ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Kalaburagi News: ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ಡ್ಯಾಂಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾರಿ ನಷ್ಟ; ಕಲಬುರಗಿಯಲ್ಲಿ ವ್ಯಕ್ತಿ ಆತ್ಮಹತ್ಯೆ

IPL Betting: ಐಪಿಎಲ್ ಪಂದ್ಯಗಳ ಮೇಲೆ ನಿರಂತರವಾಗಿ ಬೆಟ್ಟಿಂಗ್ ಕಟ್ಟುತ್ತಿದ್ದ ವ್ಯಕ್ತಿ ಭಾರಿ ಪ್ರಮಾಣದ ಹಣ ಕಳೆದುಕೊಂಡಿದ್ದಾರೆ. ಜೂಜಿಗಾಗಿ ಹಲವರಿಂದ ದೊಡ್ಡ ಮೊತ್ತದ ಸಾಲವನ್ನೂ ಮಾಡಿದ್ದರು. ಬೆಟ್ಟಿಂಗ್‌ನಲ್ಲಿ ಹಣ ಕೈಕೊಟ್ಟಿದ್ದರಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಾಲಗಾರರ ಒತ್ತಡಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅರಣ್ಯ ಇಲಾಖೆ ಕ್ರಮಕ್ಕೆ ಬೇಸರ; ಕೆಡಿಪಿ ಸಭೆಯಲ್ಲಿ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ

ಕೆಡಿಪಿ ಸಭೆಯಲ್ಲಿ ಕಣ್ಣೀರಿಟ್ಟ ಉಪಸಭಾಪತಿ ರುದ್ರಪ್ಪ ಲಮಾಣಿ

ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮದ ಮನೆಗಳು ಬರುತ್ತವೆ ಎಂದು ಜನರ ಮೇಲೆ ಅರಣ್ಯ ಇಲಾಖೆ ಎಫ್‌ಐಆರ್‌ ದಾಖಲು ಮಾಡಿದ ಹಿನ್ನೆಲೆಯಲ್ಲಿ ಭಾವೋದ್ವೇಗಗೊಂಡು ಉಪಸಭಾಪತಿ ರುದ್ರಪ್ಪ ಲಮಾಣಿ ಕಣ್ಣೀರಿಟ್ಟಿದ್ದಾರೆ. ಒಕ್ಕಲೆಬ್ಬಿಸಿದರೆ ಸಾವಿರಾರು ಬಡವರು ಎಲ್ಲಿಗೆ ಹೋಗಬೇಕು‌ ಎಂದು ಅವರು ಪ್ರಶ್ನಿಸಿದ್ದಾರೆ.

Third language: ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್:‌ ಪ್ರಶ್ನಿಸಿ ಅರ್ಜಿ ಸಲ್ಲಿಸಿದವರಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್‌

ಎ‌ಸ್ಸೆಸ್ಸೆಲ್ಸಿಯಲ್ಲಿ ಹಿಂದಿಗೆ ಗ್ರೇಡ್:‌ ಪ್ರಶ್ನಿಸಿದವರಿಗೆ ಹೈಕೋರ್ಟ್ ದಂಡ

ಮಾಧ್ಯಮಗಳ ವರದಿ ಆಧರಿಸಿ ಬೆಂಗಳೂರಿನ ಎಚ್‌.ಎನ್‌.ಚಂದನಾ ಮತ್ತು ಎಸ್‌ ವೆಂಕಟೇಶ್‌ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

Vande Bharat Train: ಬೆಂಗಳೂರಿನಿಂದ ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲು

ಬೆಂಗಳೂರಿನಿಂದ ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲು

ಸುಮಾರು 1,136 ಕಿಮೀ ದೂರವನ್ನು ಈ ರೈಲು 23ರಿಂದ 24 ಗಂಟೆಗಳ ಅವಧಿಯಲ್ಲಿ ಸಾಗುತ್ತದೆ. ಹೊಸ ವಂದೇ ಭಾರತ್ ಸ್ಲೀಪರ್ ರೈಲು ಪರಿಚಯದಿಂದ ಪ್ರಯಾಣ ಸಮಯವು ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ವೇಗದ ಸೇವೆ ಲಭ್ಯವಾಗಲಿದೆ.

PUC Result: ಪಿಯುಸಿ ಫಲಿತಾಂಶ: ಎಪಿಎಸ್ ಶಿಕ್ಷಣ ಸಂಸ್ಥೆಯಿಂದ ಉನ್ನತ ಸಾಧನೆ

ಪಿಯುಸಿ ಫಲಿತಾಂಶ: ಎಪಿಎಸ್ ಶಿಕ್ಷಣ ಸಂಸ್ಥೆಯಿಂದ ಉನ್ನತ ಸಾಧನೆ

ಬಹುಪಾಲು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದು, ಅನೇಕ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ (85% ಮತ್ತು ಅದಕ್ಕಿಂತ ಹೆಚ್ಚು) ಫಲಿತಾಂಶ ದಾಖಲಿಸಿದ್ದಾರೆ. ಆಟೋ ಚಾಲಕರು, ಅಡುಗೆ ಮಾಡುವ ಮತ್ತು ಶಿಕ್ಷಕ ವೃತ್ತಿಯಲ್ಲಿ ತೊಡಗಿಕೊಂಡವರ ಕುಟುಂಬದವರ ಮಕ್ಕಳ ಸಾಧನೆ ಶ್ಲಾಘನೀಯ

ಪಾರ್ಕಿನ್ಸನ್ಸ್ ರೋಗದ ಕುರಿತು ಅರಿವು: ರೋಗಲಕ್ಷಣಗಳನ್ನು ಮೊದಲೇ ಕಂಡುಕೊಳ್ಳಲು ಮತ್ತು ಜೀವನ ಬದಲಾಯಿಸುವ ಚಿಕಿತ್ಸೆಗಳನ್ನು ಪಡೆಯಲು ತಜ್ಞರ ಕರೆ

ಪಾರ್ಕಿನ್ಸನ್ಸ್ ರೋಗದ ಕುರಿತು ಅರಿವು

ಪಾರ್ಕಿನ್ಸನ್ಸ್ ರೋಗವು ಗಂಭೀರ, ಕೇಂದ್ರ ನರಮಂಡಲದ ಕ್ಷೀಣಗೊಳ್ಳುವ ಸಮಸ್ಯೆಯಾಗಿದ್ದು ಮೆದುಳಿ ನಲ್ಲಿ ಡೋಪಮೈನ್ ಉತ್ಪಾದಿಸುವ ನ್ಯೂರಾನ್ ಗಳು ಕ್ರಮೇಣ ನಷ್ಟವಾಗುತ್ತವೆ, ಇದರಿಂದ ಚಲನೆ ಮತ್ತು ಸಹಯೋಗ ದುರ್ಬಲಗೊಳ್ಳುತ್ತದೆ. ನಿರ್ದಿಷ್ಟ ಕಾರಣವು ಅಗೋಚರವಾಗಿದ್ದರೂ ಪರಿಣಿತರು ಅನುವಂಶಿಕ ಮತ್ತು ಪಾರಿಸರಿಕ ಅಂಶಗಳ ಸಂಯೋಜನೆಯಿಂದ ಉಂಟಾಗುತ್ತದೆ ಎಂದು ನಂಬಿದ್ದಾರೆ.

Lokayuta Raid: 14 ಕೋಟಿ ರೂ. ಆಸ್ತಿ, 11 ಕೆಜಿ ಚಿನ್ನ ಬೆಳ್ಳಿ, ಹತ್ತಾರು ಮನೆ, ಕಾರು: ಲೋಕಾಯುಕ್ತ ದಾಳಿಯಲ್ಲಿ ಪತ್ತೆಯಾದ ಇಂಜಿನಿಯರ್‌ ಆಸ್ತಿ!

ಲೋಕಾಯುಕ್ತ ದಾಳಿ, ಬೆಳಗಾವಿ ಎಇಇ ಮನೆಯಲ್ಲಿ ಪತ್ತೆಯಾಯ್ತು ಕೋಟಿ ಕೋಟಿ ಆಸ್ತಿ!

DUDC ಎಇಇ ಅಜಯಸಿಂಗ್ ರಜಪೂತ ಮನೆಯ ಮೇಲೆ ದಾಳಿ ಮಾಡಲಾಗಿತ್ತು. ಬೆಳಗಾವಿಯಲ್ಲಿ ಮೂರು ಮನೆ, ಕಚೇರಿ, ಬ್ಯಾಂಕ್ ಲಾಕರ್ ಪರಿಶೀಲನೆ ನಡೆಸಿದ ವೇಳೆ ಸವದತ್ತಿ, ಹುಕ್ಕೇರಿ, ಹುಬ್ಬಳ್ಳಿಯಲ್ಲಿ 18 ನಿವೇಶನ ಪತ್ತೆಯಾಗಿದ್ದರೆ ಮನೆಯಲ್ಲಿ 5.96 ಕೆಜಿ ಮೌಲ್ಯದ ಚಿನ್ನ, 5 ಕೆಜಿ ಬೆಳ್ಳಿ, 3.12 ಕೋಟಿ ಡೆಪಾಸಿಟ್, ಐಷಾರಾಮಿ ಕಾರು, ಬೈಕ್‌ಗಳು ಪತ್ತೆಯಾಗಿವೆ.

ಆನೇಕಲ್ ತಾಲ್ಲೂಕಿನಲ್ಲಿ ಸತತ 4ನೇ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ

ಆನೇಕಲ್ ತಾಲ್ಲೂಕಿನಲ್ಲಿ ಸತತ 4ನೇ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ

ಪರೀಕ್ಷೆ ಬರೆದ ಒಟ್ಟು 292 ವಿದ್ಯಾರ್ಥಿಗಳಲ್ಲಿ 163 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಯಾಗಿದ್ದಾರೆ. ಮತ್ತು 129 ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ವಿಜ್ಞಾನ ವಿಭಾಗದ ಜೆ. ತನುಶ್ರೀ ಎಂಬ ವಿದ್ಯಾರ್ಥಿನಿ 600 ಕ್ಕೆ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಪಡೆದುಕೊಂಡಿದ್ದಾರೆ.

Girl missing case: ಮಾಣಿಕ್ಯಧಾರದಲ್ಲಿ ಕೇರಳದ ಹುಡುಗಿ ಶ್ರೀನಂದಾ ಸಾವಿನ ಹಿಂದೆ ಬೇರೊಂದು ಶಂಕೆ

ಮಾಣಿಕ್ಯಧಾರದಲ್ಲಿ ಕೇರಳದ ಹುಡುಗಿ ಶ್ರೀನಂದಾ ಸಾವಿನ ಹಿಂದೆ ಬೇರೊಂದು ಶಂಕೆ

ಬಾಲಕಿ ಶ್ರೀನಂದಾ 2000 ಅಡಿ ಆಳದ ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಶ್ರೀನಂದಾ ಅದು ಹೇಗೆ ಬಿದ್ದಳು ಎನ್ನುವುದೇ ನಿಗೂಢವಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದರೆ ಇದೀಗ ತಂದೆ, ಪೊಲೀಸರ ಮುಂದೆ ಹೇಳಿರುವ ಒಂದು ಹೇಳಿಕೆ ಶ್ರೀನಂದಾ ಸಾವಿನ ಬಗ್ಗೆ ಮತ್ತೊಂದು ಅನುಮಾನ ಮೂಡಿಸಿದೆ.

Karnataka Weather: ಬಿಸಿಲಿನ ನಡುವೆ ಮಳೆಯ ಅಬ್ಬರ, ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್‌

ಬಿಸಿಲಿನ ನಡುವೆ ಮಳೆಯ ಅಬ್ಬರ, ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್‌

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ (Hot and Humid) ತುಂಬಾ ಹೆಚ್ಚಾಗಲಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ. ಬೆಂಗಳೂರು, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಆಕಾಶ ಭಾಗಶಃ ಮೋಡ ಕವಿದಿರುತ್ತದೆ.

Lamborghini case: ಲ್ಯಾಂಬೊರ್ಗಿನಿ ಕಾರಿನಲ್ಲಿಯೇ ಹೋಗಿ ರಸ್ತೆ ಕಸ ಗುಡಿಸಿ ಬನ್ನಿ: ಆರೋಪಿಗೆ ಹೈಕೋರ್ಟ್‌ ಸೂಚನೆ

ಲ್ಯಾಂಬೊರ್ಗಿನಿ ಕಾರಲ್ಲಿಯೇ ಹೋಗಿ ರಸ್ತೆ ಕಸ ಗುಡಿಸಿ: ಆರೋಪಿಗೆ ಹೈಕೋರ್ಟ್‌

ಮನುಷ್ಯನ ಪ್ರಾಣಕ್ಕೆ ಹಾನಿಯಾಗುವಂಥ ಸೈಲೆನ್ಸರ್‌ ಅಳವಡಿಸಿಕೊಂಡಿರುವ ಲ್ಯಾಂಬೊರ್ಗಿನಿ ಕಾರನ್ನು ಮೈಸೂರು ರಸ್ತೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಕುರಿತು ಬೆಂಗಳೂರಿನ ಕೆಂಗೇರಿ ಸಂಚಾರಿ ಠಾಣೆಯಲ್ಲಿ ಚಿರಂತನ್‌ ಎಂಬವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.

Murder Case: ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದ ಹಾಶ್ಮಿನಗರದಲ್ಲಿದ್ದ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಗೆ ನಿನ್ನೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

Peenya Elevated Flyover: ಪೀಣ್ಯ ಎಲಿವೇಟೆಡ್ ಫ್ಲೈಓವರ್‌ ಐದು ದಿನ ಬಂದ್, ಪರ್ಯಾಯ ಮಾರ್ಗ ಬಳಸಲು ಸೂಚನೆ

ಪೀಣ್ಯ ಎಲಿವೇಟೆಡ್ ಫ್ಲೈಓವರ್‌ ಐದು ದಿನ ಬಂದ್, ಪರ್ಯಾಯ ಮಾರ್ಗ ಬಳಸಲು ಸೂಚನೆ

ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ‌ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ವಾಹನ ಸವಾರರಿಗೆ ತೊಂದರೆಯಾಗದಂತೆ ಪೊಲೀಸರು ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ.

State BJP Vice President Rupali Naik Interview: ಸೋತ ದುಃಖ ಇಲ್ಲ , ಜನರ ಜತೆಗಿರುವ ಖುಷಿ ಇದೆ

ಸೋತ ದುಃಖ ಇಲ್ಲ , ಜನರ ಜತೆಗಿರುವ ಖುಷಿ ಇದೆ

ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ ವೇಳೆ ಅವರಿಗೆ ಮೊದಲು ಶಾಲು ಹಾಕುವ ಅವಕಾಶ ನನಗೆ ಸಿಕ್ಕಿತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದ್ದಕ್ಕೆ ತುಂಬಾ ಧನ್ಯವಾದಗಳು ಎಂದು ನಾನು ಮನಸ್ಸಲ್ಲೇ ಹೇಳಿಕೊಂಡು ಕಣ್ಣೀರಿಟ್ಟೆ. ಇದನ್ನು ಕಂಡು ಮೋದಿಯವರ ಕಣ್ಣುಗಳೂ ತೇವಗೊಂಡವು.

Gubbi News: ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ

ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ

ದೇವಾಲಯದ ಬಳಿ ಜಮಾಯಿಸಿದ್ದ ನೂರಾರು ಭಕ್ತರು ಕಳೆದ ನಲವತ್ತು ವರ್ಷಗಳ ಹಿಂದೆ ದಾನ ವಾಗಿ ನೀಡಿದ ಜಮೀನಿನಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಾಲಯ ನಿರ್ಮಾಣವನ್ನು ಮಾಡಲಾಗಿತ್ತು. ಈಗ ಪಕ್ಕದ ಜಮೀನಿನ ನವೀನ್ ಕುಮಾರ್ ಮತ್ತು ಕುಟುಂಬ ದೇವಾಲಯದ ಜಾಗ ನಮ್ಮದು ಎಂದು ಅತಿಕ್ರಮಣ ಮಾಡಲು ಮುಂದಾಗಿದ್ದಾರೆ. ಪ್ರಶ್ನೆ ಮಾಡಿದರೆ ನಮ್ಮದು ಎಂದು ದಬ್ಬಾಳಿಕೆ ಮಾಡುತ್ತಾರೆ

Gauribidanur News: ಶಿಕ್ಷಣದ ಜೊತೆಗೆ ಬದುಕಿನ ಮೌಲ್ಯಗಳು ಅಗತ್ಯ

Gauribidanur News: ಶಿಕ್ಷಣದ ಜೊತೆಗೆ ಬದುಕಿನ ಮೌಲ್ಯಗಳು ಅಗತ್ಯ

ಪ್ರಕೃತಿಯು ಮನುಕುಲದ ನೆಮ್ಮದಿಯ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ಅವಶ್ಯಕತೆಗಳನ್ನು ನೀಡುತ್ತಿದೆ. ಆದರೆ ನಾವುಗಳು ನಿತ್ಯದ ಬದುಕಿನಲ್ಲಿ ಗಾಳಿ, ನೀರು ಮತ್ತು ಮಣ್ಣು ಸೇರಿದಂತೆ ಮುಂದಿನ ಪೀಳಿಗೆಗೆ ಅಗತ್ಯವಿರುವ ‌ನೆರೆಯ ಪರಿಸರ ಮತ್ತು ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ.

