About Us Advertise with us Be a Reporter E-Paper

Breaking Newsಪ್ರಚಲಿತವಿದೇಶ

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಹಿಂದೂ ಸಂಸದೆ ತುಳಸಿ ಗಬ್ಬಾರ್ಡ್ ಸ್ಪರ್ಧೆ

dfdfdfdfyjhdfhnyrfjh

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನ ಮೊದಲ ಹಿಂದೂ ಸಂಸದೆ ತುಳಸಿ ಗಬ್ಬಾರ್ಡ್ ಅವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಸಿಎನ್ಎನ್‌ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ‘ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಮುಂದಿನ ವಾರದಲ್ಲಿ ಅಧಿಕೃತವಾಗಿ ಪ್ರಕಟಿಸುವುದಾಗಿ’ ತುಳಸಿ ಹೇಳಿದ್ದಾರೆ. 37 ವರ್ಷದ ತುಳಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೊದಲ ಹಿಂದೂ ಮಹಿಳೆಯಾಗಿದ್ದಾರೆ.

ತುಳಸಿ ಅವರು ಡೆಮಾಕ್ರಟಿಕ್ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರೆ. ಅವರು ಸದ್ಯ ಅಮೆರಿಕದ ಪ್ರಬಲ ಸಶಸ್ತ್ರ ಸೇವಾ ಸಮಿತಿ ಮತ್ತು ವಿದೇಶಾಂಗ ವ್ಯವಹಾರ ಸಮಿತಿಗಳಲ್ಲಿ ಸದಸ್ಯರಾಗಿದ್ದಾರೆ.ತುಳಸಿ ಅವರು ಡೆಮಾಕ್ರಟಿಕ್‌ ಪಕ್ಷದ ಹೊಸ ಧ್ವನಿ ಆಗಿದ್ದು, ಅಮೆರಿಕ–ಭಾರತ ಸಂಬಂಧಕ್ಕೆ ಬೆಂಬಲ, ಇರಾಕ್‌ ಯುದ್ಧಕ್ಕೆ ವಿರೋಧ, ಸೌದಿಗೆ ಶಸ್ತ್ರಾಸ್ತ ಮಾರಾಟಕ್ಕೆ ಆಕ್ಷೇಪ ಎತ್ತುವ ಮೂಲಕ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅಧ್ಯಕ್ಷೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಾಥಮಿಕ ಚುನಾವಣೆಗಳುಫೆಬ್ರುವರಿ 3ರಿಂದ ಆರಂಭವಾಗಲಿವೆ.

ಚುನಾವಣಾ ಪ್ರಚಾರಕ್ಕಾಗಿ ದೇಣಿಗೆ ಸಂಗ್ರಹಿಸಲು ತುಳಸಿ ಅವರ ಬೆಂಬಲಿಗರು ಸದ್ದಿಲ್ಲದೇ ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗಿದೆ. ವಿಶೇಷವಾಗಿ ದೊಡ್ಡ ಸಂಖ್ಯೆಯಲ್ಲಿರುವ ಭಾರತೀಯ ಅಮೆರಿಕನ್ನರು ಹಾಗೂ ಸಮರ್ಥ ಅಭಿಯಾನ ನಡೆಸಲು ಸ್ವಯಂಸೇವಕರ ಪಡೆಯನ್ನು ರಚನ ಮಾಡಿದ್ದಾರೆ.

ಲೋವಾ, ನ್ಯೂ ಹ್ಯಾಂಪ್‌ಶೈರ್, ನೆವಾಡ ಮತ್ತು ದಕ್ಷಿಣ ಕರೋಲಿನಾ ರಾಜ್ಯಗಳಲ್ಲಿ ಜನರನ್ನು ಸೆಳೆಯಲು ತುಳಸಿ ಅವರ ತಂಡ ಈಗಾಗಲೇ ಕಾರ್ಯೋನ್ಮುಖವಾಗಿದೆ. ಅಮೆರಿಕದಲ್ಲಿ ಯಹೂದಿಗಳನ್ನು ಹೊರತುಪಡಿಸಿದರೆ ಭಾರತೀಯರೇ ಪ್ರಮುಖ ಜನಾಂಗೀಯ ಗುಂಪು ಎನಿಸಿದೆ. ಬಹುತೇಕ ರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಸಮುದಾಯವೇ ನಿರ್ಣಾಯಕ ಪಾತ್ರ ವಹಿಸುತ್ತಿದೆ. ಡೆಮಾಕ್ರಟಿಕ್ ಪಕ್ಷದ ತುಳಸಿ ಗಬ್ಬಾರ್ಡ್ ರಾಜಕೀಯದಲ್ಲಿ ಸಾಕಷ್ಟು ಪ್ರಖ್ಯಾತಿ ಪಡೆದಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close