ಇನ್ನು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ಜೋಕೆ, ಎಫ್‌ಐಆರ್ ಬೀಳಬಹುದು!
ಸಿಗ್ನಲ್ ಜಂಪ್ ಮಾಡುವುದು ಮತ್ತು ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುವುದು ಬೆಂಗಳೂರಿನಲ್ಲಿ ಸಾಮಾನ್ಯ ಎನ್ನುವ ಸ್ಥಿತಿ ನಿರ್ಮಾಣವಾಗಿರುವ ಕಾರಣ ಇಲಾಖೆ ಕಠಿಣ ಕ್ರಮ ಜಾರಿಗೆ ಮುಂದಾಗಿದೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ಸೆಕ್ಷನ್ 285 (ಸಾರ್ವಜನಿಕ ಮಾರ್ಗದಲ್ಲಿ ಅಪಾಯ ಅಥವಾ ಅಡ್ಡಿ ಉಂಟುಮಾಡುವುದು) ಅಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ.