ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಮೇ31 ರಂದು ಗೋಟಕನಾಪುರ ಗ್ರಾಮದಲ್ಲಿ ಕೆರೆ ಹಬ್ಬ

ಮೇ31 ರಂದು ಗೋಟಕನಾಪುರ ಗ್ರಾಮದಲ್ಲಿ ಕೆರೆ ಹಬ್ಬ

ಗೌರಿಬಿದನೂರು ಸೇವಾ ಪ್ರತಿಷ್ಠಾನದ ವತಿಯಿಂದ ಇದುವರೆಗೂ 16 ಕೆರೆಗಳನ್ನು ಪುನಶ್ಚೇತನ ಗೊಳಿಸಲಾಗಿದೆ. ನಮ್ಮ ತಾಲೂಕಿನವರೇ ಆದ ಹಿರಿಯ ಶ್ರೇಣಿಯ ಕೆ.ಎ.ಎಸ್ ಅಧಿಕಾರಿ ಬಿ.ಎನ್. ವರಪ್ರಸಾದ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯ ನಡೆದಿದೆ.  ಇದರಿಂದಾಗಿ ಒಟ್ಟಾರೆ ಐದುನೂರ ಎಪತೈದು ಎಕರೆಗಳಷ್ಟು ಕೆರೆ ಪ್ರದೇಶವು ಸ್ವಚ್ಛಗೊಂಡಿದೆ,

ISRO: 73ನೇ ದಿನದ ರೈತರ ಹೋರಾಟಕ್ಕೆ ಇಸ್ರೋ ನೌಕರರ ಸಾಥ್ : ಅನ್ನದಾತರನ್ನು ಒಕ್ಕಲೆಬ್ಬಿಸದಂತೆ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಆಗ್ರಹ

73ನೇ ದಿನದ ರೈತರ ಹೋರಾಟಕ್ಕೆ ಇಸ್ರೋ ನೌಕರರ ಸಾಥ್

ಸರಕಾರ ಕೆಐಎಡಿಬಿ ಮುಖಾಂತರ ಭೂಸ್ವಾಧೀನ ಮಾಡಲು ಹೊರಟಿರುವುದು ದುರಾಡಳಿತದ ಪರಮಾ ವಧಿ. ಅತ್ಯಂತ ಫಲವತ್ತಾದ ಭೂಮಿ ಇದಾಗಿದೆ. ರಾಜಕೀಯ ದುರುದ್ದೇಶ ಹೊಂದಿರುವ ಈ ಬೃಹತ್ ಭೂಕಬಳಿಕೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಸ್ಥಳಕ್ಕೆ ಸೌಜನ್ಯಕ್ಕಾದರೂ ಸರಕಾರದ ಪ್ರತಿನಿಧಿಗಳು ಬಾರದಿರುವುದು ನೋವಿನ ಸಂಗತಿ

ಸಹಕಾರದಿಂದ ಜಲ ವಿವಾದ ಬಗೆಹರಿಸಿ: ಮೇಕೆದಾಟು ಯೋಜನೆ ವಿಚಾರದಲ್ಲಿ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ

ಮೇಕೆದಾಟು ವಿವಾದದ ನಡುವೆ ಜಲ ಸಮಸ್ಯೆ ಪರಿಹಾರಕ್ಕೆ ಮೋದಿ ಸಲಹೆ

Mekedatu Issue: ಮೇಕೆದಾಟು ಯೋಜನೆ ತಡೆಯುವಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಪತ್ರ ಬರೆದಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ರಾಜ್ಯಗಳಿಗೆ ಅಂತಾರಾಜ್ಯ ಜಲ ವಿವಾದಗಳನ್ನು ಸಹಕಾರ ಮತ್ತು ತಂತ್ರಜ್ಞಾನ ಆಧಾರಿತ ಮೇಲ್ವಿಚಾರಣೆಯ ಮೂಲಕ ಬಗೆ ಹರಿಸಿಕೊಳ್ಳುವಂತೆ ಕರೆ ನೀಡಿದ್ದಾರೆ.

