About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಕೊಡಗು ಸಂತ್ರಸ್ಥರಿಗೆ ಉಡುಪಿ ಮಠದ ಸಹಾಯ ಹಸ್ತ

ಮಡಿಕೇರಿ: ಕೊಡಗಿನ ಸಂತ್ರಸ್ತರಿಗೆ 2 ಕೋಟಿ ರು. ವೆಚ್ಚದಲ್ಲಿ ಅಗತ್ಯ ನೆರವು ನೀಡಲು ಉಡುಪಿಯ ಪರ್ಯಾಯ ಶ್ರೀ ಪಲಿಮಾರು ಮಠ ಮುಂದಾಗಿದೆ.

ಕೊಡಗಿನ ಪ್ರಕೃತಿ ವಿಕೋಪ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮಠದ ಆಡಳಿತಾಧಿಕಾರಿ ಪ್ರಹ್ಲಾದ ಆಚಾರ್ಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಕೊಡಗಿನಲ್ಲಿ ಭಾರೀ ಮಳೆಯಿಂದ ಉಂಟಾದ ವಿಕೋಪಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ ಸಂತ್ರಸ್ತ ಕುಟುಂಬಗಳ ನೆರವಿಗೆ ಬರಲು ಮಠದ ಶ್ರೀ ವಿದ್ಯಾಧೀಶ ಶ್ರೀಪಾದಂಗಳವರು ನಿಶ್ಚಯಿಸಿದ್ದಾರೆ ಎಂದು ತಿಳಿಸಿದರು.

ಮಠದಿಂದ 2 ಕೋಟಿ ರು.ಗಳಲ್ಲಿ ನಾನಾ ರೀತಿಯಲ್ಲಿ ಪ್ರಕೃತಿ ವಿಕೋಪಕ್ಕೀಡಾದ ಗ್ರಾಮಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಸಿದ್ಧವಿದ್ದು, ಜಿಲ್ಲಾಡಳಿತ ಸೂಚಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಪ್ರಹ್ಲಾದ ಆಚಾರ್ಯ ತಿಳಿಸಿದರು.

ಮಠದ ಪ್ರತಿನಿಧಿ ರಾಘವೇಂದ್ರ ಆಚಾರ್ಯ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಯಾವುದೇ ಒಂದು ಗ್ರಾಮವನ್ನು ದತ್ತು ಪಡೆದು, ಸರಕಾರದ ಸಹಯೋಗದೊಂದಿಗೆ ಔಷಧಾಲಯ, ಪಶು ಚಿಕಿತ್ಸಾ ಕೇಂದ್ರ, ಸಮುದಾಯ ಭವನ, ಪ್ರಾರ್ಥನಾ ಮಂದಿರ, ಶಾಲೆ ನಿರ್ಮಾಣ ಹೀಗೆ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಮಠ ಆಸಕ್ತವಾಗಿದೆ ಎಂದು ಹೇಳಿದರು.
ಮಠದ ಪರವಾಗಿ ಕೇಶವ ಪ್ರಸಾದ ಮುಳಿಯ, ರಾವ್, ಮಡಿಕೇರಿಯ ರವೀಂದ್ರ ರೈ ಇದ್ದರು.

Tags

Related Articles

Leave a Reply

Your email address will not be published. Required fields are marked *

Language
Close