ಪಹಲ್ಗಾಮ್ ಭಯೋತ್ಪಾದಕ ದಾಳಿಗೆ 1 ವರ್ಷ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ 2025ರ ಏಪ್ರಿಲ್ 22ರಂದು ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಧರ್ಮದ ಆಧಾರದಲ್ಲಿ ಪುರುಷ ಪ್ರವಾಸಿಗರನ್ನು ಹತ್ಯೆ ಮಾಡಲಾಗಿತ್ತು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ದಾಳಿಯ ವರ್ಷಾಚರಣೆಗೂ ಮುನ್ನ ಜಮ್ಮು ಕಾಶ್ಮೀರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.