ಧಾರಾಕಾರ ಮಳೆಗೆ ಬೆಂಗಳೂರು ತತ್ತರ: ನಾಳೆಯೂ ಗುಡುಗು ಸಹಿತ ಸುರಿಯಲಿದೆ ವರ್ಷಧಾರೆ

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Bengaluru Rains: ಗುರುವಾರ ಸಂಜೆ ಬೆಂಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ವರುಣನ ಆಗಮನವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಜೋರಾಗಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡಿದರು. ಶುಕ್ರವಾರವೂ ಮಳೆ ಮುಂದುವರಿಯಲಿದೆ.

ದೇಶದ ಪಡಿತರ ವ್ಯವಸ್ಥೆಗೆ 'ಸಾರ್ಥಕ್ ಪಿಡಿಎಸ್' ಯೋಜನೆ: ಕೇಂದ್ರದಿಂದ 25,530 ಕೋಟಿ ರುಪಾಯಿ ಅನುದಾನ

ದೇಶದ ಪಡಿತರ ವ್ಯವಸ್ಥೆಗೆ 'ಸಾರ್ಥಕ್ ಪಿಡಿಎಸ್' ಯೋಜನೆ

Pralhad Joshi: 16ನೇ ಹಣಕಾಸು ಆಯೋಗದ ಅವಧಿಯಲ್ಲಿ ‘ಸಾರ್ಥಕ್ ಪಿಡಿಎಸ್’ಗಾಗಿ ಕೇಂದ್ರ ಸರ್ಕಾರ ತನ್ನ ಪಾಲಿನ ₹ 25,530 ಕೋಟಿ ಅನುದಾನಕ್ಕೆ ಅನುಮೋದನೆ ನೀಡಿದೆ. ದೇಶದ ಪಡಿತರ ವ್ಯವಸ್ಥೆಯಲ್ಲಿ ಇದೊಂದು ಸುಧಾರಿತ ತಂತ್ರಜ್ಞಾನದ ಯೋಜನೆಯಾಗಿ 2031ರವರೆಗೆ ಮುಂದುವರಿಯಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಹವಾಮಾನ ವೈಪರೀತ್ಯ:  ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್‌

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ಲ್ಯಾಂಡಿಂಗ್‌

Siddaramaiah: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ ದೆಹಲಿಯತ್ತ ಹೊರಟಿದ್ದ ಸಿದ್ದರಾಮಯ್ಯ ಅವರಿದ್ದ ವಿಶೇಷ ವಿಮಾನ ಜೈಪುರದಲ್ಲಿ ಇಳಿದಿದೆ. ಹವಾಮಾನ ವೈಪರೀತ್ಯದ ಕಾರಣ ವಿಮಾನವನ್ನು ಜೈಪುರದಲ್ಲಿ ಲ್ಯಾಂಡಿಂಗ್‌ ಮಾಡಲಾಗಿದೆ. ವಿಮಾನದಲ್ಲಿದ್ದವರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಸಿಎಂ ರಾಜಿನಾಮೆ ಒಬಿಸಿಗೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ: ಪ್ರಲ್ಹಾದ್‌ ಜೋಶಿ ವ್ಯಂಗ್ಯ

ಸಿಎಂ ರಾಜಿನಾಮೆ ಒಬಿಸಿಗೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ: ಜೋಶಿ

Pralhad Joshi: ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅವಮಾನಿಸಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೆಪಕ್ಕಷ್ಟೇ ಒಬಿಸಿ ಜಪ ಮಾಡುತ್ತದೆ. ಆದರೆ, ನಡೆದುಕೊಳ್ಳುವ ರೀತಿಯೇ ಬೇರೆ. ಒಬಿಸಿ ವರ್ಗದವರನ್ನು ಯಾವತ್ತೂ ಕಡೆಗಣಿಸುತ್ತಲೇ ಇದೆ ಎಂದು ದೂರಿದ್ದಾರೆ.

ʼʼಮುಂದೆ ಇದೆ ಭಾರಿ ಸವಾಲು, ಎಚ್ಚರಿಕೆ ಅಗತ್ಯʼʼ:  ಡಿ.ಕೆ. ಶಿವಕುಮಾರ್‌ಗೆ ಸಿಎಂ ಪಟ್ಟ ದೊರೆಯುತ್ತಿದ್ದಂತೆ ಸ್ಫೋಟಕ ಭವಿಷ್ಯ ನುಡಿದ  ಕರಿಬಸವೇಶ್ವರ ಸ್ವಾಮೀಜಿ

ಡಿಕೆಶಿ ಸಿಎಂ ಪಟ್ಟ ದೊರೆಯುತ್ತಿದ್ದಂತೆ ಸ್ಫೋಟಕ ಭವಿಷ್ಯ ನುಡಿದ ಅಜ್ಜಯ್ಯ

DK Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸದ್ಯದಲ್ಲೇ ಸಿಎಂ ಪಟ್ಟಕ್ಕೆ ಏರಲಿದ್ದಾರೆ. ಹಾಗಂತ ಡಿಕೆಶಿ ಅವರ ಮುಂದಿನ ಹಾದಿ ಹೂವಿನ ಹಾಸಲ್ಲ. ಕಲ್ಲು-ಮುಳ್ಳುಗಳ, ಸವಾಲಿನ ಹಾದಿಯೇ ಮುಂದಿದೆ ಎಂದು ಡಿಕೆಶಿ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಹೇಳಿದ್ದಾರೆ. ಸದ್ಯ ಈ ಭವಿಷ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ.

''ನಿಮ್ಮ ಪ್ರೀತಿಗೆ ಧನ್ಯವಾದʼʼ: ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಭಾವುಕ ಪೋಸ್ಟ್‌ ಹಂಚಿಕೊಂಡ ಸಿದ್ದರಾಮಯ್ಯ

ಭಾವುಕ ಪೋಸ್ಟ್‌ ಹಂಚಿಕೊಂಡ ಸಿದ್ದರಾಮಯ್ಯ

Siddaramaiah Resigns: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮಧ್ಯೆ ಎಕ್ಸ್‌ನಲ್ಲಿ ಭಾವುಕ ಪೋಸ್ಟ್‌ ಹಂಚಿಕೊಂಡು, ʼʼನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿʼʼ ಎಂದಿದ್ದಾರೆ.

ವಿದಾಯ ಭಾಷಣದಲ್ಲಿ ಮೇರು ನಟ ಡಾ. ರಾಜ್‌ಕುಮಾರ್ ಸ್ಮರಿಸಿದ ಸಿದ್ದರಾಮಯ್ಯ; ಹೇಳಿದ್ದೇನು?

ಮೇರು ನಟ ಡಾ. ರಾಜ್‌ಕುಮಾರ್ ಸ್ಮರಿಸಿದ ಸಿದ್ದರಾಮಯ್ಯ

Siddaramaiah Resigns: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಲವು ವಿಚಾರಗಳಲ್ಲು ಹಂಚಿಕೊಂಡಿದ್ದಾರೆ. ʼʼಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು ʼಅಭಿಮಾನಿ ದೇವರು’ʼ ಎಂದು ಕರೆಯುತ್ತಿದ್ದರು. ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ʼಮತದಾರರೇ ದೇವರುʼʼ ಎಂದಿದ್ದಾರೆ.

'ʼಮುಂದಿನ 8 ವರ್ಷ ಡಿಕೆಶಿಯೇ ಸಿಎಂ": ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ

8 ವರ್ಷ ಡಿಕೆಶಿಯೇ ಸಿಎಂ ಎಂದ ರಾಜಗುರು ದ್ವಾರಕನಾಥ್ ಗುರೂಜಿ

DK Shivakumar: ಸಿದ್ದರಾಮಯ್ಯ ಮುಖ್ಯಮಂತ್ರಿ ಹಿದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಡಿಕೆಶಿ ಅವರ ಪರಮಾಪ್ತ ಗುರು ರಾಜಗುರು ದ್ವಾರಕನಾಥ್ ಗುರೂಜಿ ಅವರ ಭವಿಷ್ಯ ವೈರಲ್‌ ಆಗಿದೆ. ʼʼಮುಂದಿನ 8 ವರ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರನ್ನು ಅಲ್ಲಾಡಿಸಲು ಯಾರಿಗೂ ಆಗಲ್ಲʼʼ ಎಂದು ಅವರು ಹೇಳಿದ್ದಾರೆ.

