ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ
Madhu Bangarappa: ಶಿವಮೊಗ್ಗ ನಗರದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳೊಂದಿಗೆ, ಸಾರ್ವಜನಿಕರು ಹಾಗೂ ಆಸ್ಪತ್ರೆ ನಾನ್ ಕ್ಲಿನಿಕಲ್ ಸಿಬ್ಬಂದಿಗಳೊಂದಿಗೆ ಮಾತನಾಡಿ, ಕುಂದು ಕೊರತೆ ಆಲಿಸಿದರು.