ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

16 ಔಷಧ ಅಂಗಡಿಗಳ ಪರವಾನಗಿ ರದ್ದು

16 ಔಷಧ ಅಂಗಡಿಗಳ ಪರವಾನಗಿ ರದ್ದು

ನಕಲಿ ಔಷಧಗಳು ಯಾವ ಆಸ್ಪತ್ರೆಗಳು ಹಾಗೂ ಫಾರ್ಮಸಿಗಳಿಗೆ ಪೂರೈಕೆಯಾಗಿದ್ದವು ಎಂಬ ಕುರಿತು ತನಿಖೆ ಮುಂದುವರಿದಿರುವ ಬೆನ್ನ, ಇಲಾಖೆಯು ಹಲವು ಸಗಟು ಮತ್ತು ಚಿಲ್ಲರೆ ಔಷಧ ಮಾರಾಟ ಮಳಿಗೆಗಳ ಪರವಾನಗಿಯನ್ನು ರದ್ದುಪಡಿಸಿದ್ದು, ಇನ್ನೂ ಕೆಲವು ಸಂಸ್ಥೆಗಳ ಲೈಸೆನ್ಸ್‌ಗಳನ್ನು ಅಮಾನತು ಗೊಳಿಸಿದೆ.

Kasturi Rangan Report: ಕಸ್ತೂರಿ ರಂಗನ್ ವರದಿ: ಸರ್ವಪಕ್ಷ ನಿಯೋಗ ?

ಕಸ್ತೂರಿ ರಂಗನ್ ವರದಿ: ಸರ್ವಪಕ್ಷ ನಿಯೋಗ ?

ಮಲೆನಾಡು ಹಾಗೂ ಕರಾವಳಿ ಭಾಗದವರ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿ ರಂಗನ್ ವರದಿ ಯನ್ನು ವಿರೋಧಿಸಿ ಕೇಂದ್ರ ಸರಕಾರದ ಬಳಿ ಸರ್ವಪಕ್ಷ ನಿಯೋಗದೊಂದಿಗೆ ತೆರಳಿ ಮನವಿ ಸಲ್ಲಿಸುವ ಸುಳಿವನ್ನು ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಉಡುಪಿ, ತೀರ್ಥಹಳ್ಳಿ ಹಾಗೂ ಸಕಲೇಶಪುರದಲ್ಲಿ ರೈತರು, ಸ್ಥಳೀಯರು ಹಾಗೂ ವಿವಿಧ ಸಂಘಟನೆ ಗಳೊಂದಿಗೆ ಸಂವಾದ ನಡೆಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯ ಸಂಗ್ರಹಿಸಿದ್ದಾರೆ

ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ : ಬರ ವಿಷಯವೇ ಬಿಜೆಪಿಗೆ ಪ್ರತ್ಯಸ್ತ್ರ: ಇಂದಿನಿಂದ ವಿಶೇಷ ಅಧಿವೇಶನ

ಇಂದಿನಿಂದ ವಿಶೇಷ ಅಧಿವೇಶನ

ಮಳೆಗಾಲದ ಅಧಿವೇಶನದಲ್ಲಿ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಚರ್ಚಿಸಬೇಕಿತ್ತಾ ದರೂ, ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಇಡೀ ಅಧಿವೇಶನದುದ್ದಕ್ಕೂ ಪ್ರತಿಭಟನೆ ನಡೆಸಿದ್ದ ರಿಂದ ಯಾವುದೇ ಚರ್ಚೆ ಸಾಧ್ಯವಾಗಲಿಲ್ಲ. ಇನ್ನು ಸೆ.27ರೊಳಗೆ ಕಸ್ತೂರಿ ರಂಗನ್ ಕರಡು ಅಧಿಸೂಚನೆ ವಿಷಯದಲ್ಲಿ ಸರಕಾರದ ತೀರ್ಮಾನ ಕೇಂದ್ರಕ್ಕೆ ಸಲ್ಲಿಸಬೇಕಿರುವುದರಿಂದ ಈ ವಿಷಯ ದಲ್ಲಿ ಪ್ರತಿಪಕ್ಷಗಳೊಂದಿಗೆ ಚರ್ಚಿಸಿ, ವಿಶ್ವಾಸಕ್ಕೆ ಪಡೆಯುವ ಕಾರಣಕ್ಕೆ ಈ ವಿಶೇಷ ಅಧಿವೇಶನ ಕರೆಯಲಾಗಿದೆ.

