ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

Actor Rakshit shetty: ಕಾಪಿ ರೈಟ್‌ ಉಲ್ಲಂಘನೆ; ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್!

ನಟ ರಕ್ಷಿತ್ ಶೆಟ್ಟಿಗೆ 25 ಲಕ್ಷ ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್!

'ನ್ಯಾಯ ಎಲ್ಲಿದೆ' ಚಿತ್ರದ 'ನ್ಯಾಯ ಎಲ್ಲಿದೆ...' ಹಾಡು ಮತ್ತು 'ಗಾಳಿ ಮಾತು' ಚಿತ್ರದ 'ಒಮ್ಮೆ ನಿನ್ನನ್ನು' ಹಾಡನ್ನು ʼಬ್ಯಾಚುಲರ್ ಪಾರ್ಟಿʼ ಸಿನಿಮಾದಲ್ಲಿ ಅನಧಿಕೃತವಾಗಿ ಬಳಕೆ ಮಾಡಲಾಗಿದೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕು ಅನ್ನು ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾ‌ರ್ ದೂರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್‌, ರಕ್ಷಿತ್ ಶೆಟ್ಟಿ ಅವರ ನಿರ್ಮಾಣ ಸಂಸ್ಥೆಗೆ ಭಾರಿ ದಂಡ ವಿಧಿಸಿದೆ.

Minister D Sudhakar: ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡ ಸಚಿವ ಡಿ.ಸುಧಾಕರ್‌ ಅವರನ್ನು ಬೆಂಗಳೂರಿನ ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಘಾ ಘಟಕದಲ್ಲಿ ಸಚಿವ ಡಿ.ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

KUWJ Awards: ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ; ವಿಶ್ವವಾಣಿಯ ರಮೇಶ್‌ ಕುಮಾರ್‌ ನಾಯಕ್‌ ಸೇರಿ ಹಲವರಿಗೆ ಪುರಸ್ಕಾರ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರಕಟ

KUWJ Awards: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ರಾಜ್ಯದ ಸಕ್ರಿಯ ಪತ್ರಕರ್ತರ ಹಿತಾಸಕ್ತಿ ಕಾಪಾಡುವ, ಅವರ ವೃತ್ತಿಪರ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಶ್ರಮಿಸುವ ಪ್ರಮುಖ ನೋಂದಾಯಿತ ಸಂಸ್ಥೆಯಾಗಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ಪತ್ರಕರ್ತರನ್ನು ಗುರುತಿಸಿ ವಿವಿಧ ಪ್ರಶಸ್ತಿಗಳನ್ನು ಸಂಘವು ನೀಡುತ್ತಾ ಬಂದಿದೆ. ಸಾಧಕರಿಗೆ ಈ ಬಾರಿ ಬೀದರ್‌ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಬೆಂಗಳೂರಿನ ಸ್ಯಾಮ್‌ಸಂಗ್ ಆರ್ & ಡಿ ಇನ್ಸ್ಟಿಟ್ಯೂಟ್ ಕ್ಯಾಂಪಸ್‌ಗೆ 6 ಕಾಲೇಜುಗಳ ಸೇರ್ಪಡೆ

ಸ್ಯಾಮ್‌ಸಂಗ್ ಆರ್ & ಡಿ ಇನ್ಸ್ಟಿಟ್ಯೂಟ್ ಕ್ಯಾಂಪಸ್‌ಗೆ 6 ಕಾಲೇಜುಗಳ ಸೇರ್ಪಡೆ

ಎಸ್‌ಆರ್‌ಐ-ಬಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ಪ್ರಮುಖ ಸಂಸ್ಥೆಗಳನ್ನು ಸೇರಿಕೊಂಡಿದೆ, ಅವುಗಳಲ್ಲಿ NITTE ಮೀನಾಕ್ಷಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕ್ರೈಸ್ಟ್ (ಡೀಮ್ಡ್ ಟು ಬಿ ಯೂನಿವರ್ಸಿಟಿ), ಆರ್‌ವಿ ಕಾಲೇಜ್ ಆಫ್ ಎಂಜಿನಿಯ ರಿಂಗ್, ಎಸ್‌ಆರ್‌ಎಂ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ, ಕಟ್ಟಂಕುಲತ್ತೂರ್, ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯ ರಿಂಗ್ ಮತ್ತು ದಯಾನಂದ ಸಾಗರ್ ಕಾಲೇಜ್ ಆಫ್ ಎಂಜಿನಿಯರಿಂಗ್ ಸೇರಿವೆ.

ಹಿರಿಯ ನಾಗರಿಕರಿಗಾಗಿ ಸ್ಮಾರ್ಟ್‌ ಲಿಕ್ವಿಡ್‌ ಡಿಸ್ಟ್ರಿಬ್ಯೂಷನ್‌™” ತಂತ್ರಜ್ಞಾನದ ವಯಸ್ಕರ ಡಯಪರ್ ಪ್ಯಾಂಟ್ಸ್ ಪರಿಚಯಿಸಿದ ಎಜಿ ಈಜಿ ಸಂಸ್ಥೆ

ವಯಸ್ಕರ ಡಯಪರ್ ಪ್ಯಾಂಟ್ಸ್ ಪರಿಚಯಿಸಿದ ಎಜಿ ಈಜಿ ಸಂಸ್ಥೆ

ವಯೋವೃದ್ಧರಲ್ಲಿ ಸಾಮಾನ್ಯವಾಗಿದ್ದರೂ ಸಾಕಷ್ಟು ಗಮನ ಸಿಗದ ಮೂತ್ರ ನಿಯಂತ್ರಣ ಸಮಸ್ಯೆ ಗೆ ಪರಿಹಾರ ನೀಡುವತ್ತ ಈ ಉತ್ಪನ್ನ ಮಹತ್ವದ ಹೆಜ್ಜೆಯಾಗಿದೆ. ವಯಸ್ಸಿನ ಜೊತೆಗೆ ಉಂಟಾಗುವ ಆರೋಗ್ಯ ಸಮಸ್ಯೆಗಳು ಈ ಸಮಸ್ಯೆಯನ್ನು ಹೆಚ್ಚಿಸುತ್ತಿದ್ದು, ಇದರಿಂದ ಹಿರಿಯ ರಲ್ಲಿ ಹೊರಗೆ ಹೋಗುವ ಭಯವೂ ಉಂಟಾಗುತ್ತದೆ.

41.5% ಹೂಡಿಕೆಯಿಂದ IHC ಪ್ರಮೋಟರ್ ಸ್ಥಾನಕ್ಕೆ ಸಮ್ಮಾನ್ ಕ್ಯಾಪಿಟಲ್ ಲಿಮಿಟೆಡ್

IHC ಪ್ರಮೋಟರ್ ಸ್ಥಾನಕ್ಕೆ ಸಮ್ಮಾನ್ ಕ್ಯಾಪಿಟಲ್ ಲಿಮಿಟೆಡ್

ಬಲಿಷ್ಠ ಬಂಡವಾಳ, ಉತ್ತಮ ಕ್ರೆಡಿಟ್ ಪ್ರೊಫೈಲ್ ಮತ್ತು ಕಡಿಮೆ ವೆಚ್ಚದ ವಿಭಿನ್ನ ಹಣಕಾಸು ಮೂಲಗಳ ಲಭ್ಯತೆಯಿಂದ, FY 2029ರೊಳಗೆ ಭಾರತದ ಟಾಪ್-3 NBFCಗಳಲ್ಲಿ ಒಂದಾಗು ವುದು, ಜೊತೆಗೆ AUM, RoA ಮತ್ತು RoE ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರಿಸುವ ಗುರಿಯನ್ನು ಸಮ್ಮಾನ್ ಕ್ಯಾಪಿಟಲ್ ಹೊಂದಿದೆ.

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಆತ್ಮಹತ್ಯೆ; ಬೆಂಕಿ ಹೊತ್ತಿಕೊಂಡು ಸಜೀವ ದಹನ!

