ವಿಷ ಸೇವಿಸಿ ಯುವಕ ಆತ್ಮಹತ್ಯೆ

Posted In : ದಕ್ಷಿಣ ಕನ್ನಡ, ರಾಜ್ಯ

ಉಪ್ಪಿನಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.

ಮೃತನನ್ನು ಸರ್ವೆ ಗ್ರಾಮದ ನಿವಾಸಿ ರಮೇಶ(29) ಎಂದು ಗುರುತಿಸಲಾಗಿದೆ. ಸಾಯುವುದಕ್ಕೂ ಮುನ್ನ ರಮೇಶ ಡೆತ್‌ನೋಟ್ ಒಂದನ್ನು ಬರೆದಿಟ್ಟಿದ್ದಾನೆ ಎನ್ನಲಾಗಿದ್ದು, ಅದನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡೆತ್ ನೋಟ್‌ನಲ್ಲಿ ಏನನ್ನು ಬರೆಯಲಾಗಿದೆ ಎಂಬ ಮಾಹಿತಿ ಬಹಿರಂಗಪಡಿಸಲು ಪೊಲೀಸರು ತನಿಖೆಯ ಕಾರಣದಿಂದ ನಿರಾಕರಿಸಿದ್ದಾರೆ.

Leave a Reply

Your email address will not be published. Required fields are marked *

thirteen + twenty =

 
Back To Top