ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ
ಆರೋಗ್ಯದಲ್ಲಿ ಏರುಪೇರಾದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ(Shivraj Thangadgi) ನಗರದ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯು ತ್ತಿದ್ದಾರೆ. ಬೆಂಗಳೂರಿನ ಕಡೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವರ ಆರೋಗ್ಯದಲ್ಲಿ ದಿಢೀರನೇ ಏರುಪೇರಾಗಿದೆ. ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.