ಲವ್ ಬ್ರೇಕಪ್ ಆಗಿದ್ದಕ್ಕೆ ಬಸ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಆತ್ಮಹತ್ಯೆ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಘಟನೆ ನಡೆದಿದೆ. ಸಾರಿಗೆ ಬಸ್‌ಗೆ ಯುವಕ ರಾಯಲ್ ಎನ್‌ಫೀಲ್ಡ್ ಬೈಕ್‌ ಸಮೇತ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬೈಕ್ ಸವಾರ ಸಜೀವ ದಹನವಾಗಿದ್ದಾನೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮುದ್ರಣ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ  ಸಕಾಲಿಕ ಚಿಕಿತ್ಸೆ

ತೀವ್ರ ಸುಟ್ಟಗಾಯ: ಐವರಿಗೆ ಸಕಾಲಿಕ ಚಿಕಿತ್ಸೆ

ಗಾಯಾಳುಗಳು ಸ್ಪರ್ಶ್ ಆಸ್ಪತ್ರೆಗೆ ವರ್ಗಾವಣೆಯಾಗುತ್ತಿದ್ದಂತೆ ಸಾಮೂಹಿಕ ಅಪಘಾತ ಮತ್ತು ಸುಟ್ಟ ಗಾಯಗಳ ನಿರ್ವಹಣೆಯ ತಂಡವು ತಕ್ಷಣ ಸಕ್ರಿಯಗೊಂಡು ಕಾರ್ಯ ಪ್ರವೃತ್ತವಾಯಿತು. ವಿಶೇಷವಾಗಿ ಮೀಸಲಾದ ICU ಹಾಸಿಗೆಗಳನ್ನು ಸಜ್ಜುಗೊಳಿಸಿತು ಮತ್ತು ಕೆಲವೇ ನಿಮಿಷಗಳಲ್ಲಿ ಬಹುಶಿಸ್ತೀಯ ತಜ್ಞರ ತುರ್ತು ತಂಡವನ್ನು ಒಟ್ಟುಗೂಡಿಸಿತು.

Basavaraj Bommai: ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ

Basavaraj Bommai: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ ಸುಮಾರು 5 ಲಕ್ಷ ಕೋಟಿ ಹೊಸ ಸಾಲ ಮಾಡಿ, ದಾಖಲೆ ಸಾಲಗಾರ ಸಿದ್ದರಾಮಯ್ಯ ಎಂದು ಹೆಸರು ಪಡೆದುಕೊಂಡಿದ್ದಾರೆ. ಎಲ್ಲ ಇಲಾಖೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಕಸ ಎಸೆಯಬೇಡಿ ಎಂದಿದ್ದಕ್ಕೆ ಮುಖ್ಯ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ; ನಗದು ದೋಚಿ ದುಷ್ಕರ್ಮಿಗಳು ಪರಾರಿ

ಕಸ ಎಸೆಯಬೇಡಿ ಎಂದಿದ್ದಕ್ಕೆ ಮುಖ್ಯ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆರೋಪಿಗಳ ಗ್ಯಾಂಗ್ ಬರ್ತ್‌ಡೇ ಪಾರ್ಟಿ ಮುಗಿಸಿ, ಶಿಕ್ಷಕರ ಮನೆಯ ಬಳಿ ಕಸ ಎಸೆಯಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರ ಮಗ, ಇಲ್ಲಿ ಕಸ ಎಸೆಯಬೇಡಿ ಎಂದು ಆಕ್ಷೇಪಿಸಿದ್ದಕ್ಕೆ ಶಿಕ್ಷಕ ಹಾಗೂ ಅವರ ಮಗನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದೆ.

Yadgir News: ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ!

