About Us Advertise with us Be a Reporter E-Paper

Breaking Newsಪಾಲಿಟಿಕ್ಸ್ಪ್ರಚಲಿತ
Trending

ಪ್ರಧಾನಿ ಹುದ್ದೆಗೆ ರಾಹುಲ್‌ ಬೆಸ್ಟ್‌ ಅಭ್ಯರ್ಥಿ: ವೀರಪ್ಪ ಮೊಯ್ಲಿ

ಹೈದರಾಬಾದ್‌: ಪ್ರಧಾನ ಮಂತ್ರಿಯಾಗಲು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅತ್ಯುತ್ತಮ ಅಭ್ಯರ್ಥಿ ಎಂದು ಪಕ್ಷದ ವರಿಷ್ಠ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ತೆಲಂಗಾಣದ ವಿಧಾನ ಸಭಾ ಚುನಾವಣೆ ಪ್ರಯುಕ್ತ ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿರುವ ಮೊಯ್ಲಿ, ಬಿಜೆಪಿ ವಿರುದ್ಧದ ಬಣದ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ರಾಹುಲ್‌ ಗಾಂಧಿರನ್ನು ನೇಮಕ ಮಾಡಲಾಗುವುದೇ ಎಂದು ಕೇಳಿದ ಸಂದರ್ಭ, “ನಾನು ಈ ಕುರಿತು ಏನೂ ಹೇಳಲಾರೆ, ಆದರೆ ಪ್ರಧಾನ ಮಂತ್ರಿ ಹುದ್ದೆಗೆ ರಾಹುಲ್‌ ಬೆಸ್ಟ್‌ ಅಭ್ಯರ್ಥಿ” ಎಂದು ಹೇಳಿದ್ದಾರೆ.

“ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌ ನೆಲೆ ಕಾಣುತ್ತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಜನಪ್ರಿಯತೆ ಕಳೆದುಕೊಳ್ಳುತ್ತಿದೆ” ಎಂದು ಹೇಳಿದ್ದಾರೆ.

ಮುಂಭರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿಪಕ್ಷಗಳನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಮೊಯ್ಲಿ ಹೇಳಿದ್ದಾರೆ.

ಬಿಜೆಪಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಬಣ ನಿರ್ಮಾಣವಾ‌ಗುತ್ತಿದೆ ಎಂದ ಮೊಯ್ಲಿ, ಮುಂಬರುವ ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್‌ ಎಲ್ಲ ಕಡೆಯೂ ಜಯಭೇರಿ ಮೊಳಗಿಸಲಿದೆ ಎಂದಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close