About Us Advertise with us Be a Reporter E-Paper

Breaking Newsದೇಶಪ್ರಚಲಿತ

ನಿರ್ಮಾಣ ಹಂತದ ಕಟ್ಟಡ ಕುಸಿತ: 1 ಸಾವು, 32 ಜನರಿಗೆ ಗಾಯ

ಚೆನೈ: ನಿರ್ಮಾಣ ಹಂತದಲ್ಲಿನ ಕಟ್ಟಡ ಕುಸಿದು ಒಬ್ಬ ವ್ಯಕ್ತಿ ಮೃತಪಟ್ಟಿದ್ದು, 32ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಶನಿವಾರ ಸುಮಾರು ರಾತ್ರಿ 7.15ಕ್ಕೆ ಈ ಘಟನೆ ಸಂಭವಿಸಿದೆ. ಇದರಲ್ಲಿ ಮೃತ ವ್ಯಕ್ತಿ ಬಬಲೂ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಇದಕ್ಕೆ ಕಾರಣರಾದವರ ವಿರುದ್ಧ ಸೊಕ್ತ ಕ್ರಮ ಕೈಗೊಳ್ಳುವುದಾಗಿ ಚೆನೈ ಪೊಲೀಸ್್ ಕಮೀಷನರ್ ಎ.ಕೆ.ವಿಶ್ವನಾಥನ್ ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಕೆ.ಪಳನೀಸ್ವಾಮಿ ಮೃತ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಅವಘಡದಲ್ಲಿ ಗಾಯಗೊಂಡ 27 ಜನರನ್ನು ಚೆನೈನ ಅಪೋಲ ಆಸ್ಪತ್ರಗೆ ದಾಖಲಿಸಲಾಗಿದೆ. ಇದರಲ್ಲಿ 5 ಜನರಿಗೆ ಗಂಭೀರವಾಗಿದೆ ಎಂದು ತಮಿಳು ನಾಡಿನ ಆರೋಗ್ಯ ಕಾರ್ಯದರ್ಶಿ ಜೆ. ರಾಧಾಕೃಷ್ಣನ್ ತಿಳಿಸಿದ್ದಾರೆ.

ಪೊಲೀಸರು ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close