“ನಾನು ನಿಮಗೆ ರೇಗಿದ್ದರೆ ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ”: ಸಚಿವರಿಗೆ ಸಿದ್ದರಾಮಯ್ಯ ಭಾವುಕ ವಿದಾಯ

ಸಚಿವರಿಗೆ ಸಿದ್ದರಾಮಯ್ಯ ಭಾವುಕ ವಿದಾಯ

Siddaramaiah’s emotional farewell: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳನ್ನು ಉದ್ದೇಶಿಸಿ ಭಾವನಾತ್ಮಕ ಭಾಷಣ ಮಾಡಿದರು. ಕಳೆದ ಎರಡು ದಶಕಗಳಲ್ಲಿ ತಮ್ಮ ರಾಜಕೀಯ ಪ್ರಯಾಣ ಮತ್ತು ಸಚಿವರೊಂದಿಗಿನ ಒಡನಾಟವನ್ನು ಅವರು ಸ್ಮರಿಸಿದರು. ತಮ್ಮ ಹಿಂದಿನ ಕೋಪ ಅಥವಾ ಆಕ್ರೋಶಗಳನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದಾರೆ.

Siddaramaiah Resigns: ʼʼರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲʼʼ: ಸಿದ್ದರಾಮಯ್ಯ ಸ್ಪಷ್ಟನೆ

ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರ ಸಿದ್ದರಾಮಯ್ಯ?

Siddaramaiah: ಗುರುವಾರ (ಮೇ 28) ಲೋಕ ಭವನಕ್ಕೆ ತೆರಳಿದ ಸಿದ್ದರಾಮಯ್ಯ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಬಳಿಕ ಭಾವುಕರಾಗಿ ವಿದಾಯ ಭಾಷಣ ಮಾಡಿ ನೆರವಾದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಈ ವೇಳೆ ರಾಷ್ಟ್ರ ರಾಜಕೀಯಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

ಪಶ್ಚಿಮ ಬಂಗಾಳ ಚುನಾವಣಾ ಎಫೆಕ್ಟ್‌; 10 ಸಾವಿರ ಕಾರ್ಮಿಕರು ಊರಿಗೆ,   ಪಿಂಕ್-ಬ್ಲೂ ಲೈನ್ ಕಾಮಗಾರಿ ಸ್ಥಗಿತ

10 ಸಾವಿರ ಕಾರ್ಮಿಕರು ಊರಿಗೆ, ಪಿಂಕ್-ಬ್ಲೂ ಲೈನ್ ಕಾಮಗಾರಿ ಸ್ಥಗಿತ

ಬಹು ನಿರೀಕ್ಷಿತ ನಮ್ಮ ಮೆಟ್ರೋ (BMRCL) ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಗಳ ಉದ್ಘಾಟನೆ ವಿಳಂಬವಾಗಲಿದೆ. ಪಶ್ಚಿಮ ಬಂಗಾಳದ ಚುನಾವಣೆಯ ಹಿನ್ನೆಲೆ ಮತದಾನ ಮಾಡಲು ಊರಿಗೆ ತೆರಳಿದ್ದ 10 ಸಾವಿರಕ್ಕೂ ಹೆಚ್ಚು ಬಂಗಾಳಿ ಕಾರ್ಮಿಕರು ಇನ್ನು ಬೆಂಗಳೂರಿಗೆ ಮರಳಿ ಬಾರದ ಹಿನ್ನೆಲೆಯಲ್ಲಿ ಮೆಟ್ರೋ ಕಾಮಗಾರಿಗಳು ನಿಧಾನಗೊಂಡಿದೆ.

ʼʼನಾನು ಮಾತು ತಪ್ಪುವ ಕೆಲಸ ಮಾಡಿಲ್ಲʼʼ: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ ಭಾವುಕ

ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ ಭಾವುಕ

Siddaramaiah Resigns: ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರ (ಮೇ 28) ಲೋಕ ಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ ಪ್ರಭು ಶಂಕರ್‌ ಅವರಿಗೆ ಸಿದ್ದರಾಮಯ್ಯ ರಾಜೀನಾಮೆ ಪತ್ರ ಹಸ್ತಾಂತರಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಮಾತನಾಡಿದರು.

