ನೇಮಕಾತಿ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಿ: ವಿಜಯೇಂದ್ರ ಆಗ್ರಹ
BY Vijayendra: ಕೆಪಿಎಸ್‌ಸಿಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ KPSC ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ತಕ್ಷಣವೇ ಕೇಂದ್ರ ತನಿಖಾ ದಳ (ಸಿಬಿಐ) ಗೆ ವಹಿಸಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಸತ್ಯಾಂಶವನ್ನು ರಾಜ್ಯದ ಜನತೆಯ ಮುಂದೆ ತರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.