About Us Advertise with us Be a Reporter E-Paper

Breaking Newsರಾಜ್ಯ

ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ: ಉಪಮುಖ್ಯಮಂತ್ರಿ

ತುಮಕೂರು: ಕೇಂದ್ರ ಸರಕಾರ ಸತತವಾಗಿ ಇಂಧನ ಬೆಲೆ ಏರಿಕೆ ಮಾಡಿರುವುದರಿಂದ, ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ ಎಂದು ಉಪಮುಖ್ಯಮಂತ್ರಿ ಡಿ.ಪರಮೇಶ್ವರ್ ಹೇಳಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ದರದಲ್ಲಿ ಸತತ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಪ್ರಯಾಣ ದರದಲ್ಲಿ ಹೆಚ್ಚಳವಾಗಲಿದೆ. ಸಾರಿಗೆ ಸಚಿವರು ದರ ಹೆಚ್ಚಳದ ಪ್ರಸ್ತಾಪ ಇಟ್ಟಿದ್ದಾರೆ. ರಾಜ್ಯ ಸರ್ಕಾರ ಸೆಸ್ ಕಡಿಮೆ ಮಾಡುವ ಪ್ರಶ್ನೆಯೇ‌ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ, ಮೋದಿ ಪ್ರಧಾನಿ ಆದ ಬಳಿಕ 16 ಬಾರಿ ಪೆಟ್ರೋಲ್, ಡೀಸೆಲ್ ದರದಲ್ಲಿ ಹೆಚ್ಚಳ ಮಾಡಿದ್ದಾರೆ. ಇದು ಮೋದಿ ಅವರ ಆಡಳಿತ ವೈಖರಿಯನ್ನು ತೋರಿಸುತ್ತಿದೆ. ತೈಲ ಉತ್ಪನ್ನ ರಾಷ್ಟ್ರಗಳಲ್ಲಿ ಪೆಟ್ರೋಲ್ ದರ ತೀರಾ ಕಡಿಮೆ ಇದೆ. ಹಾಗಾಗಿ ಭಾರತದಲ್ಲೂ ದರ ಕಡಿಮೆಯಾಗಬೇಕು. ಆದರೆ ಕೇಂದ್ರ ಸರ್ಕಾರ ಬೆಲೆ ಕಡಿಮೆ ಮಾಡುತ್ತಿಲ್ಲ. ಇದರಿಂದ ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕಿಡಿಕಾರಿದರು.

Tags

Related Articles

Leave a Reply

Your email address will not be published. Required fields are marked *

Language
Close