ರೇಷ್ಮೆ ಉತ್ಪಾದನೆ: ತುಮಕೂರು ರಾಜ್ಯದಲ್ಲೇ ಪ್ರಥಮ

ರೇಷ್ಮೆ ಉತ್ಪಾದನೆ: ತುಮಕೂರು ರಾಜ್ಯದಲ್ಲೇ ಪ್ರಥಮ

ಮಾ 2020ರ ಅಂತ್ಯಕ್ಕೆ ಲಭ್ಯವಿರುವ ದತ್ತಾಂಶಗಳ ಪ್ರಕಾರ, ಜಿಲ್ಲೆಯ ರೈತರು ರೇಷ್ಮೆ ಕೃಷಿಯನ್ನು ಒಂದು ಲಾಭದಾಯಕ ಉದ್ದಿಮೆಯಾಗಿ ಸ್ವೀಕರಿಸಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 10223 ಹೆಕ್ಟೇರ್ ಪ್ರದೇಶದಲ್ಲಿ ಹಿಪ್ಪುನೇರಳೆ ಬೆಳೆಯುವ ಗುರಿಯನ್ನು ತಲುಪಲಾಗಿದ್ದು, ಹಸಿರು ಹೊದಿಕೆಯಂತೆ ಕಾಡುತ್ತಿರುವ ಹಿಪ್ಪು ನೇರಳೆ ತೋಟಗಳು ಜಿಲ್ಲೆಯ ಆರ್ಥಿಕತೆಗೆ ಬಲ ತುಂಬುತ್ತಿವೆ.

ಕರ್ನಾಟಕದಲ್ಲಿ ಕಿಂಗ್‌ಫಿಷರ್ ಪೋರ್ಟ್‌ಫೋಲಿಯೊ ಬೆಲೆ ಇಳಿಕೆ; ರಾಜ್ಯ ಅಬಕಾರಿ ನೀತಿ ಬದಲಾವಣೆಯ ಬಳಿಕ ಯುನೈಟೆಡ್ ಬ್ರೂವರೀಸ್ ಘೋಷಣೆ

ಕರ್ನಾಟಕದಲ್ಲಿ ಕಿಂಗ್‌ಫಿಷರ್ ಪೋರ್ಟ್‌ಫೋಲಿಯೊ ಬೆಲೆ ಇಳಿಕೆ

“ಬಿಯರ್ ಮೇಲಿನ ತೆರಿಗೆ ಇಳಿಕೆಗೆ ನೆರವಾದ ಎಐಬಿ ಆಧಾರಿತ ತೆರಿಗೆ ವ್ಯವಸ್ಥೆ ಸೇರಿದಂತೆ ಕರ್ನಾಟಕ ಸರ್ಕಾರ ಕೈಗೊಂಡಿರುವ ಇತ್ತೀಚಿನ ಅಬಕಾರಿ ಸುಧಾರಣೆಯನ್ನು ನಾವು ಸ್ವಾಗತಿಸುತ್ತೇವೆ. ವಿಭಾಗದ ದೀರ್ಘಕಾಲೀನ ಬೆಳವಣಿಗೆಗೆ ಬದ್ಧವಾಗಿರುವ ಸಂಸ್ಥೆಯಾಗಿ, ಇದರ ಲಾಭವನ್ನು ಗ್ರಾಹಕರಿಗೆ ನೀಡುತ್ತಿರು ವುದು ಸಂತಸದ ವಿಷಯ

ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

Karnataka Leadership Change: ಬಹುದೊಡ್ಡ ರಾಜಕೀಯ ಸ್ಥಿತ್ಯಂತರಕ್ಕೆ ರಾಜ್ಯ ಸಾಕ್ಷಿಯಾಗಿದ್ದು, 3 ವರ್ಷ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್‌ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಲೋಕ ಭವನದಲ್ಲಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿ ಪ್ರಭು ಶಂಕರ್‌ ಅವರಿಗೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರು.

BJP Karnataka: ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026: ಸೊರಬದಲ್ಲಿ ಬಿ.ವೈ. ರಾಘವೇಂದ್ರ ಚಾಲನೆ

ಸೊರಬದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ

ʼಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026ʼರ ಸೊರಬ ಮಂಡಲ ಪ್ರಶಿಕ್ಷಣ ವರ್ಗದ ತರಬೇತಿ ಶಿಬಿರವು ಸೊರಬದ ಗಿರಿಜಾ ಶಂಕರ ಸಭಾಭವನದಲ್ಲಿ ಗುರುವಾರ ಜರುಗಿತು. ಬಿಜೆಪಿ ಶಿವಮೊಗ್ಗ ಜಿಲ್ಲೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತರಬೇತಿ ಶಿಬಿರವನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.

