About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಕೇಂದ್ರ ಸರಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ದೆಹಲಿ: ಇಂಧನ ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ವಿಪಕ್ಷಗಳು ಭಾರತ್ ಬಂದ್ ಗೆ ಕರೆ ಕೊಟ್ಟಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ರಾಹುಲ್, ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ಇಂದು ಇಡೀ ದೇಶದ ಜನ ಬೀದಿಗಿಳಿದಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ತಮ್ಮ ಮೌನ ಮುಂದುವರೆಸಿದ್ದಾರೆ ಎಂದು ಅವರು ಆರೋಪಿಸಿದರು. ಇಂದು ಸರ್ವಾಧಿಕಾರಿ ಸರ್ಕಾರದ ವಿರುದ್ಧ ವಿಪಕ್ಷಗಳು ಒಗ್ಗೂಡಿದ್ದು, ಭಾರತ್ ಬಂದ್ ನಮ್ಮ ಬಲ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಜನರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಆಲೋಚಿಸದ ಬಿಜೆಪಿ ಸರ್ಕಾರವನ್ನು ನಾವು ಕಿತ್ತೊಗೆಯುತ್ತೇವೆ. ಮುಂದಿನ ಚುನಾವಣೆಯಲ್ಲಿ ಜನ ತಮ್ಮ ಶಕ್ತಿ ಏನು ಎಂಬುದನ್ನು ಮೋದಿ ಮತ್ತು ಬಿಜೆಪಿಗೆ ತೋರಿಸುತ್ತಾರೆ ಎಂದು ರಾಹುಲ್ ಗಾಂಧಿ ವಾಕ್ಪ್ರಹಾರ ನಡೆಸಿದರು.

ಇನ್ನು ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ದೇಶದ ಹಿತಾಸಕ್ತಿಗೆ ಸಂಬಂಧಿಸಿದ ಸಾಕಷ್ಟು ವಿಚಾರಗಳನ್ನು ಮೋದಿ ಸರಕಾರ ಮಾಡಿದೆ. ಆದರೆ ಅದ್ಯಾವುದೂ ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದ್ದಲ್ಲ. ಇದೀಗ ಸರಕಾರ ಬದಲಿಸುವ ಸಮಯ ಬಂದಿದೆ ಎಂದು ಹೇಳಿದರು.

ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೆಪ್ಟೆಂಬರ್ 12ರಂದು ವಾಪಸ್ ಆಗಬೇಕಿತ್ತು. ಆದರೆ ತಮ್ಮ ಪಕ್ಷದ ನೇತೃತ್ವದಲ್ಲಿ ಭಾರತ್ ಬಂದ್ ಘೋಷಣೆ ಮಾಡಿರುವುದರಿಂದ ರಾಹುಲ್ ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿ 2 ದಿನ ಮುಂಚಿತವಾಗಿಯೇ ದೆಹಲಿಗೆ ವಾಪಸ್ ಆಗಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close