ʼʼನಾನೇ ಅಭ್ಯರ್ಥಿ ಎಂದುಕೊಂಡು ಮತ ಹಾಕಿʼʼ; ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ
CM Siddaramaiah campaigns: ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ. ನಾವು ಗೆದ್ದೇ ಗೆಲ್ಲುತ್ತೇವೆ ಎನ್ನುವ ಭರವಸೆ ಇದೆ ಎಂದು ಅವರು ಹೇಳಿದರು.
Priyanka P
Mar 31, 2026 3:24 PM
ಬಾಗಲಕೋಟೆ, ಮಾ. 31: ಬಾಗಲಕೋಟೆ ಉಪಚುನಾವಣೆಯಲ್ಲಿ (Bagalkot by-election) ಗೆಲುವು ಸಾಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಕಾಂಗ್ರೆಸ್ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಾಂಗ್ರೆಸ್ ಪರ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ʼʼನಾನೇ ಅಭ್ಯರ್ಥಿ ಎಂದುಕೊಂಡು, ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಿʼʼ ಎಂದು ಸಿಎಂ ಹೇಳಿದ್ದಾರೆ. ʼʼಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ಕೊಟ್ಟಿದ್ದೇವೆ. ಅವರನ್ನು ಬೆಂಬಲಿಸಿ, ಗೆಲ್ಲಿಸಿ. ಬಿಜೆಪಿಯವರು ನುಡಿದಂತೆ ನಡೆಯಲಿಲ್ಲʼʼ ಎಂದು ಕಿಡಿಕಾರಿದ್ದಾರೆ. ʼʼಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರವು ಭ್ರಷ್ಟಾಚಾರದಿಂದ ಕೂಡಿತ್ತು. ಯಾವುದೇ ಅಭಿವೃದ್ಧಿಯನ್ನು ಅವರು ಮಾಡಲಿಲ್ಲʼʼ ಎಂದು ಮುಖ್ಯಮಂತ್ರಿ ಗುಡುಗಿದ್ದಾರೆ. ʼʼನಾವು ಗೆದ್ದೇ ಗೆಲ್ಲುತ್ತೇವೆ ಅನ್ನುವ ಭರವಸೆ ಇದೆʼʼ ಎಂದಿದ್ದಾರೆ.