About Us Advertise with us Be a Reporter E-Paper

Breaking Newsರಾಜ್ಯ

ಕಾಲುವೆಗೆ ಬಿದ್ದ ಟ್ರ್ಯಾಕ್ಟರ್, ಇಬ್ಬರ ಮೃತದೇಹ ಪತ್ತೆ

ಕೊಪ್ಪಳ: ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ನೀರುಪಾಲಾಗಿರುವ ದುರ್ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಬಳಿ ಸಂಭವಿಸಿದೆ.

ಗಂಗಾವತಿ ತಾಲೂಕಿನ ಸೋಮನಾಳ ಸೇತುವೆ ಸಮೀಪದ ಕಾಲುವೆಗೆ ಟ್ರ್ಯಾಕ್ಟರ್ ಬಿದ್ದಿದೆ. ಟ್ರ್ಯಾಕ್ಟರ್ ನಲ್ಲಿ ಡ್ರೈವರ್ ಸೇರಿ 15 ಮಂದಿ ಮಹಿಳೆಯರು ಇದ್ದರು. ಸದ್ಯ 11 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ನಾಲ್ವರು ಮಹಿಳಾ ಕಾರ್ಮಿಕರು ನೀರುಪಾಲಾಗಿದ್ದು, ಅವರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಮತ್ತಿಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಸೋಮವಾರ ಗಂಗಾವತಿ ತಾಲೂಕಿನ ನವಲಿ ಗ್ರಾಮದ ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ವಾಪಸ್ ಬರುತ್ತಿದ್ದಾಗ ಸೋಮನಾಳ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರಾಲಿ ಸಮೇತ ಎಡದಂಡೆ ಕಾಲುವೆಗೆ ಉರುಳಿ ಬಿದ್ದಿದೆ.

Tags

Related Articles

Leave a Reply

Your email address will not be published. Required fields are marked *

Language
Close