"ಡಿಕೆ ಶಿವಕುಮಾರ್‌ ಮುಂದಿನ ಸಿಎಂ"; ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಣ್ಣೀರು!

ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಕಣ್ಣೀರು!

ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆಗೆ ಇಂದು ಅಧಿಕೃತವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಲಿದ್ದಾರೆ.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ರಾಜೀನಾಮೆ ಹೇಗೆ? ಸಂವಿಧಾನ ಏನು ಹೇಳುತ್ತದೆ?

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಸಿಎಂ ರಾಜೀನಾಮೆ ಹೇಗೆ?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದೀಗ ನಡುವೆಯೇ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿಢೀರ್ ಮುಂಬೈಗೆ ತೆರಳಿದ್ದಾರೆ. ಸಂಬಂಧಿಕರ ಅನಾರೋಗ್ಯದ ಕಾರಣ ನೀಡಿ ಮುಂಬೈಗೆ ತೆರಳಿದ್ದಾರೆ.

ಶ್ರುತಿ ಸಿ. ಅವರಿಗೆ ಮೈಸೂರು ವಿ.ವಿ.ಯಿಂದ ಪಿಎಚ್.ಡಿ. ಪದವಿ

ಶ್ರುತಿ ಸಿ. ಅವರಿಗೆ ಮೈಸೂರು ವಿ.ವಿ.ಯಿಂದ ಪಿಎಚ್.ಡಿ. ಪದವಿ

ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ಶ್ರುತಿ ಸಿ. ಅವರಿಗೆ “ಸಂಘಟನಾತ್ಮಕ ಸಂಸ್ಕೃತಿ, ನೌಕರರ ಬದ್ಧತೆ ಮತ್ತು ಕಾರ್ಯಕ್ಷಮತೆ – ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತು ಖಾಸಗಿ ವಲಯದ ಬ್ಯಾಂಕುಗಳ ತುಲನಾತ್ಮಕ ಅಧ್ಯಯನ” ಕುರಿತ ಮಹಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪ್ರದಾನ ಮಾಡಿದೆ.

CPI Self Harming: ಎಸ್‌ಡಿಆರ್‌ಎಫ್ʼಯ ಸಿಪಿಐ ಶ್ರೀಶೈಲ ಚೌಗಲಾ ನೇಣು ಬಿಗಿದು ಆತ್ಮಹತ್ಯೆ

ಎಸ್‌ಡಿಆರ್‌ಎಫ್ʼಯ ಸಿಪಿಐ ಶ್ರೀಶೈಲ ಚೌಗಲಾ ನೇಣು ಬಿಗಿದು ಆತ್ಮಹತ್ಯೆ

ಚೌಗಲಾ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಅವರು ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಅಹಿಂದ ನಾಯಕ, ಕರ್ನಾಟಕದ ದೀರ್ಘಾವಧಿಯ ಸಿಎಂ ಸಿದ್ದರಾಮಯ್ಯ: ನಡೆದು ಬಂದ ಹಾದಿ ಹೀಗಿತ್ತು

ಕರ್ನಾಟಕದ ದೀರ್ಘಾವಧಿಯ ಸಿಎಂ ಸಿದ್ದರಾಮಯ್ಯ: ನಡೆದು ಬಂದ ಹಾದಿ

Siddaramaiah: ಅತಿ ಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್‌ ಮಂಡಿಸಿದ ಜನಪ್ರತಿನಿಧಿ ಎಂಬ ದಾಖಲೆಗೆ ಪಾತ್ರರಾದ ಸಿದ್ದರಾಮಯ್ಯ ಸದ್ಯ ಸಿಎಂ ಪಟ್ಟದಿಂದ ಕೆಳಗೆ ಇಳಿದಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿದ್ದು, ಹಲವು ದಿನಗಳಿಂದ ನಡೆಯುತ್ತಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಅಹಿಂದ ಪ್ರಬಲ ನಾಯಕನಾಗಿ ಬೆಳೆದ ಸಿದ್ದರಾಮಯ್ಯ ಅವರ ನಡೆದು ಬಂದ ಹಾದಿ ಹೇಗಿತ್ತು ಎನ್ನುವ ವಿವರ ಇಲ್ಲಿದೆ.

Loading...