ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅನಾರೋಗ್ಯದಿಂದ ನಿಧನ
ಶಾಮನೂರು ಶಿವಶಂಕರಪ್ಪ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಶಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಇವರು 6 ಬಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದಾರೆ.