ಪ್ರಧಾನಿ ಮೋದಿ ಉದ್ಘಾಟಿಸಿದ ಶ್ರೀ ಭೈರವೈಕ್ಯ ಮಂದಿರ ಹೇಗಿದೆ ಗೊತ್ತಾ? ವಿಡಿಯೋ ನೋಡಿ
Sri Guru Bhairavaikya Mandir: ಪ್ರಧಾನಿ ನರೇಂದ್ರ ಮೋದಿ ಇಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದು, ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ನೆರವೇರಿಸಿದ್ದಾರೆ. ಈ ಮಂದಿರ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಯವರ ಸಮಾಧಿ ಸ್ಥಳವಾಗಿದೆ.
Vishakha Bhat Heggar
Apr 15, 2026 1:18 PM
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದು, ಶ್ರೀಗುರು ಭೈರವೈಕ್ಯ ಮಂದಿರದ (Sri Guru Bhairavaikya Mandir) ಉದ್ಘಾಟನೆಯನ್ನು ನೆರವೇರಿಸಿದ್ದಾರೆ. ಈ ಮಂದಿರ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಯವರ ಸಮಾಧಿ ಸ್ಥಳವಾಗಿದೆ. ಇದನ್ನು ಸಂಪೂರ್ಣವಾಗಿ ಕಲ್ಲಿನಿಂದ ನಿರ್ಮಿಸಲಾಗಿದ್ದು, ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯನ್ನು ಕಾಣಬಹುದು. ಮಂದಿರದ ಗರ್ಭಗುಡಿಯಲ್ಲಿ ಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಅಮೃತಶಿಲೆಯ ಭವ್ಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ.
ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದಾರೆ. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು.