ್ ರೈತ ಸಂಘದಿಂದ ಪ್ರತಿಭಟನೆ

ನೀರಾವರಿ ಆದರೆ ಒಂದು ಎಕರೆಗೆ ಸರಾಸರಿ 40 ಕ್ವಿಂಟಾಲ್ ಮೆಕ್ಕೇಜೋಳ ಬೆಳೆದರೆ, ಮಳೆಯಾಶ್ರಿತ ಕುಷ್ಕಿಯಲ್ಲಿ 25 ಕ್ವಿಂಟಾಲ್ ಬೆಳೆಯುತ್ತಾರೆ. ಈ ಬಾರಿ ಉತ್ತಮ ಮಳೆಯಾದ ಕಾರಣ ಜಿಲ್ಲೆಯಲ್ಲಿ ಒಂದು ಲಕ್ಷ 1 ಟನ್ ಜೋಳ ಉತ್ಪಾದನೆ ಆಗಿದೆ.ಈ ಹೊತ್ತಲ್ಲಿ ಸಿದ್ಧರಾಮಯ್ಯ ಸರಕಾರ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜಿಲ್ಲೆಯಲ್ಲಿ 10 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಷ್ಟೊಂದು ಉತ್ತಮ ಫಸಲು ಬಂದಿದೆ.

ಬೆಂಗಳೂರಿನ ಜೈಲಿನಲ್ಲಿದ್ದ ಮಗನಿಗೆ ಕೊಡಲು ಖಾಸಗಿ ಭಾಗದಲ್ಲಿ ಮೊಬೈಲ್‌ ಕೊಂಡೊಯ್ದ ತಾಯಿ!

ಜೈಲಿನಲ್ಲಿದ್ದ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್‌ ಕೊಂಡೊಯ್ದ ತಾಯಿ!

Bangalore Central Jail: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಘಟನೆ ನಡೆದಿದೆ. ಜೈಲಿನಲ್ಲಿದ್ದ ಮಗನನ್ನು ನೋಡಲು ತಾಯಿ ಹೋಗಿದ್ದ ವೇಳೆ ಖಾಸಗಿ ಭಾಗದಲ್ಲಿ ಮೊಬೈಲ್​ ಇಟ್ಟುಕೊಂಡು ಹೋಗಿರುವುದು ಪತ್ತೆಯಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Loading...