Century-old banyan tree topples: ಭಾರಿ ಗಾಳಿ-ಮಳೆಗೆ ಧರೆಗುರುಳಿದ ಶತಮಾನದ ಆಲದ ಮರ:5 ವಿದ್ಯುತ್ ಕಂಬಗಳು ಜಮೀನಿಗೆ/ರಸ್ತೆಗೆ ವಾಲಿಕೆ, ತಪ್ಪಿದ ಭಾರಿ ಅನಾಹುತ

ಚಿಂತಾಮಣಿಯಲ್ಲಿ ಭಾರಿ ಗಾಳಿ-ಮಳೆಗೆ ಧರೆಗುರುಳಿದ ಶತಮಾನದ ಆಲದ ಮರ

ಚಿಂತಾಮಣಿಯ ವಾರ್ಡ್ ನಂಬರ್ 25ರ ಎನ್. ಎನ್‌.ಟಿ. ರಸ್ತೆಯ ಊರು ಮುಂದೆ ವ್ಯಾಪ್ತಿಯಲ್ಲಿ ತಡರಾತ್ರಿ ಸುಮಾರು 12 ರಿಂದ 1 ಗಂಟೆಯ ಸುಮಾರಿಗೆ ಭಾರಿ ಗಾಳಿ ಮಳೆಗೆ ಸುಮಾರು ನೂರು ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿದ್ದ ರಸ್ತೆ ಬದಿಯಲ್ಲಿದ್ದ ಬೃಹತ್ ಅಲದ ಮರದ ಕೊಂಬೆಗಳು ಮುರಿದು ಬಿದ್ದ ಪರಿಣಾಮ, ವಿದ್ಯುತ್ ತಂತಿಗಳ ಮೇಲೆ ಭಾರಿ ಒತ್ತಡ ಬಿದ್ದು ಸಿಮೆಂಟ್ ಕಂಬಗಳು ಮುರಿದು ರಸ್ತೆಗೆ ಅಡ್ಡಲಾಗಿ ವಾಲಿಕೊಂಡಿವೆ.

K H Puttaswamy Gowda: ಅಭಿವೃದ್ಧಿ ಮೂಲಕವೇ ವಿರೋಧಿಗಳಿಗೆ ಉತ್ತರ: ಶಾಸಕ ಪುಟ್ಟಸ್ವಾಮಿಗೌಡ

ಮಾಜಿ ಶಾಸಕ ಶಿವಶಂಕರರೆಡ್ಡಿ ವಿರುದ್ಧ ತೀವ್ರ ವಾಗ್ದಾಳಿ

ನಗರದಲ್ಲಿ ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಪ್ರವಾಸಿ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳೆಯ ಪ್ರವಾಸಿ ಮಂದಿರ ಕಟ್ಟಡ ತೆರವುಗೊಳಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಲು ಮುಂದಾದರೂ ಮಾಜಿ ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮೂಲಕ ಅಡ್ಡಿಪಡಿಸುತ್ತಿದ್ದಾರೆ

Chikkamagaluru Murder: ಕುಡಿದ ಮತ್ತಿನಲ್ಲಿ ತಂದೆಯನ್ನೇ ಕೊಚ್ಚಿ ಕೊಂದ ಮಗ

Chikkamagaluru Murder: ಕುಡಿದ ಮತ್ತಿನಲ್ಲಿ ತಂದೆಯನ್ನೇ ಕೊಚ್ಚಿ ಕೊಂದ ಮಗ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ತಂದೆಯನ್ನು ಮಗನೇ ಕೊಚ್ಚಿ ಕೊಲೆ ಮಾಡಿದ್ದಾನೆ. ತಂದೆ ಮತ್ತು ಮಲತಾಯಿ ಮತ್ತೆ ಒಂದಾದರೆ ತನ್ನನ್ನು ಮನೆಯಿಂದ ಹೊರಹಾಕಬಹುದು ಎಂದು ತಂದೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IQAC: ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯ, ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸ

ಬಿ.ಸಿ.ಎ. ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಕುರಿತು ವಿಶೇಷ ಉಪನ್ಯಾಸ

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪರಿಣತ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವ ವಿದ್ಯಾಲಯದ ಸ್ಕೂಲ್ ಆಫ್ ಲಾ ಮುಖ್ಯಸ್ಥೆ ಡಾ. ಜಿ.ಎಂ. ಮಮತಾ ಅವರು ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೌಶಲ್ಯಗಳು ಕುರಿತು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು

Shidlaghatta News: ಗುರುವಿನ ಮಾರ್ಗದರ್ಶನವೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ: ಬಿ.ಎನ್. ಕೃಷ್ಣಪ್ಪ

ಗುರುವಿನ ಮಾರ್ಗದರ್ಶನವೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ

ನಗರದ ಡಾಲ್ಫಿನ್ಸ್ ಪದವಿ ಪೂರ್ವ ಕಾಲೇಜಿನ ಜ್ಞಾನ ಸಂಗಮ ಸಭಾಂಗಣದಲ್ಲಿ ವಿದ್ಯಾರ್ಥಿಗಳ ವತಿಯಿಂದ ಆಯೋಜಿಸಿದ್ದ ಗುರುನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಲೆಯೊಳಗಿನ ಶಿಲ್ಪವನ್ನು ಶಿಲ್ಪಿ ಹೊರತರುವಂತೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುಗಳು ಹೊರತರುತ್ತಾರೆ. ಶಿಕ್ಷಣದ ಮೂಲಕ ಜ್ಞಾನ ನೀಡುವುದರ ಜೊತೆಗೆ ಮೌಲ್ಯ, ಸಂಸ್ಕಾರ ಮತ್ತು ಮಾನವೀಯ ಗುಣಗಳನ್ನು ಬೆಳೆಸಬೇಕು

Praja Seva: ಕರ್ತವ್ಯದಲ್ಲಿ ಎಚ್ಚರ ವಹಿಸಿ, ಇಲ್ಲವಾದರೆ ಕ್ರಮ: ಡಿಸಿ ಜಿ. ಪ್ರಭು

ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ

ತಾಲ್ಲೂಕಿನ ವೈ. ಹುಣಿಸೆನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್‌ಆರ್‌ಐಟಿ ಪ್ರೌಢಶಾಲಾ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಹಾಗೂ ಇಲಾಖೆಗಳ ಸೇವೆಗಳು ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪಬೇಕು.

Gudibande News: ಹಕ್ಕುಗಳ ಜತೆಗೆ ಕರ್ತವ್ಯಗಳ ಅರಿವು ಅಗತ್ಯ: ನ್ಯಾಯಮೂರ್ತಿ ಹಂಚಾಟೆ ಸಂಜೀವ ಕುಮಾರ

ಮೂಲಭೂತ ಕರ್ತವ್ಯಗಳ ಪಾಲನೆಯಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಾಧ್ಯ

ಕಳೆದ ಫೆಬ್ರವರಿಯಿಂದ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸು ತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳ ಪರಿಸ್ಥಿತಿಯನ್ನು ಗಮನಿಸಲಾಗುತ್ತಿದೆ. ಪುಲಸಾನಿವೊಡ್ಡು ಹಾಗೂ ನಲ್ಲಗೊಂಡುಗ್ಯಾರಹಳ್ಳಿ ಗ್ರಾಮಗಳು ಮೂಲಸೌಲಭ್ಯಗಳಿಂದ ವಂಚಿತ ವಾಗಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರಾದ ಅನಿತಾ ಹಾಗೂ ಕಮಲ ಮಂಜು ಸಲ್ಲಿಸಿದ ಮನವಿಯ ಆಧಾರದ ಮೇಲೆ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ.

Chikkaballapur News: ಚೇಳೂರಿನಲ್ಲಿ ಸಿವಿಲ್ ಹಾಗೂ ಜೆಎಂಎಫ್‌ಸಿ ಇಟಿನೇರರಿ ನ್ಯಾಯಾಲಯ ಉದ್ಘಾಟಿಸಿ ನ್ಯಾ.ಹಂಚಾಟೆ ಸಂಜೀವ ಕುಮಾರ್ ಹೇಳಿಕೆ

ನ್ಯಾಯಾಂಗದ ಮೇಲಿನ ಜನರ ನಂಬಿಕೆ ಹೆಚ್ಚಿಸಲು ನೂತನ ನ್ಯಾಯಾಲಯ

ನ್ಯಾಯಾಂಗ ವ್ಯವಸ್ಥೆಯನ್ನು ಜನರ ಮನೆ ಬಾಗಿಲಿಗೆ ಇನ್ನಷ್ಟು ಹತ್ತಿರವಾಗಿಸುವ ಉದ್ದೇಶದಿಂದ ಇಂತಹ ಇಟಿನೇರರಿ ನ್ಯಾಯಾಲಯಗಳ ಸ್ಥಾಪನೆಗೆ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಜನರು ನ್ಯಾಯ ಕ್ಕಾಗಿ ದೂರದ ಪಟ್ಟಣಗಳಿಗೆ ತೆರಳಬೇಕಾದ ಪರಿಸ್ಥಿತಿ ಕಡಿಮೆಯಾಗಬೇಕು. ಜನರಿಗೆ ಸುಲಭವಾಗಿ, ತ್ವರಿತವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರೆಯುವಂತಾಗಬೇಕು

