ಅಸ್ಸಾಂನಲ್ಲಿ ಹಿಟ್ಲರ್ ಆಡಳಿತಕ್ಕೆ ಕೊನೆ ಹಾಡಬೇಕು: ಡಿ.ಕೆ. ಶಿವಕುಮಾರ್
ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಪಕ್ಷದ ಹಿರಿಯ ವೀಕ್ಷಕರ ಜವಾಬ್ದಾರಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಗುವಾಹಟಿಗೆ ಭೇಟಿ ನೀಡಿದ ವೇಳೆ ಅಲ್ಲಿನ ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ಟೀಕೆಗಳ ಸುರಿಮಳೆಗೈದಿದ್ದಾರೆ.