ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸಿಲುಕಿ ಲ್ಯಾಬ್ ಟೆಕ್ನಿಷಿಯನ್ ಸಾವು
ಹುಬ್ಬಳ್ಳಿ ನಗರದ ಶಿವಶಂಕರ ಕಾಲೋನಿ ಬಳಿ ಘಟನೆ ನಡೆದಿದೆ. ಮನೆಯಿಂದ ಲ್ಯಾಬ್ಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕತ್ತಿಗೆ ಮಾಂಜಾ ದಾರ ಸಿಲುಕಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಮೃತಪಟ್ಟಿದ್ದಾರೆ. ಈ ಸಂಬಂಧ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.