ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Mysuru Dasara 2025: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ರಿಂದ ಈ ಬಾರಿಯ ದಸರಾ ಉದ್ಘಾಟನೆ

ಲೇಖಕಿ ಬಾನು ಮುಷ್ತಾಕ್‌ರಿಂದ ಈ ಬಾರಿಯ ದಸರಾ ಉದ್ಘಾಟನೆ

Banu Mushtaq: ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Bengaluru Stampede: ಪೊಲೀಸ್ ಆಯುಕ್ತರ ಮನವಿ ಮೇರೆಗೆ ಆರ್‌ಸಿಬಿ ಕಾರ್ಯಕ್ರಮಕ್ಕೆ ಹೋದೆ: ಡಿಕೆಶಿ

ಪೊಲೀಸ್ ಆಯುಕ್ತರ ಮನವಿ ಮೇರೆಗೆ ಆರ್‌ಸಿಬಿ ಕಾರ್ಯಕ್ರಮಕ್ಕೆ ಹೋದೆ: ಡಿಕೆಶಿ

DK Shivakumar: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸುವಂತೆ ನೀವೇ ಬಂದು ವ್ಯವಸ್ಥೆ ಮಾಡಬೇಕು ಎಂದು ಪೊಲೀಸ್ ಆಯುಕ್ತರು ನನ್ನ ಬಳಿ ಮನವಿ ಮಾಡಿದರು. ಹೀಗಾಗಿ ನಾನು ಕಾರ್ಯಕ್ರಮಕ್ಕೆ ಹೋಗಿದ್ದೂ ನಿಜ, ಅಲ್ಲಿ ಇದ್ದಿದ್ದೂ ನಿಜ, ಆರ್‌ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದು ನಿಜ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Bomb threat: ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ಗೆ ಬಾಂಬ್‌ ಬೆದರಿಕೆ

ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ಗೆ ಬಾಂಬ್‌ ಬೆದರಿಕೆ

ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್‌ ಬೆದರಿಕೆ ಇಮೇಲ್‌ಗಳ ಹಾವಳಿ ಹೆಚ್ಚಿದೆ. ಎಲ್ಲವೂ ಹುಸಿ ಸಂದೇಶಗಳೇ ಆಗಿದ್ದರೂ ರಿಸ್ಕ್‌ ತೆಗೆದುಕೊಳ್ಳಲಾಗದೆ ಕಟ್ಟೆಚ್ಚರ ತೆಗೆದುಕೊಳ್ಳಲಾಗುತ್ತಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಂಡ ಬಳಿಕ ಇಂಥ ಬೆದರಿಕೆ ಕರೆಗಳನ್ನು ಹೆಚ್ಚಿನ ಎಚ್ಚರಿಕೆಯಿಂದ ಪರೀಕ್ಷಿಸಲಾಗುತ್ತಿದೆ.

Pralhad Joshi: ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂಬರ್ ಒನ್ ಮಾಡಿದೆ ಕಾಂಗ್ರೆಸ್ ಸರ್ಕಾರ: ಜೋಶಿ ಆರೋಪ

ರಾಜ್ಯದ ಆರ್ಥಿಕತೆ ಮುಳುಗಿಸುವುದೇ ಕಾಂಗ್ರೆಸ್ ಸರ್ಕಾರದ ಧ್ಯೇಯ: ಜೋಶಿ ಆರೋಪ

Pralhad Joshi: ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಹಾಗೂ ಭ್ರಷ್ಟಾಚಾರ ವಿರೋಧಿ ಎಂದು ಬುರುಡೆ ಬಿಟ್ಟು ಅಧಿಕಾರದ ಚುಕ್ಕಾಣಿ ಹಿಡಿದ ಈ ಕಾಂಗ್ರೆಸ್ ಸರ್ಕಾರ ಈಗ ಅದಕ್ಕೆ ತದ್ವಿರುದ್ಧವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದ ಬೊಕ್ಕಸ ಬರಿದು ಮಾಡಿ ಅಭಿವೃದ್ಧಿ ಶೂನ್ಯವಾಗಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

Mysuru Dasara 2025: ದಸರಾವನ್ನು ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎಂಬುವುದು ಸುಳ್ಳು ಸುದ್ದಿ: ಸಿಎಂ ಸ್ಪಷ್ಟನೆ

ದಸರಾವನ್ನು ಸೋನಿಯಾ ಗಾಂಧಿ ಉದ್ಘಾಟಿಸಲಿದ್ದಾರೆ ಎಂಬುವುದು ಸುಳ್ಳು ಸುದ್ದಿ

Sonia Gandhi: ನಾಡಹಬ್ಬ ದಸರಾವನ್ನು ಸೋನಿಯಾ ಗಾಂಧಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ದಸರಾವನ್ನು ಸೋನಿಯಾ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

K.C.Veerendra Puppy: ಅಕ್ರಮ ಹಣ ವರ್ಗಾವಣೆ ಕೇಸ್‌; ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇಡಿ ವಶಕ್ಕೆ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇಡಿ ವಶಕ್ಕೆ

ED Raid: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಡಿ ದಾಳಿ ನಡೆಸಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಶಾಸಕನಿಗೆ ಸೇರಿದ 16 ಕಡೆ ಇಡಿ ದಾಳಿ ಮಾಡಿದೆ.

Mahesh Shetty Timarodi: ಪೊಲೀಸರ ಕರ್ತವ್ಯಕ್ಕೆ ಅಡ್ಡಿ;  ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ತಿಮರೋಡಿ ಸೇರಿ ಮೂವರ ವಿರುದ್ಧ ಎಫ್‌ಐಆರ್‌

Mahesh Shetty Timarodi: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೀಡಿದ ದೂರಿನ ಮೇರೆಗೆ ಕೇಸ್‌ ದಾಖಲಾಗಿದೆ.

ED Raid: ಕಾಂಗ್ರೆಸ್‌ ನಾಯಕಿ ಕುಸುಮಾಗೆ ಇಡಿ ಶಾಕ್‌; ಬೆಂಗಳೂರಿನ ಮನೆಯಲ್ಲಿ ಶೋಧ

ಕಾಂಗ್ರೆಸ್‌ ನಾಯಕಿ ಕುಸುಮಾಗೆ ಇಡಿ ಶಾಕ್‌; ದಾಖಲೆ ಪರಿಶೀಲನೆ

ED Raid: ಕುಸುಮಾ ಅವರ ಸಹೋದರನ ಜತೆ ಕಾಂಗ್ರೆಸ್‌ ಶಾಸಕ ವಿರೇಂದ್ರ ಪಪ್ಪಿ ವ್ಯವಹಾರ ಹೊಂದಿರುವ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಕುಸುಮಾ ಹನುಮಂತರಾಯಪ್ಪ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾಗಿದ್ದಾರೆ.

M.Chinnaswamy Stadium: ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ ನಡೆಸಲು 17 ಷರತ್ತು!

ಚಿನ್ನಸ್ವಾಮಿಯಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ ನಡೆಸಲು 17 ಷರತ್ತು!

ಕೆಲ ದಿನಗಳ ಹಿಂದೆ ಪೊಲೀಸ್‌ ಇಲಾಖೆ ಕ್ರೀಡಾಂಗಣದ ಪರಿಶೀಲನೆ ನಡೆಸಿದ್ದು, ಹಲವು ಲೋಪಗಳನ್ನು ಪತ್ತೆ ಹಚ್ಚಿದೆ. ಈ ಬಗ್ಗೆ ಕೆಎಸ್‌ಸಿಎಗೆ ಪತ್ರ ಬರೆದಿರುವ ಇಲಾಖೆ, ಪಾರ್ಕಿಂಗ್‌, ವೈದ್ಯಕೀಯ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಸರಿಪಡಿಸುವಂತೆ ಸೂಚಿಸಿ, ಅದಕ್ಕೆ 15 ಇನಗಳ ಗಡುವು ನೀಡಿದೆ ಎಂದು ತಿಳಿದು ಬಂದಿದೆ.

