ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮತ್ತಷ್ಟು ಇಳಿಕೆಯಾಗಲಿದೆಯೇ ಚಿನ್ನದ ದರ?

ವರ್ಷದ ಆರಂಭದಲ್ಲಿ ಏರುತ್ತಲೇ ಸಾಗಿದ ಚಿನ್ನದ ದರ ಜೂನ್ ತಿಂಗಳ ಆರಂಭದಿಂದಲೇ ಕುಸಿತವನ್ನು ದಾಖಲಿಸಿದೆ. ಇದಕ್ಕೆ ಕಾರಣವೇನು, ಮುಂದಿನ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಕುಸಿತವಾಗುವುದೇ?, ಮಾರುಕಟ್ಟೆಯ ಯಾವೆಲ್ಲಾ ಅಂಶಗಳು ಚಿನ್ನದ ದರದ ಮೇಲೆ ಪರಿಣಾಮ ಬೀರಲಿದೆ ಎನ್ನುವ ಕುರಿತು ಮಾರುಕಟ್ಟೆ ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ.

ಬೆಂಗಳೂರು: ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿ ದರ ಹೆಚ್ಚಿಸಿದರೆ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ (Gold rate) ಇಳಿಕೆಯಾಗಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು. ಈ ಕುರಿತು 'ವಿಶ್ವವಾಣಿ ಮನಿ' (Vishwavani money) ಯುಟ್ಯೂಬ್‌ ಚಾನೆಲ್‌ನಲ್ಲಿ ಮಾಹಿತಿ ನೀಡಿದ ಕೇಶವ್ ಪ್ರಸಾದ್ ಅವರು, ಈ ವರ್ಷದ ಆರಂಭದಲ್ಲಿ ಭಾರಿ ಏರಿಕೆ ಕಂಡಿದ್ದ ಚಿನ್ನದ ದರ ಜೂನ್ ತಿಂಗಳಲ್ಲಿ ಇಳಿಕೆಯನ್ನು ದಾಖಲಿಸಿದೆ. ಜೂನ್ ತಿಂಗಳ ಆರಂಭದಲ್ಲಿ ೨೪ ಕ್ಯಾರೆಟ್ ನ ೧೦ ಗ್ರಾಮ್ ಚಿನ್ನದ ಬೆಲೆ 1,54,908ರೂ. ಇದ್ದದ್ದು ಜೂನ್ ತಿಂಗಳ ಅಂತ್ಯದ ವೇಳೆಗೆ 1,44,838 ರೂ. ಗೆ ಇಳಿಕೆಯಾಗಿದೆ. ಇದಕ್ಕೆ ಮುಖ್ಯವಾಗಿ ಪಶ್ಚಿಮ ಏಷ್ಯಾ ಭಾಗದಲ್ಲಿ ಭೌಗೋಳಿಕ ಉದ್ವಿಗ್ನತೆ ಕಡಿಮೆಯಾಗುತ್ತಿರುವ ಲಕ್ಷಣಗಳು, ಡಾಲರ್ ಬಲವಾಗುತ್ತಿರುವುದು, ಫೆಡರಲ್ ರಿಸರ್ವ್ ಬಡ್ಡಿ ದರ ಹೆಚ್ಚಳದ ಸೂಚನೆ ನೀಡಿರುವುದು, ಲಾಭದ ನಗದೀಕರಣ ಮುಖ್ಯ ಕಾರಣವಾಗಿದೆ. ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದರಿಂದ ಈಗ ಖರೀದಿ ಮತ್ತು ಹೂಡಿಕೆಗೆ ಒಂದು ಉತ್ತಮ ಅವಕಾಶ. ಮುಂದಿನ ದಿನಗಳಲ್ಲಿ ಚಿನ್ನದ ದರ ಮತ್ತಷ್ಟು ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.