Keralam Assembly Elections 2026: ʼʼಕೇರಳಂ ಮತದಾರರು ಬದಲಾವಣೆ ಬಯಸಿದ್ದಾರೆʼʼ: ಕಣ್ಣೂರಿನಲ್ಲಿ ಡಿ.ಕೆ. ಶಿವಕುಮಾರ್ ಅಬ್ಬರದ ಪ್ರಚಾರ
ಕೇರಳಂ ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ. ಏಪ್ರಿಲ್ 9ರಂದು ನಡೆಯುವ ಒಂದೇ ಹಂತದ ಮತದಾನ ನಡೆಯಲಿದ್ದು, ರಾಜ್ಯಾದ್ಯಂತ ಚುನಾವಣಾ ಕಾವು ಜೋರಾಗಿದೆ. ಸತತ 2 ಅಧಿಕಾರದಲ್ಲಿರುವ ಎಲ್‌ಡಿಎಫ್ ಒಕ್ಕೂಟವನ್ನೂ ಮಣಿಸಲೇಬೇಕೆಂದು ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪಣ ತೊಟ್ಟಿದ್ದರೆ, ಪ್ರಭಾವ ಬೀರಲು ಎನ್‌ಡಿಎ ಸಜ್ಜಾಗಿದೆ. ವಿಶೇಷ ಎಂದರೆ ಯುಡಿಎಫ್ ಪರವಾಗಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇರಳದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಮತದಾರರನ್ನು ಭೇಟಿಯಾಗಿ ಮನವೊಲಿಸಲು ಮುಂದಾಗಿದ್ದು, ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ.
Ramesh Ballamoole
Apr 5, 2026 3:26 PM
ತಿರುವನಂತಪುರಂ, ಏ. 5: ಬಿಸಿಲ ಕಾವಿನ ಜತೆ ಕೇರಳದಲ್ಲಿ ಚುನಾವಣಾ ಕಾವು ಜೋರಾಗಿದೆ. ಏಪ್ರಿಲ್ 9ರಂದು ಒಂದೇ ಹಂತದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ವಿವಿಧ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಕಣ್ಣೂರಿನಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿ ಟಿ.ಒ. ಮೋಹನನ್ ಪರವಾಗಿ ಮತಯಾಚಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಕೇರಳದ ಜನತೆ ಬದಲಾವಣೆ ಬಯಸಿದ್ದಾರೆ. 10 ವರ್ಷಗಳ ಎಲ್‌ಡಿಎಫ್ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದು, ಯುವಜನತೆ ಬೀದಿಗೆ ಬಿದ್ದಿದೆ. ಹೀಗಾಗಿ ಜನರು ಬದಲಾವಣೆ ಬಯಸಿದ್ದಾರೆ. ಅದಕ್ಕಾಗಿ ಯುಡಿಎಫ್‌ಗೆ ಬೆಂಬಲ ನೀಡುತ್ತಿದ್ದಾರೆʼʼ ಎಂದರು.