ಗೃಹಲಕ್ಷ್ಮಿ ಯೋಜನೆಯ 5000 ಕೋಟಿ ರೂ. ಎಲ್ಲಿ ಹೋಯ್ತು?: ಎಚ್ಡಿಕೆ ಪ್ರಶ್ನೆ
HD Kumaraswamy: ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಕೊಡಬೇಕಿದ್ದ ಗೃಹಲಕ್ಷ್ಮಿ ಹಣ ಎಲ್ಲಿ ಹೋಗಿದೆ? ಆ ಹಣ ಖಜಾನೆಯಲ್ಲಿ ಇದೆಯಾ? ಇಲ್ಲವಾ? ಎನ್ನುವ ಅಂಶವನ್ನು ಸ್ವತಃ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಬೇಕು. ಅವರು ಮತ್ತು ಅವರ ಇಲಾಖೆಯ ಅಧಿಕಾರಿಗಳೇ ಇದಕ್ಕೆ ಜವಾಬ್ದಾರರು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.