About Us Advertise with us Be a Reporter E-Paper

Breaking NewsUncategorizedಪ್ರಚಲಿತರಾಜ್ಯ
Trending

ಜೀವದ ಹಂಗು ತೊರೆದು ರೈಲು ಪ್ರಯಾಣಿಕರ ಜೀವ ಉಳಿಸಿದ ಸಾಹಸಿ ಯುವಕರು

ಬೆಳಗಾವಿ: ಜೀವದ ಹಂಗು ತೊರೆದು ಚಲಿಸುತ್ತಿರುವ ರೈಲಿನ ವಿರುದ್ಧ ಓಡಿ ಹೋಗಿ ರೈಲು ನಿಲ್ಲಿಸುವ ಮೂಲಕ ದೊಡ್ಡ ದುರಂತವನ್ನೇ ಯುವಕರಿಬ್ಬರು ತಪ್ಪಿಸಿದ್ದು, ಸಾವಿರಾರು ಪ್ರಯಾಣಿಕರ ಜೀವ ಉಳಿಸಿದ್ದಾರೆ.

ತೌಫಿಕ್  ಮತ್ತು ರಿಯಾಜ್ ಸಾಹಸಿ ಯುವಕರು. ಹೈದ್ರಾಬಾದ್ ಎಕ್ಸ್ ಪ್ರೆಸ್ ರೈಲು ಕೊಲ್ಲಾಪುರದಿಂದ ಹುಬ್ಬಳ್ಳಿಯತ್ತ ತೆರಳುತ್ತಿತ್ತು. ರೈಲಿನ ಹಳಿ ಮೇಲೆ ಮರ ಬಿದ್ದಿದ್ದನ್ನು ಗಮನಿಸಿದ ಯುವಕರು ತಮ್ಮ ಶರ್ಟ್ ಬಿಚ್ಚಿ ರೈಲಿನ ಮುಂದೆ ಓಡಿ ಅಪಾಯವಿದೆ ಎಂದು ಸೂಚಿಸಿದ್ದಾರೆ. ಇದನ್ನು ನೋಡಿದ ರೈಲು ಸಿಬ್ಬಂದಿ ತಕ್ಷಣ ಬ್ರೇಕ್ ಹಾಕಿದ್ದಾರೆ. ರೈಲು ಸರಿಯಾಗಿ ಮರದ ಹತ್ತಿರವೇ ಬಂದು ನಿಂತಿದೆ. ಯುವಕರಿಬ್ಬರ ಸಮಯಪ್ರಜ್ಞೆಗೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ರೈಲಿನಲ್ಲಿ 1,200 ಜನರು ಪ್ರಯಾಣ ಮಾಡುತ್ತಿದ್ದರು. ರಿಯಾಜ್ ಹಾಗೂ ತೋಫಿಕ್ ಸಾಹಸದ ಬಗ್ಗೆ ನೈಋತ್ಯ ರೈಲ್ವೆ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇವರಿಬ್ಬರಿಗೆ ಶೌರ್ಯ ಪ್ರಶಸ್ತಿ ಕೊಡಬೇಕೆಂದು ಸೂಚಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Language
Close