ಬೆಂಗಳೂರಿಗೆ ಸಿಹಿ ಸುದ್ದಿ: ಬಿ ಖಾತಾಗಳಿಗೆ ಎ ಖಾತಾ ಕಾನೂನು ಮಾನ್ಯತೆ ಭಾಗ್ಯ
A Khata: ಕ್ರಮಬದ್ಧವಲ್ಲದ ನಿವೇಶನ ಅಥವಾ ಆಸ್ತಿಗಳಿಗೆ ಬಿಬಿಎಂಪಿಯು 2009 ರಿಂದ ಈಚೆಗೆ ಬಿ-ಖಾತಾ ನೀಡುತ್ತಿತ್ತು. ಬಿ-ಖಾತಾ ನೀಡುವ ಪ್ರಕ್ರಿಯೆಯನ್ನು 2024ರ ಸೆ.30 ರಂದು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ 2009 ರಿಂದ 2024ರ ಸೆ.30ರ ನಡುವೆ ನೀಡಿರುವ ಬಿ-ಖಾತಾ ಆಸ್ತಿ ಸಮಸ್ಯೆ ಪರಿಹರಿಸಲು ಸುದೀರ್ಘ ಚರ್ಚೆ ನಡೆಸಲಾಯಿತು.