About Us Advertise with us Be a Reporter E-Paper

Breaking Newsರಾಜ್ಯ

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಬಾಗಲಕೋಟೆ: ಸ್ನಾನ ಮಾಡಲು ಕೃಷಿ ಹೊಂಡಕ್ಕೆ ತೆರಳಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.

ಸುಹಾಸ್ ನೀಲಣ್ಣವರ (15), ಮೇಘರಾಜ ಪತ್ತಾರ (14) ಮೃತಪಟ್ಟ ಬಾಲಕರು. ಬಾಲಕರು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ತಡರಾತ್ರಿ ಹುಡುಕಾಟ ನಡೆಸಿದ ಪೊಲೀಸರು ಕೃಷಿ ಹೊಂಡದಿಂದ ಇಬ್ಬರು ಬಾಲಕರ ಶವವನ್ನು ಹೊರತೆಗೆದಿದ್ದಾರೆ.

ಈ ಸಂಬಂಧ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close