ತಂದೆ ಸಾವಿನ ದುಃಖದಲ್ಲೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ತಂದೆಯ ಅಕಾಲಿಕ ಸಾವಿನ ನೋವಿನಲ್ಲೂ ವಿದ್ಯಾರ್ಥಿನಿ ಅನುಸುಜಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದ ಮನಮಿಡಿಯುವ ಘಟನೆ ಮಂಗಳವಾರ ಗುರುಮಠಕಲ್ ಪಟ್ಟಣದ ಕಟ್ಟಲ್ ಗೇರಾ ಓಣಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಅನುಸುಜಾ ತಂದೆಯ ಸಾವಿನ ದುಃಖದಲ್ಲೇ ಎಸ್ಸೆಸ್ಸೆಲ್ಸಿ ಹಿಂದಿ ಪರೀಕ್ಷೆ ಬರೆದು, ಮಧ್ಯಾಹ್ನದ ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾಳೆ.

ಶೀಘ್ರದಲ್ಲೇ ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ fly91 ವಿಮಾನಯಾನ ಸೇವೆ ಶೀಘ್ರ

Pralhad Joshi: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ fly91 ವಿಮಾನಯಾನ ಶುರುವಾಗಲಿದೆ. ಇದೇ ಏಪ್ರಿಲ್ ಎರಡನೇ ವಾರದಿಂದಲೇ fly91 ವಿಮಾನ ಸೇವೆ ಆರಂಭವಾಗಲಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಂಸ್ಥೆಗೆ ಕಾರ್ಯಕ್ಕೆ ಸ್ಥಳಾವಕಾಶ ನೀಡಲಾಗಿದೆ. ಅಂತೆಯೇ fly91 ಸಂಸ್ಥೆ ಈಗಾಗಲೇ ವಿಮಾನಯಾನ ಸೇವೆಯ ಅಗತ್ಯ ಕಾರ್ಯ ಚಟುವಟಿಕೆ ಸಹ ಆರಂಭಿಸಿದೆ.

Belthangady News: ಬೆಳ್ತಂಗಡಿಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಕೆಳಕ್ಕೆ ಬಿದ್ದ ಇಬ್ಬರು ವಿದ್ಯಾರ್ಥಿನಿಯರು; ಶಾಕಿಂಗ್ ವಿಡಿಯೊ ಇಲ್ಲಿದೆ!

ಚಲಿಸುತ್ತಿದ್ದ ಬಸ್‌ನಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿನಿಯರು! video

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಘಟನೆ ನಡೆದಿದೆ. ಬಸ್‌ ಬಾಗಿಲು ಏಕಾಏಕಿ ತೆರೆದುಕೊಂಡಿದ್ದರಿಂದ ಅಕ್ಕ ಕೆಳಗೆ ಬೀಳುತ್ತಿದ್ದಾಗ, ಆಕೆಯನ್ನು ರಕ್ಷಿಸಲು ತಂಗಿ ಮುಂದಾಗಿದ್ದಾಳೆ. ಈ ವೇಳೆ ಇಬ್ಬರೂ ಕೆಳಗೆ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ವಯಸ್ಸು 40 ದಾಟಿದ್ರೂ ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮದುವೆ ಮಾಡಿಲ್ಲ ಎಂದು ತಾಯಿಯೊಂದಿಗೆ ಜಗಳವಾಡಿರುವ ಮಗ, ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಸದ್ಯ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಗೊಂಡ ತಾಯಿಯ ಸ್ಥಿತಿ ಗಂಭೀರವಾಗಿದೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ. ಸಂಜೆ / ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Bidar Rain: ಬೀದರ್‌ನಲ್ಲಿ ಮಳೆ ಅಬ್ಬರ; ಸಿಡಿಲು ಬಡಿದು ಯುವರೈತ ಸಾವು

ಬೀದರ್‌ನಲ್ಲಿ ಮಳೆ ಅಬ್ಬರ; ಸಿಡಿಲು ಬಡಿದು ಯುವರೈತ ಸಾವು

Lightning strike: ಬೇಸಿಗೆಯ ಬಿರುಬಿಸಿಲಿನ ನಡುವೆ ಬೀದರ್‌ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಇದೇ ರೀತಿ ಮುಂದಿನ 6 ದಿನ ಗುಡುಗು ಸಹಿತ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 1ರಂದು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ʼʼನಾನೇ ಅಭ್ಯರ್ಥಿ ಎಂದುಕೊಂಡು ಮತ ಹಾಕಿʼʼ; ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ Video

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ

CM Siddaramaiah campaigns: ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ. ನಾವು ಗೆದ್ದೇ ಗೆಲ್ಲುತ್ತೇವೆ ಎನ್ನುವ ಭರವಸೆ ಇದೆ ಎಂದು ಅವರು ಹೇಳಿದರು.

