ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್ ಟಿಕೆಟ್ ಘೋಷಣೆ
ಅನುಕಂಪದ ಅಲೆಯಲ್ಲಿಉಪಚುನಾವಣೆ ಗೆಲ್ಲಲು ಆಡಳಿತಾರೂಢ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಹಾಗೂ ಬಾಗಲಕೋಟೆಯಲ್ಲಿ ಎಚ್.ವೈ.ಮೇಟಿ ಕಿರಿಯ ಪುತ್ರ ಉಮೇಶ್ ಮೇಟಿಗೆ ಪಕ್ಷದ ವತಿಯಿಂದ ಇದೀಗ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿದೆ.