ಇನ್ನು ಮುಂದೆ ಪೂರ್ವ ಪ್ರಾಥಮಿಕ ಶಾಲೆ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು, ಹಾಲು
Midday meal scheme: ಪೂರ್ವ ಪ್ರಾಥಮಿಕ ತರಗತಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಣೆ ಆಗಿರಲಿಲ್ಲ. ಈಗ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಮೊಟ್ಟೆ, ಬಾಳೆಹಣ್ಣು ನೀಡುವ ಕಾರ್ಯಕ್ರಮವನ್ನು ಡಿಸೆಂಬರ್ 1ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.