ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಎಚ್ಎಂಟಿ ಕೈಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ಎರಡೂವರೆ ಕಿಲೋ ಮೀಟರ್‌ ಕ್ಯೂ ನಿಂತು ಮುಗಿಬಿದ್ದು ಖರೀದಿಸಿದ ಜೆನ್‌ ಝೀಗಳು; ಒಂದೇ ದಿನ 35 ಲಕ್ಷ ರುಪಾಯಿ ವಹಿವಾಟು!

ಎಚ್ಎಂಟಿ ಕೈಗಡಿಯಾರಗಳ ಇಂಡಿಪೆಂಡೆನ್ಸ್ ಡೇ ಸೇಲ್; ದಾಖಲೆಯ ವಹಿವಾಟು

HD Kumaraswamy: ಎಚ್ಎಂಟಿ ಕೈಗಡಿಯಾರಗಳ ಬಗ್ಗೆ ಜನರಲ್ಲಿ ಇವತ್ತಿಗೂ ಅಭಿಮಾನ ಗೌರವ ಇದೆ. ಹಿಂದೆ ಎಚ್ಎಂಟಿ ಗಡಿಯಾರ ಕಟ್ಟುವುದು ಎಂದರೆ ಹೆಮ್ಮೆ ಮತ್ತು ಪ್ರತಿಷ್ಠೆಯ ಸಂಗತಿಯಾಗಿತ್ತು. ಆ ವೈಭವವನ್ನು ಮರಳಿ ತರುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Haveri News: ಅಪಾಯಕಾರಿ ತಗ್ಗು-ಗುಂಡಿಯಿಂದ ಕೂಡಿರುವ ದೇವಗಿರಿ ರಸ್ತೆಯಿಂದ ಸ್ಥಳೀಯರಿಗೆ ಕಿರಿಕಿರಿ; ವಾಹನ ಸವಾರರೇ ಎಚ್ಚರ

ಅಪಾಯ ಆಹ್ವಾನಿಸುವ ಹಾವೇರಿ ಜಿಲ್ಲೆಯ ದೇವಗಿರಿ ರಸ್ತೆ

Haveri News: ಹಾವೇರಿಯಿಂದ ಸವಣೂರು ಕಡೆ ಸಾಗುವ ಪ್ರಮುಖ ರಸ್ತೆಯಲ್ಲಿ ದೇವಗಿರಿ ಗ್ರಾಮಕ್ಕೆ ಪ್ರವೇಶಿಸುತ್ತಿದ್ದಂತೆ ರಸ್ತೆಯುದ್ದಕ್ಕೂ ಬೃಹತ್ ಗುಂಡಿಗಳು, ಕೆಸರು ಹಾಗೂ ನೀರು ನಿಂತಿರುವ ದೃಶ್ಯ ಕಂಡುಬರುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ʼʼಭ್ರಷ್ಟಾಚಾರ ಆರೋಪ ಹೊತ್ತ ನಾಗೇಂದ್ರ ಎಂದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಭಯʼʼ: ಬಿಜೆಪಿ ಆರೋಪಕ್ಕೆ ಕಾರಣವೇನು?

ʼʼನಾಗೇಂದ್ರ ಎಂದರೆ ಸಿಎಂಗೆ ಭಯವೇ?ʼʼ ಬಿ.ವೈ. ವಿಜಯೇಂದ್ರ ಪ್ರಶ್ನೆ

BY Vijayendra: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ನಾಗೇಂದ್ರ ಭ್ರಷ್ಟಾಚಾರದ ಆರೋಪ ಹೊತ್ತು ರಾಜೀನಾಮೆ ನೀಡಿದ್ದರು. ಈಗ ಮತ್ತೆ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಅನಿವಾರ್ಯತೆ ಯಾಕೆ ಬಂತು ನಿಮಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