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಕೆಶಿ ಕಿಡಿ

DK Shivakumar: ಯುದ್ಧಗಳ ನೆಪ, ಕೇಂದ್ರ ಸರ್ಕಾರದ ತಪ್ಪು ನಿರ್ಧಾರ, ನೀತಿಗಳಿಂದಾಗಿ ಇಂದು ದೇಶದ ಜನ ಬೆಲೆ ಏರಿಕೆಯಿಂದ ನರಳುತ್ತಿದ್ದಾರೆ. ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾತ್ರವಲ್ಲ, ಟೋಲ್ ಶುಲ್ಕ, ರೈಲ್ವೇ ಟಿಕೆಟ್ ದರ ಎಲ್ಲವೂ ಹೆಚ್ಚಾಗಿದೆ. ಸಾಮಾನ್ಯ ಜನರ ಮೇಲೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಯುದ್ಧ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಟೀಕಿಸಿದ್ದಾರೆ.

Udupi news: ಉಡುಪಿ ಈಗ ಸಂಪೂರ್ಣ ಸಾಕ್ಷರ ಜಿಲ್ಲೆ, ಘೋಷಣೆ ಮಾತ್ರ ಬಾಕಿ

ಉಡುಪಿ ಈಗ ಸಂಪೂರ್ಣ ಸಾಕ್ಷರ ಜಿಲ್ಲೆ, ಘೋಷಣೆ ಮಾತ್ರ ಬಾಕಿ

ಉಡುಪಿ ಜಿಲ್ಲೆಯಲ್ಲಿ ಒಟ್ಟು 158 ಗ್ರಾಮ ಪಂಚಾಯತ್‌ಗಳಿದ್ದು, ಎಲ್ಲವೂ ಸಮೀಪ ಸಂಪೂರ್ಣ ಸಾಕ್ಷರತೆ ಸಾಧಿಸಿರುವುದಾಗಿ ವರದಿಗಳನ್ನು ಸಲ್ಲಿಸಿವೆ. ಈಗ ಅಂತಿಮ ಹಂತವಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಘೋಷಣೆಗಳನ್ನು ಒಗ್ಗೂಡಿಸಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸಲ್ಲಿಸಲಿದ್ದಾರೆ.

Self Harming: ಕೌಟುಂಬಿಕ ಕಲಹ, ಖಿನ್ನತೆ: ಟೆಕ್ಕೀ ದಂಪತಿ ಆತ್ಮಹತ್ಯೆ

ಕೌಟುಂಬಿಕ ಕಲಹ, ಖಿನ್ನತೆ: ಟೆಕ್ಕೀ ದಂಪತಿ ಆತ್ಮಹತ್ಯೆ

ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಸಹ ಇಬ್ಬರ ನಡುವೆ ಜಗಳ ಆಗಿದೆ.

HD Devegowda: ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೊಂದು ಮ್ಯೂಸಿಯಂ

ಹುಟ್ಟೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೊಂದು ಮ್ಯೂಸಿಯಂ

ದೇವೇಗೌಡರ ಮ್ಯೂಸಿಯಂನಲ್ಲಿ ದೇವೇಗೌಡರ ಜೀವನ ಚರಿತ್ರೆಯನ್ನ ಬಿಂಬಿಸುವ ಸಂಪೂರ್ಣ ಮಾಹಿತಿ ಇರಲಿದೆ. ಬರೋಬ್ಬರಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮ್ಯೂಸಿಯಂ ನಿರ್ಮಾಣವಾಗಲಿದೆ. ದೇವೇಗೌಡರ ಪುತ್ರ, ಮಾಜಿ ಸಚಿವ ಹೆಚ್.ಡಿ. ರೇವಣ್ಣ (HD Revanna) ಮ್ಯೂಸಿಯಂಗೆ ಅಗತ್ಯವಾದ ಭೂಮಿಯನ್ನ ಕೊಡುಗೆಯಾಗಿ ನೀಡಿದ್ದಾರೆ.

Karnataka 1st PUC Results 2026 Topper: ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ; ಅಂಕಪಟ್ಟಿ ಡೌನ್‌ಲೋಡ್‌ಗಾಗಿ ಇಲ್ಲಿದೆ ಲಿಂಕ್‌

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ 2026 ಟಾಪರ್​: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026 ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ, ತಮ್ಮ ರಿಜಿಸ್ಟರ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅಂಕಪಟ್ಟಿಯನ್ನು ಪಡೆಯಬಹುದು.

Toll Price Hike: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಪ್ರಯಾಣ ಮತ್ತಷ್ಟು ತುಟ್ಟಿ, ಟೋಲ್‌ ದರ ಎಷ್ಟು ಹೆಚ್ಚಾಯ್ತು ನೋಡಿ

ಬೆಂಗಳೂರು- ಮೈಸೂರು ಹೈವೇ ಪ್ರಯಾಣ ಮತ್ತಷ್ಟು ತುಟ್ಟಿ, ಎಷ್ಟು ಏರಿಕೆ?

ಪ್ರತಿ ವರ್ಷ ಏಪ್ರಿಲ್‌ 1 ರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಶೇ. 3 ರಿಂದ ಶೇ.5 ರಷ್ಟು ಬೆಲೆ ಹೆಚ್ಚಳ ಮಾಡಲು ಅವಕಾಶವಿದೆ. ಅದರಂತೆಯೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಈ ಬಾರಿ ಶೇ. 3 ರಷ್ಟು ಬೆಲೆ ಹೆಚ್ಚಳ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ನೂತನ ಟೋಲ್‌ ದರ ವಾಹನ ಮಾದರಿಯನ್ನು ಆಧರಿಸಿ 5 ರೂ. ನಿಂದ 25 ರೂ. ವರೆಗೆ ಹೆಚ್ಚಳವಾಗಿದೆ.

Railway News: ಏಪ್ರಿಲ್‌ ಮೊದಲ ವಾರ 3 ದಿನ ರಜೆ; ಉಡುಪಿ, ಗೋವಾ, ಹುಬ್ಬಳ್ಳಿ, ಕೇರಳಕ್ಕೆ ವಿಶೇಷ ರೈಲು

ಏಪ್ರಿಲ್‌ ಮೊದಲ ವಾರ 3 ದಿನ ರಜೆ; ಉಡುಪಿ, ಗೋವಾ, ಹುಬ್ಬಳ್ಳಿಗೆ ವಿಶೇಷ ರೈಲು

ಏಪ್ರಿಲ್‌ ಮೂರರಂದು ಶುಕ್ರವಾರ ಗುಡ್‌ಫ್ರೈಡೇ ಸರ್ಕಾರಿ ರಜೆ ಇದೆ. ಆ ಬಳಿಕ ಶನಿವಾರ, ಭಾನುವಾರ ವಾರಾಂತ್ಯದ ರಜೆ ಸಿಗಲಿದೆ. ಈ ಮೂಲಕ ಒಂದೇ ವಾರದ ಅಂತರದಲ್ಲಿ ಮತ್ತೆ ಸರಣಿ ರಜೆ ಅವಕಾಶ ಬಂದಿದೆ. ಹೀಗಾಗಿ, ಪ್ರಯಾಣಿಕರ ಅನುಕೂಲಕ್ಕಾಗಿ ಎರಡು ವಿಶೇಷ ರೈಲುಗಳನ್ನು ಬೆಂಗಳೂರು- ಗೋವಾ- ಕೇರಳ ನಡುವೆ ಬಿಡಲಾಗಿದೆ.

Loading...