Annabrahma Chaturmasya: ತುಪ್ಪ ಹಾನಿಕಾರಕವಲ್ಲ, ಹೃದಯಕ್ಕೆ ಹಿತ: ರಾಘವೇಶ್ವರ ಶ್ರೀ

ತುಪ್ಪ ಹಾನಿಕಾರಕವಲ್ಲ, ಹೃದಯಕ್ಕೆ ಹಿತ: ರಾಘವೇಶ್ವರ ಶ್ರೀ

ತುಪ್ಪದಿಂದ ಕೊಬ್ಬು ಹೆಚ್ಚಾಗುತ್ತದೆ ಎಂಬ ತಪ್ಪು ಕಲ್ಪನೆ ಹಬ್ಬಿದೆ. ಇದರಿಂದಾಗಿ ಕೋಟ್ಯಂತರ ಜನರು ತುಪ್ಪವನ್ನು ದೂರವಿಟ್ಟಿದ್ದಾರೆ. ತುಪ್ಪದ ಕಲಬೆರೆಕೆ, ತುಪ್ಪದ ಮೂಲವಾದ ಗೋವಿನ ವರ್ಣಸಂಕರಗಳು ಬಹುದೊಡ್ಡ ಅಪಚಾರವಾಗಿದ್ದು, ಸಮಾಜ ಎಚ್ಚೆತ್ತುಕೊಳ್ಳಬೇಕು ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಸಲಹೆ ನೀಡಿದ್ದಾರೆ.

ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ: ಬಿಜೆಪಿ ನಾಯಕರಿಂದ ಬೊಗಳೆ: ಬೈರತಿ ಸುರೇಶ್ ಲೇವಡಿ

ಬಿಜೆಪಿ ನಾಯಕರಿಂದ ಬೊಗಳೆ: ಬೈರತಿ ಸುರೇಶ್ ಲೇವಡಿ

ನಮ್ಮ ಹೆಬ್ಬಾಳ ಕ್ಷೇತ್ರಕ್ಕೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಈಗಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಳೆದ ಮೂರು ವರ್ಷಗಳಲ್ಲಿ ಸುಮಾರು ಒಂದು ಸಾವಿರ ಕೋಟಿ ರೂಪಾಯಿಗಳ ಅನುದಾನ ನೀಡಿದ್ದಾರೆ. ಹಣವಿಲ್ಲದಿದ್ದರೆ ಕೇವಲ ಒಂದು ಕ್ಷೇತ್ರಕ್ಕೆ ಇಷ್ಟೊಂದು ಹಣ ಕೊಡಲು ಸಾಧ್ಯವಾಗುತ್ತಿತ್ತೇ ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

Gadag Drought: ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸರ್ಕಾರಕ್ಕೆ ಎಚ್.ಕೆ. ಪಾಟೀಲ್ ಎಚ್ಚರಿಕೆ

ಗದಗ ಬರಪೀಡಿತ ಎಂದು ಘೋಷಿಸದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ

ಗದಗ ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದರೂ ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಕಾಂಗ್ರೆಸ್‌ ಹಿರಿಯ ಶಾಸಕ ಎಚ್‌.ಕೆ.ಪಾಟೀಲ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗದಗ ತಾಲೂಕಿನಲ್ಲಿ ಶೇಕಡಾ 49ರಷ್ಟು ಮಳೆ ಕೊರತೆ ಉಂಟಾಗಿದೆ. ಆದರೂ ಸರ್ಕಾರ ಇದನ್ನು ಬರಪೀಡಿತ ಪ್ರದೇಶವೆಂದು ಯಾಕೆ ಘೋಷಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ತಾಯಿಗೆ ಅಪಮಾನ; ರಾಹುಲ್ ಗಾಂಧಿ ನೈತಿಕ ದಿವಾಳಿತನಕ್ಕೆ ಇಳಿದಿದ್ದಾರೆ ಎಂದು ಸಚಿವ ಜೋಶಿ ಕಿಡಿ