''ಮೂರ್ತಿ ಚಿಕ್ಕದಾದರೂ ಜಠರಾಗ್ನಿಯ ಕೀರ್ತಿ ದೊಡ್ದದು'': ರಾಘವೇಶ್ವರ ಭಾರತೀ ಶ್ರೀ

ಮೂರ್ತಿ ಚಿಕ್ಕದಾದರೂ ಜಠರಾಗ್ನಿಯ ಕೀರ್ತಿ ದೊಡ್ದದು: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ವಿಷ್ಣುವಿಗೆ ದಶಾವತಾರಗಳಂತೆ ಅಗ್ನಿಗೆ ಪಂಚಾವತಾರಗಳಿದ್ದು, ನಮ್ಮ ದೇಹದಲ್ಲಿ ಅಗ್ನಿಯು ಐದು ರೂಪದಲ್ಲಿ ಅಭಿವ್ಯಕ್ತವಾಗಿವೆ. ಪಾಚಕಾಗ್ನಿಯು ನಾಭಿಯ ಸ್ಥಾನದಲ್ಲಿ ಇದ್ದರೆ, ರಂಜಕಾಗ್ನಿ ನಾಭಿಗಿಂತ ಸ್ಚಲ್ಪ ಮೇಲಿದೆ. ಸಾಧಕಾಗ್ನಿ ಹೃದಯದ ಭಾಗದಲ್ಲಿದ್ದು, ಆಲೋಚಕಾಗ್ನಿ ಕಣ್ಣಿನ ಸಮೀಪ ಇದೆ. ಭ್ರಾಜಕಾಗ್ನಿ ದೇಹವನ್ನೆಲ್ಲಾ ವ್ಯಾಪಿಸಿದೆ. ಪಾಚಕಾಗ್ನಿ ಆಹಾರವನ್ನು ಪಚನಗೊಳಿಸಿ ದೇಹಕ್ಕೆ ಶಕ್ತಿತುಂಬಿದರೆ, ರಂಜಕಾಗ್ನಿ ರಕ್ತಕ್ಕೆ ಕೆಂಪುಬಣ್ಣ ಕಾರಣ. ಸಾಧಕಾಗ್ನಿಯು ಮುಕ್ತಿಗೆ ಕಾರಣವಾದರೆ, ಆಲೋಚಕಾಗ್ನಿಯು ಜ್ನಾನನೇತ್ರವಾಗಿ ಕಾರ್ಯನಿರ್ವಹಿಸುತ್ತದೆ. ದೇಹದಲ್ಲಿನ ಕಾಂತಿಗೆ ಭ್ರಾಜಕಾಗ್ನಿ ಕಾರಣವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ʼʼಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರಿಗೆ ಅನ್ಯಾಯʼʼ: ಸಿಎಂ ಡಿ.ಕೆ. ಶಿವಕುಮಾರ್‌ ಭೇಟಿಯಾಗಿ ಪ್ರಕಾಶ್‌ ರಾಜ್‌ ಹೇಳಿದ್ದೇನು?

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅನ್ಯಾಯ; ಕ್ರಮ ಕೈಗೊಳ್ಳುವಂತೆ ಸಿಎಂಗೆ ಮನವಿ

Prakash Raj: ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ 'ಎದ್ದೇಳು ಕರ್ನಾಟಕ' ಮತ್ತಿತರ ಸಂಘಟನೆಗಳ ಪ್ರತಿನಿಧಿಗಳು ಭೇಟಿ ಮಾಡಿ ಎಸ್‌ಐಆರ್‌ ಲೋಪದೋಷದ ಬಗ್ಗೆ ಸಮಾಲೋಚನೆ ನಡೆಸಿ, ಮನವಿ ಪತ್ರ ಸಲ್ಲಿಸಿದರು.

Chinthamani News: ಅಭಿಮಾನಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಯುವ ನಾಯಕ ಅಬ್ದುಲ್ ಸಮದ್ ಬರ್ತ್‌ಡೇ ಸಂಭ್ರಮ!

ಕೈವಾರದಲ್ಲಿ ವಿಜೃಂಭಿಸಿದ ಕಾಂಗ್ರೆಸ್ ಮುಖಂಡ ಅಬ್ದುಲ್ ಸಮದ್ ಜನ್ಮದಿನ

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದ ಕೇಕನ್ನು ಕತ್ತರಿಸಿ ಎಲ್ಲರಿಗೂ ಹಂಚಲಾಯಿತು. ಅಬ್ದುಲ್ ಸಮದ್ ಅವರು ತಮ್ಮ ಸ್ನೇಹಿತರಿಗೆ ಕೇಕ್ ತಿನ್ನಿಸುತ್ತಾ,ಅವರ ಪ್ರೀತಿ ಮತ್ತು ಹಾರೈಕೆಗೆ ಧನ್ಯವಾದಗಳನ್ನು ಸಲ್ಲಿಸಿದರು.ಎಲ್ಲರೂ ಸೇರಿ ಹುಟ್ಟುಹಬ್ಬದ ಹಾಡನ್ನು ಹಾಡಿ, ಚಪ್ಪಾಳೆ ತಟ್ಟುತ್ತಾ ಸಂಭ್ರಮಿಸಿದರು.

Isha Gramotsava: ಈಶ ಗ್ರಾಮೋತ್ಸವ: ಮೈಸೂರಿನಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳ ಸಮಾಗಮ

ಈಶ ಗ್ರಾಮೋತ್ಸವ: ಮೈಸೂರಿನಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳ ಸಮಾಗಮ

ತೀವ್ರ ಪೈಪೋಟಿಯಿಂದ ಕೂಡಿದ್ದ ಪುರುಷರ ವಾಲಿಬಾಲ್ ವಿಭಾಗದಲ್ಲಿ ಚಾಮರಾಜನಗರ ಜಿಲ್ಲೆಯ ರಾಮಾಪುರದ ಬುದ್ಧ ಸೂಪರ್ ಟೀಂ ವಿಭಾಗೀಯ ಚಾಂಪಿಯನ್ ಪಟ್ಟ ಅಲಂಕರಿಸಿತು. ನಂಜನಗೂಡಿ ನ ಕಡಕೋಳದ ಚಾಮುಂಡಿ ಬಾಯ್ಸ್ ದ್ವಿತೀಯ, ಚಿಕ್ಕಬಳ್ಳಾಪುರದ ಮಾಸ್ತೇನ ಹಳ್ಳಿಯ ಅಪ್ಪು ಬಾಯ್ಸ್ ತೃತೀಯ ಹಾಗೂ ಕೋಲಾರದ ಮಾರ್ಜೇನಹಳ್ಳಿಯ ಎಂ.ಆರ್.ಜೆ ಬ್ರದರ್ಸ್ ನಾಲ್ಕನೇ ಸ್ಥಾನ ಪಡೆದವು.

Chikkaballapur News: ದಲಿತ ರೈತರ ಭೂಸ್ವಾಧೀನಕ್ಕೆ ಆಗ್ರಹ: ಆ.27ರಂದು ಸಿಂಗಾಟಕದಿರೇನಹಳ್ಳಿಯಲ್ಲಿ ಭೂ ಪ್ರವೇಶ ಚಳುವಳಿ

ಆ.27ರಂದು ಸಿಂಗಾಟಕದಿರೇನಹಳ್ಳಿಯಲ್ಲಿ ಭೂ ಪ್ರವೇಶ ಚಳುವಳಿ

ನಂದಿ ಹೋಬಳಿಯ ಸಿಂಗಾಟಕದಿರೇನಹಳ್ಳಿ ಗ್ರಾಮದ ದಲಿತರು 1972-73ನೇ ಸಾಲಿನಿಂದ ಅಕ್ರಮ ಸಕ್ರಮ ಕಾಯ್ದೆಯಡಿ ಸರ್ವೆ ನಂಬರ್ 67ರ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ರೈತರ ಬಳಿ ಸಾಗುವಳಿ ಚೀಟಿ ಸೇರಿದಂತೆ ಪೂರಕ ದಾಖಲೆಗಳಿದ್ದರೂ ಅರಣ್ಯ ಇಲಾಖೆ ವಿನಾಕಾರಣ ಕಿರುಕುಳ ನೀಡುತ್ತಿದೆ

