ಆಸ್ಪತ್ರೆ, ಶಾಲೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್‌ಫುಡ್ ಮಾರಾಟ ನಿಷೇಧ?
ಇನ್ನುಮುಂದೆ ರಾಜ್ಯದ ಶಾಲೆಗಳು ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶಾಲೆ ಹಾಗೂ ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್‌ಗೆ ಸಂಪೂರ್ಣ ನಿಷೇಧ ಹೇರಬೇಕು. ಈ ಕ್ರಮವನ್ನು ಮೊದಲು ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.