ಆನೇಕಲ್ನಲ್ಲಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರ ಫೈರಿಂಗ್
Bengaluru Crime News: ಕಿಡ್ನಾಪ್ ಮತ್ತು ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್ ಕಾನ್ಸ್ಟೇಬಲ್ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ.