ವಿಶ್ವವಾಣಿ ಪುಸ್ತಕ ಪ್ರಕಾಶನದ 8 ಕೃತಿ ಬಿಡುಗಡೆ
Vishwavani Pustaka: ʼʼಕನ್ನಡದಲ್ಲಿ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರ ಬಳಿಕ ಅಸಂಖ್ಯಾತ ಹೊಸ ಓದುಗರನ್ನು ಸೃಷ್ಟಿಸಿದ ಕೀರ್ತಿ ವಿಶ್ವವಾಣಿ ದಿನ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ಸಲ್ಲುತ್ತದೆʼʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಶ್ವವಾಣಿ ದಿನಪತ್ರಿಕೆ ಬಳಗದ ಆಶ್ರಯದಲ್ಲಿ ನಡೆದ 8 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.