Kalaburagi News: ಹೈದರಾಬಾದ್‌ನಲ್ಲಿ ಕಲಬುರಗಿ ಮೂಲದ ಐವರ ಸಾವು ಪ್ರಕರಣ; ಸ್ವಗ್ರಾಮ ತಲುಪಿದ ಮೃತದೇಹಗಳು

ಹೈದರಾಬಾದ್‌ನಲ್ಲಿ ಐವರ ನಿಗೂಢ ಸಾವು; ಸ್ವಗ್ರಾಮ ತಲುಪಿದ ಮೃತದೇಹಗಳು

Five members found dead: ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ರಂಜೋಳ ಗ್ರಾಮದವರು. ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೈದರಾಬಾದ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತರ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರು ನಿರ್ಧಾರ ಮಾಡಿದ್ದಾರೆ.

Sameer M D: ವಿಚಾರಣೆಗಾಗಿ ಧರ್ಮಸ್ಥಳಕ್ಕೆ ಬರಲು ಸಾಧ್ಯವಿಲ್ಲ; ಪೊಲೀಸರಿಗೆ ಸಮೀರ್‌ ಪತ್ರ, ಮತ್ತೊಂದು  ದೂರು ದಾಖಲು

ವಿಚಾರಣೆಗಾಗಿ ಧರ್ಮಸ್ಥಳಕ್ಕೆ ಬರಲು ಸಾಧ್ಯವಿಲ್ಲ; ಪೊಲೀಸರಿಗೆ ಸಮೀರ್‌ ಪತ್ರ!

Dharmasthala Case: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಸಮೀರ್‌ಗೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯವು ಗುರುವಾರ ನಿರೀಕ್ಷಣಾ ಜಾಮೀನು ನೀಡಿತ್ತು. ಇದೀಗ ಸಮೀರ್‌ ವಿರುದ್ಧ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.

Mahesh Shetty Timarodi: ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಭವಿಷ್ಯ ನಾಳೆ ನಿರ್ಧಾರ

Mahesh Shetty Timarodi: ಬಿ.ಎಲ್.ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಿಂದ ಮಹೇಶ್‌ ಶೆಟ್ಟಿ ಅವರನ್ನು ಬಂಧಿಸಲಾಗಿತ್ತು. ಇವರ ಜಾಮೀನು ಅರ್ಜಿ ವಿಚಾರಣೆ ನಾಳೆ (ಆ.23) ಬ್ರಹ್ಮಾವರ ಕೋರ್ಟ್‌ನಲ್ಲಿ ನಡೆಯಲಿದೆ.

K. C. Veerendra Puppy: ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಸಹೋದರರ ನಿವಾಸದ ಮೇಲೆ ಇಡಿ ದಾಳಿ

ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಹಾಗೂ ಸಹೋದರರ ನಿವಾಸದ ಮೇಲೆ ಇಡಿ ದಾಳಿ

ED raid: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಕೆ.ಸಿ. ವೀರೇಂದ್ರ, ಕೆ.ಸಿ. ನಾಗರಾಜ, ಕೆ.ಸಿ. ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

'POP' Ganesh idols: ಪಿಒಪಿ ಗಣೇಶನ ಮೂರ್ತಿ ತಯಾರಿಸಿದ್ರೆ ಕ್ರಿಮಿನಲ್‌ ಕೇಸ್‌ ಪಕ್ಕಾ! BBMP ಖಡಕ್‌ ಎಚ್ಚರಿಕೆ

ಪಿಒಪಿ ಗಣೇಶನ ಮೂರ್ತಿ ಮಾರಾಟ ಮಾಡಿದ್ರೆ ಕ್ರಿಮಿನಲ್‌ ಕೇಸ್‌!

