About Us Advertise with us Be a Reporter E-Paper

Breaking Newsದೇಶಪ್ರಚಲಿತ

ನೀವು ರಾಹುಲ್ ಗಾಂಧಿ, ಚೈನೀಸ್ ಗಾಂಧಿ ಅಲ್ಲ: ಸಂಬಿತ್ ಪಾತ್ರಾ

ದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚೀನಾ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ‘ನೀವು ರಾಹುಲ್ ಗಾಂಧಿ, ಚೈನೀಸ್ ಗಾಂಧಿ ಅಲ್ಲ. ನೀವು ಏಕೆ ಸದಾ ನೆರೆ ರಾಷ್ಟ್ರ ಚೀನಾ ಪರ ಮಾತನಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ಚೀನಾ ಮೂಲಕ ಮಾನಸ ಸರೋವರ ಯಾತ್ರೆ ಕೈಗೊಳ್ಳುತ್ತಿರುವುದು ಖಚಿತವಾಗುತ್ತಿದ್ದಂತೆಯೇ ಬಿಜೆಪಿ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದೆ.

ರಾಹುಲ್ ಗಾಂಧಿ ಭಾರತದ ವಕ್ತಾರರಂತೆ ನಡೆದುಕೊಳ್ಳುವುದನ್ನು ಬಿಟ್ಟು ಚೀನಾ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಹುಲ್ ಅವರಿಗೆ ಚೀನಾದ ಮೇಲೆ ಇನ್ನಿಲ್ಲದ ಪ್ರೀತಿ ಉಕ್ಕಿದೆ. ಭಾರತದ ದೃಷ್ಟಿಕೋನದಿಂದ ಮಾತನಾಡದೆ ಅವರು ಸದಾ ಚೀನಾ ದೃಷ್ಟಿಕೋನದಿಂದಲೇ ಎಲ್ಲವನ್ನೂ ನೋಡುತ್ತಾರೆ. ಚೀನಾದಲ್ಲಿ ಅವರು ಯಾವ ಯಾವ ರಾಜಕಾರಣಿಗಳನ್ನು ಭೇಟಿ ಮಾಡಿದರು ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದರು.

Tags

Related Articles

Leave a Reply

Your email address will not be published. Required fields are marked *

Language
Close