ಸಿಗಂದೂರು ಸೇತುವೆ ಉದ್ಘಾಟನೆ ಆಹ್ವಾನ ಸಿಎಂಗೆ ಮೊದಲೇ ನೀಡಲಾಗಿತ್ತು: ಜೋಶಿ
Pralhad Joshi: ಸಿಗಂದೂರು ಸೇತುವೆ ಉದ್ಘಾಟನೆ ಸಮಾರಂಭಕ್ಕೆ ʼಆಹ್ವಾನ ನೀಡಿದ್ದರೆ ಬರುತ್ತಿದ್ದೆʼ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪತ್ರದ ಮೂಲದ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರೂ ಸಿಎಂ ಆಹ್ವಾನ ನೀಡಿಲ್ಲ ಎಂದಿರುವುದು ಸರಿಯಲ್ಲ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.