ಪ್ರಧಾನಿ ತಾಯಿಗೆ ಅಪಮಾನ; ರಾಹುಲ್ ಗಾಂಧಿ ನೈತಿಕ ದಿವಾಳಿತನ ಎಂದ ಜೋಶಿ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯನ್ನು ಹೀಗೆ ಅಪಮಾನಿಸುವ ರಾಹುಲ್ ಗಾಂಧಿ ಸದಾ ತಾವೊಬ್ಬ 'ಜವಾಬ್ದಾರಿಯುತ ವಿಪಕ್ಷ ನಾಯಕ' ಎಂಬುದನ್ನೇ ಮರೆತು ವರ್ತಿಸುತ್ತಿರುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಟೀಕಿಸಿದ್ದಾರೆ

Ramanath Rai's Car accident: ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರು- ಬಸ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಾಯ

ಮಾಜಿ ಸಚಿವ ರಮಾನಾಥ ರೈ ಕಾರು ಅಪಘಾತ; ಇಬ್ಬರಿಗೆ ಗಾಯ

ಉಡುಪಿ ಜಿಲ್ಲೆ ಕಾರ್ಕಳದ ಸಾಣೂರು ರಾಮಮಂದಿರ ಡಿವೈಡರ್ ಕ್ರಾಸ್‌ನಲ್ಲಿ ಭಾನುವಾರ ಅಪಘಾತ ನಡೆದಿದೆ. ಕಾರ್ಕಳ - ಮೂಡುಬಿದಿರೆ ಹೆದ್ದಾರಿಯಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ.

ಪ್ರತಿಯೊಬ್ಬರಿಗೆ ಸಾಲ ಸಿಗಬೇಕು ಎಂಬುದು ಸಂಘದ ಉದ್ದೇಶ: ಐ.ಡಿ.ಹಳ್ಳಿ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಕೆ. ಶ್ರೀನಿವಾಸರೆಡ್ಡಿ

ಪ್ರತಿಯೊಬ್ಬರಿಗೆ ಸಾಲ ಸಿಗಬೇಕು ಎಂಬುದು ಸಂಘದ ಉದ್ದೇಶ: ಕೆ.ಶ್ರೀನಿವಾಸರೆಡ್ಡಿ

ಮಧುಗಿರಿ ತಾಲೂಕಿನ ಐ.ಡಿ.ಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಆವರಣದಲ್ಲಿ ಭಾನುವಾರ ನಡೆಯಿತು. ಸಭೆಯಲ್ಲಿ ಸಂಘದ ಪದಾಧಿಕಾರಿಗಳು, ಷೇರುದಾರರು, ರೈತರು ಹಾಗೂ ವಿವಿಧ ಮುಖಂಡರು ಭಾಗವಹಿಸಿದ್ದರು.

ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಗುಡ್‌ನ್ಯೂಸ್‌; 869 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಕಾರಾಗೃಹ ಇಲಾಖೆ

ರಾಜ್ಯ ಕಾರಾಗೃಹ, ಸುಧಾರಣಾ ಸೇವೆ ಇಲಾಖೆಯಲ್ಲಿದೆ 869 ಹುದ್ದೆ

Karnataka Prisons Department Recruitment 2026: ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯು ಉಳಿದ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ 869 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೈಲರ್‌, ವಾರ್ಡರ್‌, ಇನ್‌ಸ್ಟ್ರಕ್ಟರ್‌ ಗ್ರೇಡ್‌ -II ಮುಂತಾದ ಗುದ್ದೆ ಇದಾಗಿದ್ದು, ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಅಪ್ಲೈ ಮಾಡಲು ಕೊನೆಯ ದಿನ ಅಕ್ಟೋಬರ್ 15.

ಸೂರಜ್ ರೇವಣ್ಣಗೆ ಬಿಗ್‌ ರಿಲೀಫ್‌; ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 2ನೇ ಬಾರಿ ಬಿ ರಿಪೋರ್ಟ್ ಸಲ್ಲಿಕೆ

ಸೂರಜ್ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಬಾರಿ ಬಿ ರಿಪೋರ್ಟ್ ಸಲ್ಲಿಕೆ

Suraj Revanna case: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿ ಪೊಲೀಸರು ಆರೋಪಿ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಕಾರಣ ನೀಡಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿ ಬಿ ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ.

ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆಯಿಂದ ಭೀಕರ ಅಗ್ನಿ ಅವಘಡ; ಇಬ್ಬರ ಸಾವು, ಒಬ್ಬರ ಸ್ಥಿತಿ ಗಂಭೀರ

ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಇಬ್ಬರ ಸಾವು, ಒಬ್ಬರಿಗೆ ಗಾಯ

Hubballi Gas cylinder explosion: ಹಳೆ ಹುಬ್ಬಳ್ಳಿಯ ಅಯೋಧ್ಯಾ ನಗರದ ಮನೆಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸಿಲಿಂಡ‌ರ್ ಸ್ಫೋಟಗೊಂಡಿದೆ. ಇದರಿಂದ ಇಬ್ಬರು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

"ಕಾಂಗ್ರೆಸ್‌ಗೆ ಕರ್ನಾಟಕವೇ ಎಟಿಎಂ"; ಪಿಕ್‌ಪಾಕೆಟ್‌ ಸರ್ಕಾರ ಎಂದು ಕಿಡಿ ಕಾರಿದ ಕುಮಾರಸ್ವಾಮಿ

ಪಿಕ್‌ಪಾಕೆಟ್‌ ಸರ್ಕಾರ ಎಂದು ಕಿಡಿ ಕಾರಿದ ಕುಮಾರಸ್ವಾಮಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆ ಮತ್ತು ಸರ್ಕಾರದ ಇತ್ತೀಚಿನ ಕ್ರಮಗಳ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಹೇಳಿಕೆಗಳ ಕುರಿತು ಟೀಕಿಸಿದ ಸಚಿವರು, "ನಾಡಪ್ರಭು ಕೆಂಪೇಗೌಡರು ಕಟ್ಟಿದ ಈ ಮಹಾನಗರದ ವ್ಯಾಪ್ತಿಯನ್ನು ಹಿಗ್ಗಿಸುವುದರ ಹಿಂದೆ ಅಭಿವೃದ್ಧಿಯ ಉದ್ದೇಶವಿಲ್ಲ.

ಒಂದು ವರ್ಷದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ

ಒಂದು ವರ್ಷದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು

ಈ ಯೋಜನೆಯಡಿಯಲ್ಲಿ ಜಿಲ್ಲೆಯ 4 ಪ್ಯಾಕೇಜ್ ಗಳ ಭೂಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಮೊದಲ ಪ್ಯಾಕೇಜ್ ನಲ್ಲಿ ಗೌರಿಬಿದನೂರು ಭಾಗದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೇ.90 ರಷ್ಟು ಕಾಮಗಾರಿಯೂ ಮುಗಿದಿದೆ. ಉಳಿದ ತಾಲೂಕುಗಳಲ್ಲಿ ಮುಂದಿನ ಆರು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ.

ಪ್ರಚೋದನಕಾರಿ ಭಾಷಣ ಆರೋಪ; ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು

ಪ್ರಚೋದನಕಾರಿ ಭಾಷಣ ಆರೋಪ; ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು

ಗಣೇಶೋತ್ಸವ ಶೋಭಾಯಾತ್ರೆಯಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಇತರರ ವಿರುದ್ಧ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಶೋಭಾಯಾತ್ರೆ ವೇಳೆ ಪ್ರತಾಪ್ ಸಿಂಹ ಪ್ರಚೋದನಕಾರಿ ಭಾಷಣ ಮಾಡಿದ್ದರು ಎನ್ನಲಾಗಿದೆ.

KPSC Recruitment Scam: ಜೈಲಿನಲ್ಲಿರುವ ಕೆಪಿಎಸ್‌ಸಿ ಖದೀಮರು ಇಡಿ ವಶಕ್ಕೆ: ಗಂಗ್ವಾರ್‌, ಕನ್ನಾಳೆ ಇ.ಡಿ ಇಕ್ಕಳದಲ್ಲಿ

ಗಂಗ್ವಾರ್‌, ಕನ್ನಾಳೆ ಇ.ಡಿ ಇಕ್ಕಳದಲ್ಲಿ

ಆರೋಪಿಗಳಿಬ್ಬರೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ದ್ದರು. ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆದಿರುವ ಇಡಿ, ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದೆ. ಕಳೆದ ನಾಲ್ಕು ದಿನಗಳಿಂದ ಇಡಿ ಅಧಿಕಾರಿಗಳು ಇಬ್ಬರೂ ಆರೋಪಿಗಳನ್ನು ಜೈಲಿನ ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು.

Loading...