Shidlaghatta News: ಮಹಿಳೆಯರ ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸುವುದು ಅಗತ್ಯ: ಹೇಮಾವತಿ

ಮಹಿಳೆಯರ ಉತ್ಪನ್ನಗಳಿಗೆ ಸ್ಥಳೀಯ ಮಾರುಕಟ್ಟೆ ಕಲ್ಪಿಸುವುದು ಅಗತ್ಯ

ಮೇಳದಲ್ಲಿ ಮಹಿಳಾ ಸಂಘಗಳ ಸದಸ್ಯರು ತಯಾರಿಸಿರುವ ಆಹಾರ ಪದಾರ್ಥಗಳು, ಕರಕುಶಲ ವಸ್ತು ಗಳು ಹಾಗೂ ವಿವಿಧ ಗೃಹೋಪಯೋಗಿ ಉತ್ಪನ್ನಗಳನ್ನು ಮಾರಾಟಕ್ಕೆ ಇಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಳಕ್ಕೆ ಭೇಟಿ ನೀಡಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರನ್ನು ಪ್ರೋತ್ಸಾಹಿಸಬೇಕು

ಸೋನಿಯಾ ಗಾಂಧಿ ನಮ್ಮ ದೇಶದವರಲ್ಲ, ಅವರಲ್ಲಿ ಹರಿಯುತ್ತಿರುವುದು ಇಟಲಿ ರಕ್ತ ಎಂದ ಎಚ್‌.ಡಿ. ಕುಮಾರಸ್ವಾಮಿ

ʼʼಸೋನಿಯಾ ಗಾಂಧಿ ನಮ್ಮ ದೇಶದವರಲ್ಲʼʼ: ಎಚ್‌.ಡಿ. ಕುಮಾರಸ್ವಾಮಿ

HD Kumaraswamy: ಸೋನಿಯಾ ಗಾಂಧಿ ಅವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಸೋನಿಯಾ ಗಾಂಧಿ ಅವರೇನು ನಮ್ಮ ದೇಶದವರಾ? ಅವರು ಮದುವೆಯಾಗಿ ನಮ್ಮ ದೇಶಕ್ಕೆ ಬಂದರು ಅಷ್ಟೇ. ಅವರಲ್ಲಿ ಹರಿಯುತ್ತಿರುವುದು ಇಟಲಿಯ ರಕ್ತ ಅಲ್ಲವೇ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Bengaluru Power Cut: ಆಗಸ್ಟ್‌18, 19ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಆಗಸ್ಟ್‌ 18,19ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ. ಯಲಹಂಕ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಆ. 18ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಎಸ್‌ಟಿ ನಿಗಮದ ಹಣದ ಅಕ್ರಮ ವರ್ಗಾವಣೆ: ನಾಗೇಂದ್ರರಿಂದ ಸ್ಪಷ್ಟನೆಗೆ ಸೋನಾಲಿ ಸರ್ನೋಬತ್ ಆಗ್ರಹ

ಎಸ್‌ಟಿ ನಿಗಮದ ಹಣದ ಅಕ್ರಮ ವರ್ಗಾವಣೆ: ಸ್ಪಷ್ಟನೆಗೆ ಸರ್ನೋಬತ್ ಆಗ್ರಹ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರು ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್(Dr Sonali Sarnobat) ಆಗ್ರಹಿಸಿದ್ದಾರೆ.

Gudibande News: ಭೂಮಾನಂದ ಹತ್ಯೆ ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹ

ಭೂಮಾನಂದ ಹತ್ಯೆ ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹ

ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳ ಬೇಕು. ಅಲ್ಲದೆ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಅಗತ್ಯ ಭದ್ರತೆ ಒದಗಿಸಬೇಕು. ರಾಜ್ಯದಲ್ಲಿ ದಲಿತರು ಹಾಗೂ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು.