BBMP issues guidelines to Ganeshotsava: ಬೆಂಗಳೂರು ನಗರದಲ್ಲಿ ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಸೂಚನೆ ನೀಡಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದ್ದಲ್ಲಿ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲಾಗುತ್ತದೆ ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

Traffic fines: ವಾಹನ ಸವಾರರಿಗೆ ಗುಡ್‌ನ್ಯೂಸ್‌.... ಗೂಡ್‌ನ್ಯೂಸ್‌! ಟ್ರಾಫಿಕ್‌ ದಂಡದಲ್ಲಿ ಮತ್ತೆ ಶೇ.50 ಡಿಸ್ಕೌಂಟ್‌

ಟ್ರಾಫಿಕ್‌ ದಂಡದಲ್ಲಿ ಮತ್ತೆ ಶೇ.50 ಡಿಸ್ಕೌಂಟ್‌

ರಾಜ್ಯಾದ್ಯಂತ ಎಲ್ಲಾ ಸಂಚಾರ ಇ-ಚಲನ್‌ ದಂಡಗಳ ಮೇಲೆ 50%ರಿಯಾಯಿತಿ ನೀಡಲು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾಳೆಯಿಂದ ಸೆ.12 ವರೆಗೆ ಎಲ್ಲಾ ಸಂಚಾರ ಇ-ಚಲನ್‌ ದಂಡಗಳ ಮೇಲೆ ಶೇ.50 ರಿಯಾಯಿತಿ ನೀಡಿದ್ದು, ವಾಹನ ಚಾಲಕರು ಮತ್ತ ಮಾಲೀಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಸರ್ಕಾರ ಮನವಿ ಮಾಡಿದೆ.

Karnataka Weather: ಇಂದು ಕರಾವಳಿ ಜತೆಗೆ ಈ ಜಿಲ್ಲೆಗಳಲ್ಲೂ ಸುರಿಯಲಿದೆ ಮಳೆ

ಇಂದು ಕರಾವಳಿ ಜತೆಗೆ ಈ ಜಿಲ್ಲೆಗಳಲ್ಲೂ ಸುರಿಯಲಿದೆ ಮಳೆ

Karnataka Rains: ರಾಜ್ಯದ ವಿವಿಧ ಕಡೆಗಳಲ್ಲಿ ಇಂದು ಕೂಡ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.

Micro Finance: ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ- CM ಸಿದ್ಧರಾಮಯ್ಯ ಘೋಷಣೆ

ಮೈಕ್ರೋ ಫೈನಾನ್ಸ್ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡವರಿಗೆ 5 ಲಕ್ಷ ಪರಿಹಾರ

Microfinance harassment:ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ , ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಕುಟುಂಬಸ್ಥರಿಂದ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Gauribidanur News: ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ : ಜಿ.ಕೆ.ಹೊನ್ನಯ್ಯ,

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ.ಹೊನ್ನಯ್ಯ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ಹಿಂದುಳಿದ ವರ್ಗಗಳ ಬಾಳಿಗೆ ಬೆಳಕಾಗಿದ್ದರು. ಸಮಾಜದ ಎಲ್ಲಾ ಸಮುದಾಯಗಳು ಯಾವ ರೀತಿಯಾಗಿ ಬದುಕುತ್ತಿದ್ದಾರೆ ಎಂದು ಗುರುತಿಸಿ,  ಅವರಿಗೆ ಹೊಸ ಯೋಜನೆಗಳನ್ನು ರೂಪಿಸಿದ್ದರು.

Chinthamani News: ಎಲ್ಲಿಯೂ ಕಾಣದ ರ‍್ಯಾಂಪ್ ವ್ಯವಸ್ಥೆ ; ಅಸಡ್ಡೆ ಪ್ರಶ್ನಿಸಿ ಮುಖಂಡ ಕಿರಣ್ ನಾಯಕ್ ಆಕ್ರೋಶ

ಎಲ್ಲಿಯೂ ಕಾಣದ ರ‍್ಯಾಂಪ್ ವ್ಯವಸ್ಥೆ

ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ರ‍್ಯಾಂಪ್ ವ್ಯವಸ್ಥೆ ಇರಬೇಕು. ಇದರಿಂದಾಗಿ ದೈಹಿಕ ನ್ಯೂನತೆಯಿಂದ ಕೂಡಿದ ಅಂಗವಿಕಲರು ಸರಾಗವಾಗಿ ಕಚೇರಿಗಳನ್ನು ತಲುಪಲು ಸಾಧ್ಯ ವಾಗುತ್ತದೆ. ಆದರೆ,ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಈ ಸೌಲಭ್ಯವೇ ಇಲ್ಲ.ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ರ‍್ಯಾಂಪ್ ವ್ಯವಸ್ಥೆ ಚಾಲ್ತಿಗೆ ಬರುತ್ತದೆ.

Chikkaballapur News: ಆಹಾರ ಉದ್ದಿಮೆದಾರರೆಲ್ಲರೂ  ಸುರಕ್ಷತೆ ಸಲುವಾಗಿ ಪರವಾನಗಿ ಕಡ್ಡಾಯ : ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ

ಆಹಾರ ಉದ್ದಿಮೆದಾರರೆಲ್ಲರೂ  ಸುರಕ್ಷತೆ ಸಲುವಾಗಿ ಪರವಾನಗಿ ಕಡ್ಡಾಯ

ಜಿಲ್ಲೆಯ ಎಲ್ಲಾ ಹೋಟೆಲ್ ಗಳು, ರೆಸ್ಟೋರೆಂಟ್ ಗಳು, ಬೇಕರಿಗಳು, ಕೇಟರರ್ಸ್ ಹಾಗೂ ಬೀದಿಬದಿ ಆಹಾರ ಉದ್ದಿಮೆದಾರರು ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ವತಿಯಿಂದ ನೋಂದಣಿ, ವ್ಯಾಪಾರ ಪರವಾನಗಿ ಹಾಗೂ ಟ್ರೇಡ್ ಪಡೆಯುವುದು ಕಡ್ಡಾಯ ವಾಗಿರುತ್ತದೆ ಹಾಗೂ ಕಾಲಕಾಲಕ್ಕೆ ನವೀಕರಣ ಮಾಡಿಕೊಳ್ಳಬೇಕು.

Sudha Murty: ಲೋಥಲ್‌ನಿಂದ ಉತ್ಖನನ ಮಾಡಲಾದ ಸಾಂಪ್ರದಾಯಿಕ ಕಲಾಕೃತಿಗಳ ಚಿತ್ರ ಹಂಚಿಕೊಂಡ ಸುಧಾಮೂರ್ತಿ

ಪುರಾತನ ಕಿಲಾದಲ್ಲಿ ಸುಧಾಮೂರ್ತಿ

ಯಾವುದೇ ಪ್ರದೇಶಕ್ಕೆ ಹೋಗಬೇಕಾದರೂ ಲೇಖಕಿ, ಇನ್ಫೋಸಿಸ್‌ ಫೌಂಡೇಶನ್‌ನ ಸ್ಥಾಪಕ ಅಧ್ಯಕ್ಷೆ ಸುಧಾ ಮೂರ್ತಿ ಸಾಕಷ್ಟು ಅಧ್ಯಯನ ಮಾಡುತ್ತಾರೆ. ಇತ್ತೀಚೆಗೆ ಇವರು ಸಿಂಧೂ ಕಣಿವೆ ನಾಗರಿಕತೆಯ ಪ್ರಮುಖ ನಗರವಾದ ಲೋಥಲ್‌ನಿಂದ ಉತ್ಖನನ ಮಾಡಲಾದ ಸಾಂಪ್ರದಾಯಿಕ ಕಲಾಕೃತಿಗಳನ್ನು ನೋಡಲು ದೆಹಲಿಯ ಪುರಾತನ ಕಿಲಾಕ್ಕೆ ಭೇಟಿ ನೀಡಿದರು.

