ಮಳೆ ತಂದ ಆತಂಕ: ಡೆಂಘೀ, ಮಲೇರಿಯಾ, ವೈರಲ್ ಜ್ವರ ಹೆಚ್ಚಳ, ಜೊತೆಗೆ ಕೋವಿಡ್!
ಮಳೆ ಬಂದು ನೀರು ಎಲ್ಲೆಡೆ ನಿಂತು ಸೊಳ್ಳೆಗಳು ಹುಟ್ಟಿಕೊಂಡ ಪರಿಣಾಮ ಡೆಂಘೀ (Dengue Fever), ಮಲೇರಿಯಾ, ಚಿಕುನ್‌ಗುನ್ಯಾ ಪ್ರಕರಣಗಳು ಕಂಡುಬರುತ್ತಿವೆ. ಜತೆಗೆ ಸಾಮಾನ್ಯ ಜ್ವರ, ವೈರಲ್ ಸೋಂಕು, ನೆಗಡಿ, ಸುಸ್ತು, ತಲೆನೋವು ಪ್ರಕರಣಗಳೂ ಹೆಚ್ಚಾಗಿವೆ. ಕಲುಷಿತ ನೀರು ಸೇವನೆಯಿಂದ ಬರುವ ಗ್ಯಾಸ್ಟ್ರೋ ಎಂಟರೈಟಿಸ್ ಹೆಚ್ಚಾಗಿದೆ.