About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ವಿಧಾನಸೌಧದಿಂದ ರಾಜಭವನದವರೆಗೆ ಬಿಜೆಪಿ ಪಾದಯಾತ್ರೆ

ಬೆಂಗಳೂರು: ಶಾಸಕ ಪ್ರೀತಂಗೌಡ ಬೆಂಬಲಿಗನ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ ವಿಧಾನಸೌಧದಿಂದ ರಾಜಭವನದವರೆಗೆ ಬಿಜೆಪಿ ಪಾದಯಾತ್ರೆ ನಡೆಸಿತು. ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಮುಖಂಡರು, ಶಾಸಕರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ರಾಜಭವನಕ್ಕೆ ತೆರಳಿದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡಿದ್ರು. ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಬೆಂಬಲಿಗನ ಮೇಲೆ ನಡೆದ ಹಲ್ಲೆ  ಸಂಬಂಧ ಮಾಹಿತಿ ನೀಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶಾಸಕರಿಗೆ ರಕ್ಷಣೆ ಇಲ್ಲ. ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿ ಎಂದು ಮನವಿ ಮಾಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close