ಇಂದು ಕೋಲಾರ, ಚಿಕ್ಕಬಳ್ಳಾಪುರ ಸೇರಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ನಿರೀಕ್ಷೆ
ಕರ್ನಾಟಕ ಹವಾಮಾನ ವರದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.