ವಾಣಿಜ್ಯ ವಿಭಾಗದಲ್ಲಿ ಮಿಂಚಿದ ಅಕ್ಷರ ಪಿಯು ವಿದ್ಯಾರ್ಥಿಗಳು – ಭರ್ಜರಿ ಸನ್ಮಾನ

ವಾಣಿಜ್ಯ ವಿಭಾಗ: ಮಿಂಚಿದ ಅಕ್ಷರ ಪಿಯು ವಿದ್ಯಾರ್ಥಿಗಳು, ಭರ್ಜರಿ ಸನ್ಮಾನ

ನಗರದ ಶ್ರೀ ಅಕ್ಷರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ವತಿಯಿಂದ ಭರ್ಜರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸ ಲಾಯಿತು. ಬಳಿಕ ಮಾತನಾಡಿದ ವಿದ್ಯಾರ್ಥಿಗಳ ಈ ಸಾಧನೆ ಕಾಲೇಜಿಗೆ ಹೆಮ್ಮೆಯ ವಿಷಯ ವಾಗಿದ್ದು ಇತರ ವಿದ್ಯಾರ್ಥಿ ಗಳಿಗೆ ಪ್ರೇರಣೆಯಾಗಿದೆ

Gudibande News: ಬೆಳೆ ವಿಮೆ ತಿರಸ್ಕೃತಗೊಂಡ 531 ರೈತರಿಗೆ ಆಕ್ಷೇಪಣೆ ಸಲ್ಲಿಸಲು ಏ.30 ಕೊನೆಯ ದಿನ

ಬೆಳೆ ವಿಮೆ ತಿರಸ್ಕೃತ: ಆಕ್ಷೇಪಣೆ ಸಲ್ಲಿಸಲು ಏ.30 ಕೊನೆಯ ದಿನ

ಒಂದು ವೇಳೆ ಸಮೀಕ್ಷೆಯಲ್ಲಿ ವ್ಯತ್ಯಾಸವಿದ್ದು, ರೈತರು ನಿಜವಾಗಿಯೂ ವಿಮೆ ಮಾಡಿದ ಬೆಳೆಯನ್ನೇ ಬೆಳೆದಿದ್ದಲ್ಲಿ, ಅಗತ್ಯ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ರೈತರು ತಮ್ಮ ಮನವಿಯನ್ನು ಏಪ್ರಿಲ್ 30 ರೊಳಗೆ ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

Chikkaballapur News: ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿದ್ದ ವಿದ್ಯಾರ್ಥಿನಿ ಉತ್ತಮ ಸಾಧನೆ

ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿದ್ದ ವಿದ್ಯಾರ್ಥಿನಿ ಉತ್ತಮ ಸಾಧನೆ

ಕೊರೋನ ವೇಳೆಯಲ್ಲಿ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ 12 ವಯಸ್ಸಿನ ವಿದ್ಯಾರ್ಥಿನಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೇರಿದ್ದಳು. ಇಲ್ಲಿಂದಲೇ ವಿಶ್ವವಿವೇಕ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.90ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ.

Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ ಹಿನ್ನೆಲೆ ವಿಮಾನ ಸಂಚಾರ ವ್ಯತ್ಯಯ; ರಾಜ್ಯಪಾಲರಿದ್ದ ವಿಮಾನ ಮಂಗಳೂರಿಗೆ ವಾಪಸ್!

ಭಾರಿ ಮಳೆ; ರಾಜ್ಯಪಾಲರಿದ್ದ ವಿಮಾನ ಮಂಗಳೂರಿಗೆ ವಾಪಸ್!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ° C ಮತ್ತು 24 ° C ಇರುವ ಸಾಧ್ಯತೆ ಹೆಚ್ಚು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Gauribidanur News: ಭಕ್ತರ ಮನಸೆಳೆಯುತ್ತಿದೆ ಅಯೋಧ್ಯ ಶ್ರೀ ರಾಮ ಮಂದಿರ ಪ್ರದರ್ಶನ