ಬೆಂಗಳೂರಿನ ಸ್ಮೃತಿ ಅಕಾಡೆಮಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಂಗಳೂರಿನ ಸ್ಮೃತಿ ಅಕಾಡೆಮಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Independence Day 2026: ಬೆಂಗಳೂರು ನಗರದ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಸ್ಮೃತಿ ಅಕಾಡೆಮಿ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸ್ಮೃತಿ ಅಕಾಡೆಮಿ ಸ್ಕೂಲ್‌ನ ಸಹ ಸಂಸ್ಥಾಪಕ ರವಿ ರಾಮಚಂದ್ರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

Festival Season 2026: ವರಮಹಾಲಕ್ಷ್ಮೀಯ ಅಲಂಕಾರಿಕ ವಸ್ತ್ರಾಭರಣಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌

ವರಮಹಾಲಕ್ಷ್ಮೀಯ ಅಲಂಕಾರಿಕ ವಸ್ತ್ರಾಭರಣಗಳಿಗೆ ಬೇಡಿಕೆ

Festival Season 2026: ವರಮಹಾಲಕ್ಷ್ಮೀಯ ಅಲಂಕಾರಿಕ ಸಾಮಗ್ರಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿದೆ. ವರಮಹಾಲಕ್ಷ್ಮೀಯ ಅಲಂಕಾರಿಕ ವಸ್ತ್ರಾಭರಣಗಳು, ಅಲಂಕಾರಿಕ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಿದೆ. ಯಾವ್ಯಾವುದಕ್ಕೆ ಬೇಡಿಕೆ? ಈ ಬಾರಿ ಯಾವ್ಯಾವ ಡಿಸೈನ್‌ನವು ಲಭ್ಯ? ಎಂಬುದರ ಬಗ್ಗೆ ಇಲ್ಲಿದೆ ಡಿಟೇಲ್ಸ್.

ನಾಗರ ಪಂಚಮಿ ಹಬ್ಬದಂದೇ ಘೋರ ದುರಂತ; ಹಾವು ಕಡಿದು ಇಬ್ಬರು ಸಾವು

ನಾಗರ ಪಂಚಮಿ ಹಬ್ಬದಂದೇ ಹಾವು ಕಡಿದು ಇಬ್ಬರು ಸಾವು

Snake Bite: ನಾಗರ ಪಂಚಮಿ ಹಬ್ಬದಂದು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಡಿದು ಇಬ್ಬರು ಮೃತಪಟ್ಟ ಘಟನೆ ಬೀದರ್‌ ಮತ್ತು ಬೆಳಗಾವಿಯಲ್ಲಿ ನಡೆದಿದೆ. ಮೃತರನ್ನು ಮೃತರನ್ನು ಬೀದರ್‌ನ ಭೀಮ ಜಾಧವ (48) ಮತ್ತು ಬೆಳಗಾವಿಯ ಸತ್ಯವ್ವ ಶಿಂಗೆ (43) ಎಂದು ಗುರುತಿಸಲಾಗಿದೆ.

BJP Protest: ಚಿಕ್ಕಬಳ್ಳಾಪುರದಲ್ಲಿ ನಾಗೇಂದ್ರ ವಿರುದ್ಧ ಬಿಜೆಪಿ ಅನಿರ್ದಿಷ್ಟಾವಧಿ ಧರಣಿ

ಚಿಕ್ಕಬಳ್ಳಾಪುರದಲ್ಲಿ ನಾಗೇಂದ್ರ ವಿರುದ್ಧ ಬಿಜೆಪಿ ಅನಿರ್ದಿಷ್ಟಾವಧಿ ಧರಣಿ

ಹಗರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ವಿರುದ್ಧ ತನಿಖೆ ಮುಂದುವರಿದಿರುವಾಗಲೇ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರು ವುದು ಅಕ್ಷಮ್ಯ ಎಂದು ಸುಧಾಕರ್ ಟೀಕಿಸಿದರು. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆ ಯಲ್ಲಿ ಅವರಿಗೆ ಇನ್ನೂ ಯಾವುದೇ ಕ್ಲೀನ್‌ಚಿಟ್ ಸಿಕ್ಕಿಲ್ಲ

Dr M C Sudhakar: ಚಿಂತಾಮಣಿಯಲ್ಲಿ ಕ್ರೀಡಾಂಗಣ, ಸಿಂಥೆಟಿಕ್ ಟ್ರ್ಯಾಕ್ ಅಭಿವೃದ್ಧಿ: ಶಾಸಕ ಡಾ.ಎಂ.ಸಿ.ಸುಧಾಕರ್

ಕೈವಾರದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ನಮ್ಮ ಚಿಂತಾಮಣಿಯಲ್ಲಿ ಕ್ರೀಡಾಂಗಣ, ಸಿಂಥೆಟಿಕ್ ಟ್ರ್ಯಾಕ್ ಹಾಗೂ ಕ್ರಿಕೆಟ್ ಸ್ಟೇಡಿಯಂ ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಗ್ರಾಮೀಣ ಭಾಗದ ಪ್ರತಿಭಾವಂತ ಯುವಕರು ಮತ್ತು ಮಕ್ಕಳು ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯಬೇಕು

Gauribidanur News: ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಬೆಳೆಸಿಕೊಳ್ಳಿ

ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಬೆಳೆಸಿಕೊಳ್ಳಿ

ನೇಮಕಾತಿ ಪ್ರಕ್ರಿಯೆ, ಸಂದರ್ಶನ ಎದುರಿಸುವ ವಿಧಾನ ಹಾಗೂ ಕಂಪನಿಗಳ ನಿರೀಕ್ಷೆಗಳ ಕುರಿತು ಉದ್ಯೋಗಾಕಾಂಕ್ಷಿಗಳಿಗೆ ಮಾರ್ಗ ದರ್ಶನ ನೀಡಿದರು. ನಗರ ಪೊಲೀಸ್ ಠಾಣೆಯ ಪಿಎಸ್‌ಐ ವರಲಕ್ಷ್ಮಿ ಮಾತನಾಡಿ, ನಿರಂತರವಾಗಿ ಹೊಸ ಕೌಶಲ್ಯಗಳನ್ನು ಕಲಿಯುವ ಮೂಲಕ ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು

ಮದ್ಯದ ಬಾಟಲ್‌ ಎದುರುಗಡೆ ಇಟ್ಟುಕೊಂಡು ‘ಯಾರಿವಳು ಯಾರಿವಳು’ ಸಾಂಗ್ ಹಾಡಿದ ಕಾವಿಧಾರಿ; ಸ್ವಾಮೀಜಿಯ ಬಿಂದಾಸ್ ವಿಡಿಯೊ ವೈರಲ್

ಮದ್ಯದ ಬಾಟಲ್‌ ಎದುರುಗಡೆ ಇಟ್ಟುಕೊಂಡು ಸಿನಿಮಾ ಗೀತೆ ಹಾಡಿದ ಸ್ವಾಮೀಜಿ

Viral Video: ಕಲಬುರಗಿಯ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಶ್ರೀ ಮರುಳಾರಾಧ್ಯ ಸ್ವಾಮೀಜಿ ಅವರ ವಿಡಿಯೊವೊಂದು ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ಸಂಚಲನ ಮೂಡಿಸಿದೆ. ವೈರಲ್‌ ವಿಡಿಯೊದಲ್ಲಿ ಅವರು ಕೈಯಲ್ಲಿ ಮೈಕ್ ಹಿಡಿದು ‘ಯಾರಿವಳು ಯಾರಿವಳು’ ಎಂಬ ಸಿನೆಮಾ ಹಾಡನ್ನು ಹಾಡುತ್ತಾ ಸಂಭ್ರಮಿಸುತ್ತಿರುವ ದೃಶ್ಯ ಕಂಡುಬಂದಿದೆ. ಎದುರುಗಡೆ ಮದ್ಯದ ಬಾಟಲ್‌ಗಳು ಕಾಣಿಸಿಕೊಂಡಿದೆ.

ಚಾಮರಾಜನಗರದಲ್ಲಿ ಶೂಟೌಟ್‌; ಕರ್ನಾಟಕ-ತಮಿಳುನಾಡು ನಡುವೆ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಕಾರಣವಾಯ್ತು ಮೂವರು ತಮಿಳರ ಸಾವು

ಚಾಮರಾಜನಗರ ಗುಂಡಿನ ದಾಳಿ; ತಮಿಳುನಾಡು ಸಿಎಂ ವಿಜಯ್‌ ಕಿಡಿ

Tamil Nadu CM C Joseph Vijay: ಚಾಮರಾಜನಗರದ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ತಮಿಳರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ ಎಂದು ಹೇಳಿದರೆ, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಘಟನೆಯನ್ನು ಹತ್ಯಾಕಾಂಡ ಎಂದು ಆರೋಪಿಸಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದು, ಪ್ರಕರಣದ ಕುರಿತು ಪ್ರತಿಭಟನೆಗಳೂ ನಡೆದಿವೆ.

ನೈಸ್ ಯೋಜನೆಯನ್ನು ಟೇಕ್ ಓವರ್ ಮಾಡಲು ಸಂಚು ನಡೆಯುತ್ತಿದೆ: ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

ನೈಸ್ ಯೋಜನೆಯನ್ನು ಟೇಕ್ ಓವರ್ ಮಾಡಲು ಹೊರಟಿದ್ದಾರೆ: ಎಚ್‌ಡಿಕೆ

HD Kumaraswamy: ನನಗೆ ಒಂದು ಮಾಹಿತಿ ಇದೆ, ನೈಸ್ ಯೋಜನೆಯನ್ನು ಆ ಕಂಪನಿಯಿಂದ ಯಾರೋ ಈಗ ಟೇಕ್ ಓವರ್ ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿಯನ್ನು ಕೇಳುತ್ತೇನೆ, ಇದರಲ್ಲಿ ಯಾರ ಪಾಲಿದೆ? ಯಾರು ಅದನ್ನು ಟೇಕ್ ಓವರ್ ಮಾಡಲು ಹೊರಟಿದ್ದಾರೆ? ಇವೆಲ್ಲವನ್ನೂ ಅವರೇ ಹೇಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಾಲು ಸಾಲು ಯಡವಟ್ಟಿನ ಬಳಿಕವೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಂದುವರಿದ ಅವ್ಯವಸ್ಥೆ; ಪ್ರಜ್ವಲ್‌ ರೇವಣ್ಣ ಬಳಿ ಮತ್ತೊಂದು ಫೋನ್‌ ಪತ್ತೆ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ಬಳಿ ಮತ್ತೊಂದು ಫೋನ್‌ ಪತ್ತೆ

Prajwal Revanna: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್‌ ರೇವಣ್ಣ ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಿರುವ ವಿಡಿಯೊ ಇತ್ತೀಚೆಗೆ ಹೊರ ಬಂದು ಭಾರಿ ಸಂಚಲನ ಮೂಡಿಸಿತ್ತು. ಇದೀಗ ಮತ್ತೆ ಅವರ ಸೆಲ್‌ನಲ್ಲಿ ಮತ್ತೊಂದು ಫೋನ್‌ ಪತ್ತೆಯಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ

Cognizant: ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮಕ್ಕಾಗಿ ದೇಶದ 37 ನಗರಗಳ 58 ಪ್ರತಿಷ್ಠಿತ ಬಿಸಿನೆಸ್ ಸ್ಕೂಲ್‌ಗಳಿಂದ ಹೊಸದಾಗಿ 489 ಪದವೀಧರರನ್ನು ನೇಮಕ ಮಾಡಿಕೊಂಡಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

Loading...