ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್‌ಗೆ ಗ್ರೀನ್ ಸಿಗ್ನಲ್
ಈಗಾಗಲೇ ರಾಜ್ಯಕ್ಕೆ 2 ಹೈ ಸ್ಪೀಡ್ ರೈಲು ಕಾರಿಡಾರ್‌ಗಳನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಅದಕ್ಕೆ ಹೆಚ್ಚುವರಿಯಾಗಿ ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ನೀಡಲು ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ್ದಾರೆ.