ಭಕ್ತರ ಮನಸೆಳೆಯುತ್ತಿದೆ ಅಯೋಧ್ಯ ಶ್ರೀ ರಾಮ ಮಂದಿರ ಪ್ರದರ್ಶನ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬೀದರ ಗ್ರಾಮದ ವಿನಯ ರಾಮ ಅವರು ಸಂಕಲ್ಪ ಮಾಡಿ ಅಯೋಧ್ಯ ಶ್ರೀ ರಾಮ ಮಂದಿರ ಮಾದರಿಯನ್ನು ಈಗಾಗಲೇ ರಾಷ್ಟ್ರ ಹಾಗೂ ರಾಜ್ಯದ 101 ಕಡೆ ನಡೆಸಲಾಗಿದೆ. ಈಗ  ಕರ್ನಾಟಕದ 18 ಜಿಲ್ಲೆಗಳಲ್ಲಿ ಪ್ರದರ್ಶನ ಏರ್ಪಡಿಸಿದ್ದು, ಗೌರಿಬಿದನೂರಿ ನಲ್ಲಿ ಗುರುವಾರದಿಂದ 102ನೇ ಪ್ರದರ್ಶನ ನಡೆಸಲಾಗುತ್ತಿದೆ.

Chikkaballapur News: ಸಂಸದ ಸುಧಾಕರ್ ವಿರುದ್ಧದ ಆರೋಪಗಳಿಗೆ ಬಿಜೆಪಿ ಮುಖಂಡರು ತಿರುಗೇಟು

ಭಿನ್ನಾಭಿಪ್ರಾಯ ಇದ್ದರೆ ಹೈಕಮಾಂಡ್ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕು

ಸಂಸದ ಸುಧಾಕರ್ ಅವರಿಗೆ ಅಡ್ಜೆಸ್ಟ್ಮೆಂಟ್ ರಾಜಕಾರಣವೇ ತಿಳಿದಿಲ್ಲ. ಡಿಸಿಸಿ ಬ್ಯಾಂಕ್ ಚುನಾವಣೆ ಯ ವೇಳೆ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಅವರು ಶ್ರಮಪಟ್ಟಿದ್ದರು. ಯಾರಾದರೂ ಸೋತರೆ ಅದಕ್ಕೆ ಸುಧಾಕರ್ ಅವರನ್ನು ಕಾರಣವೆಂದು ಹೇಳುವುದು ಸರಿಯಲ್ಲ. ಇನ್ನೂ ಚೀಮುಲ್ ಚುನಾವಣೆಯಲ್ಲಿ ಬೇರೆ ಪಕ್ಷದ ಅಭ್ಯರ್ಥಿ ಪರ ಇದ್ದರು ಎನ್ನುವುದು ಶುದ್ಧ ಸುಳ್ಳು . ಶಿಡ್ಲಘಟ್ಟ ಜೆಡಿಎಸ್ ಮುಖಂಡರು ಮಾಡಿರುವ ಆರೋಪಗಳಲ್ಲಿ ಯಾವುದೇ ಸತ್ಯವೂ ಇಲ್ಲ

KCET 2026 Admit Card: ಸಿಇಟಿ 2026 ಪ್ರವೇಶ ಪತ್ರ ಬಿಡುಗಡೆ; ಡೌನ್‌ಲೋಡ್‌ ಮಾಡುವ ವಿಧಾನ ಇಲ್ಲಿದೆ

ಸಿಇಟಿ 2026 ಪ್ರವೇಶ ಪತ್ರ ಬಿಡುಗಡೆ; ಡೌನ್‌ಲೋಡ್‌ ವಿಧಾನ ಇಲ್ಲಿದೆ

Karnataka Common Entrance Test: ಸಿಇಟಿಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

Dr. M.C. Sudhakar: ಸುಸಜ್ಜಿತ ನಗರ ನಿರ್ಮಾಣಕ್ಕೆ “ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರ” ಸಹಾಯಕಾರಿ: ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್

ಸುಸಜ್ಜಿತ ನಗರ ನಿರ್ಮಾಣಕ್ಕೆ “ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರ”

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಹಾಗೂ ನಮ್ಮ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ  ಹೆಚ್ಚಿನ ಜನರು ಚಿಂತಾಮಣಿ ನಗರದ ಕಡೆ ಒಲವು ತೋರಿ ಇಲ್ಲಿ ವಾಸಿಸಲು ಬರುತ್ತಿದ್ದಾರೆ. ಕಾರಣ ಇಲ್ಲಿ ದೊರೆಯುವ ಮೂಲಭೂತ ಸೌಕರ್ಯಗಳೇ ಆಗಿದೆ. ಆದ್ದರಿಂದ ಚಿಂತಾಮಣಿ ನಗರವು ವೇಗವಾಗಿ ಬೆಳೆಯುತ್ತಿದ್ದು ಈ ಬೆಳವಣಿಗೆಗೆ ತಕ್ಕಂತೆ ನಗರೀಕರಣ ನಡೆಯಬೇಕಿದೆ

Loading...