ಬಾಯಾರಿದವರಿಗೆ ನೀರು ನೀಡುವುದು ಶ್ರೇಷ್ಠ ಯಜ್ಞ: ರಾಘವೇಶ್ವರ ಶ್ರೀ
ಯಜ್ಞ - ತಪಸ್ಸು - ವ್ರತಗಳನ್ನು ಮಾಡದೇ ಇದ್ದರೂ ಬಾಯಾರಿದವರಿಗೆ ನೀರನ್ನು ದಾನ ಮಾಡಿದವನು ಸ್ವರ್ಗವನ್ನು ಪಡೆಯುತ್ತಾನೆ. ಬೇಸಿಗೆಯಲ್ಲಿ ದಾರಿಹೋಕರಿಗೆ ನೀರನ್ನು ಒದಗಿಸುವುದು, ಬಾವಿ ಹಾಗೂ ಕೆರೆಗಳನ್ನು ನಿರ್ಮಿಸುವುದು ಶ್ರೇಷ್ಠ ಕಾರ್ಯ ಎಂದು ಧರ್ಮ ಶಾಸ್ತ್ರವನ್ನು ಆಧರಿಸಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.