ಅಡಕೆ ಬೆಳೆಗಾರರ ಸಂಕಷ್ಟ; ಜೋಶಿ ನೇತೃತ್ವದಲ್ಲಿ ರಾಜ್ಯ ಸಂಸದರ ತಂಡದಿಂದ ಕೇಂದ್ರ ಕೃಷಿ ಸಚಿವರ ಭೇಟಿ

ಅಡಕೆ ಬೆಳೆಗಾರರ ಸಂಕಷ್ಟ; ಜೋಶಿ ನೇತೃತ್ವದಲ್ಲಿ ಕೇಂದ್ರ ಕೃಷಿ ಸಚಿವರ ಭೇಟಿ

Pralhad Joshi: ಅಡಕೆ ಬೆಳೆಗಾರರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ನೇತೃತ್ವದಲ್ಲಿ ರಾಜ್ಯ ಸಂಸದರ ತಂಡ ಗುರುವಾರ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚವ್ಹಾಣ್‌ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದೆ.

ರಕ್ತದಾನ ಮಾಡುವುದು ಸಂಜೀವಿನಿಗೆ ಸಮಾನ: ಪ್ರಾಂಶುಪಾಲ ಇಂತಿಯಾಜ್ ಅಭಿಮತ

ರಕ್ತದಾನ ಮಾಡುವುದು ಸಂಜೀವಿನಿಗೆ ಸಮಾನ

ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರು ತ್ತದೆ. ದೇಶದಲ್ಲಿ ಪ್ರತಿವರ್ಷ ೪೧ ದಶಲಕ್ಷ ಯುನಿಟ್ ರಕ್ತದ ಕೊರತೆ ಎದುರಾಗುತ್ತಿದೆ. ಸಮಯ ಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತದ ಗಾಯಾಳು ಗಳು ಮೃತಪಡುತ್ತಿದ್ದಾರೆ. ಅಮೂಲ್ಯವದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು

CN Ashwath Narayan: ಹಿಂದೂಗಳ ಹಬ್ಬಕ್ಕೆ ಕಾಂಗ್ರೆಸ್‌ ಸರ್ಕಾರದಿಂದ ಅಡ್ಡಿ: ಅಶ್ವತ್ಥ ನಾರಾಯಣ್‌ ಆಕ್ರೋಶ

ತೆರಿಗೆ ಹಣವನ್ನು ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ: ಅಶ್ವತ್ಥ ನಾರಾಯಣ್‌

ಹಿಂದೂ ಸಮಾಜದ ಯಾವುದೇ ಹಬ್ಬಗಳು ಬಂದಾಗ ನಮ್ಮ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿರುವುದು ಇದು ಒಂದೇ ಬಾರಿ ಅಲ್ಲ. ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗಿ ಉದ್ಘಾಟನೆಯ ಸಂದರ್ಭದಲ್ಲೂ ಮನಬಂದಂತೆ ಮಾತನಾಡಿದ್ದರು. ಸನಾತನ ಧರ್ಮದ ವಿರುದ್ಧವಾಗಿ ಮಾತನಾಡಿದ್ದರು. ಗಣೇಶ ಚತುರ್ಥಿ ಸಂದರ್ಭದಲ್ಲಿ ಗಣೇಶನ ವಿಗ್ರಹವನ್ನೇ ಬಂಧಿಸಿರುವುದನ್ನು ನಾವು ನೋಡಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥ ನಾರಾಯಣ್ ಟೀಕಿಸಿದ್ದಾರೆ.

Loading...