ಗುಡಿಬಂಡೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ(International Day of Democracy Celebration)ಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಮಾಲೆ ಅರ್ಪಿಸಿ ಗೌರವ ಸಲ್ಲಿಸಲಾಯಿತು. ನಂತರ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಲಾಯಿತು.