ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದ್ದು, ತನಿಖೆ ಪೂರ್ಣಗೊಳಿಸಲು ಮೂರು ತಿಂಗಳ ಗಡುವು ವಿಧಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ) ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸೌಜನ್ಯಾ ತಾಯಿ ಕುಸುಮಾವತಿ ಗೌಡ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.