ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ!
Karnataka Congress: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅವರು ಪ್ರಚಾರದಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿತ್ತು. ಹೈಕಮಾಂಡ್ ಸೂಚನೆ ಹಿನ್ನೆಲೆ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.