ಡಿಜಿಟಲ್ ವೀಕ್ಷಣೆಯಲ್ಲಿ ದಾಖಲೆ ನಿರ್ಮಿಸಿದ ಮಹಿಳಾ ವಿಶ್ವಕಪ್ ಫೈನಲ್
ಟಿವಿ ದತ್ತಾಂಶದ ಪ್ರಕಾರ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಫೈನಲ್ ಪಂದ್ಯ 92 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಇದು 2024 ರ ಟಿ20 ವಿಶ್ವಕಪ್ ಫೈನಲ್ ಮತ್ತು 2023 ರ ವಿಶ್ವಕಪ್ ಫೈನಲ್‌ಗೆ ಸಮಾನವಾಗಿದೆ. ನ.2ರಂದು ನವಿ ಮುಂಬೈನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ 52 ರನ್ ಭರ್ಜರಿ ಗೆಲುವು ಸಾಧಿಸಿತ್ತು.