ಮಕ್ಕಳಾಗದಿದ್ದಕ್ಕೆ ಹೆಂಡತಿಯ ಕತ್ತು ಹಿಸುಕಿ ಕೊಲೆಗೈದ ಗಂಡ!
ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿ ಘಟನೆ ನಡೆದಿದೆ. ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ವ್ಯಕ್ತಿಯೊಬ್ಬ ಹೆಂಡತಿಗೆ ಕಿರುಕುಳ ನೀಡುತ್ತಿದ್ದ. ಅದೇ ವಿಚಾರಕ್ಕೆ ಜಗಳ ನಡೆದ ವೇಳೆ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.