ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Viral Video: ಪಾಕೆಟ್‌ ಮನಿಯನ್ನು ಭಾರತೀಯ ಸೇನೆಗೆ ನೀಡಿದ ಪುಟ್ಟ ಪೋರ; ಈ ಬಾಲಕನ ದೇಶಪ್ರೇಮಕ್ಕೆ ಸಾಟಿಯೇ ಇಲ್ಲ!

ತಮಿಳುನಾಡಿನ ಕರೂರಿನ 8 ವರ್ಷದ ಹುಡುಗನೊಬ್ಬ ತನ್ನ 10 ತಿಂಗಳ ಉಳಿತಾಯವನ್ನು ಭಾರತೀಯ ಸೇನೆಗೆ ದಾನ ಮಾಡಲು ನಿರ್ಧರಿಸಿದ್ದಾನೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ. ದೇಶಾದ್ಯಂತ ಜನರು ಅವನ ನಿಸ್ವಾರ್ಥ ಕಾರ್ಯಗಳನ್ನು ಹೊಗಳಿದ್ದಾರೆ.

8 ವರ್ಷದ ಹುಡುಗನ ದೇಶಪ್ರೇಮ ಕಂಡು ನೆಟ್ಟಿಗರು ಫುಲ್‌ ಫಿದಾ!

Profile pavithra May 15, 2025 3:15 PM

ಚೆನ್ನೈ: ತಮಿಳುನಾಡಿನ ಕರೂರಿನ 8 ವರ್ಷದ ಹುಡುಗನೊಬ್ಬ ತನ್ನ 10 ತಿಂಗಳ ಉಳಿತಾಯವನ್ನು ಭಾರತೀಯ ಸೇನೆಗೆ ದಾನ ಮಾಡಲು ನಿರ್ಧರಿಸಿದ್ದಾನೆ. ಅವನ ಈ ನಿಸ್ವಾರ್ಥ ಭಾವನೆ ಕಂಡು ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್(Viral Video)ಆಗಿದೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಈ ಹುಡುಗ ಕಳೆದ 10 ತಿಂಗಳುಗಳಿಂದ ತನ್ನ ಮನೆಯವರು ಕೊಟ್ಟ ಪಾಕೆಟ್ ಮನಿಯನ್ನು ಖರ್ಚು ಮಾಡದೇ ಹಾಗೇ ಕೂಡಿಟ್ಟಿದ್ದಾನಂತೆ. ಅವನ ಬಳಿ ಇರುವ ಹಣದ ಮೊತ್ತವು ಸಣ್ಣದಾಗಿದ್ದರೂ ಅದನ್ನು ಒಂದು ಒಳ್ಳೆಯ ಉದ್ದೇಶಕ್ಕಾಗಿ ಮೀಸಲಿಟ್ಟಿರುವುದು ದೊಡ್ಡ ಗುಣವೇ ಸರಿ. ರಾಷ್ಟ್ರವನ್ನು ರಕ್ಷಿಸುವಲ್ಲಿ ಭಾರತೀಯ ಸೇನೆಯ ತ್ಯಾಗಗಳ ಬಗ್ಗೆ ತಿಳಿದುಕೊಂಡ ನಂತರ ಭಾವುಕನಾಗಿ ಈ ಕೊಡುಗೆ ನೀಡುವ ಬಯಕೆಯನ್ನು ಆತ ವ್ಯಕ್ತಪಡಿಸಿದ್ದಾನಂತೆ.

ಈ ಹುಡುಗ ತಾನು ಕೂಡಿಟ್ಟ ಹಣದ ಡಬ್ಬಿಯನ್ನು ಹಿಡಿದುಕೊಂಡು ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿದ್ದಾನೆ. ಅವನ ಈ ನಡೆ ಜಿಲ್ಲಾಧಿಕಾರಿಗಳನ್ನೇ ಭಾವುಕರನ್ನಾಗಿ ಮಾಡಿದೆ ಮತ್ತು ಆ ಬಾಲಕನ ನಿಸ್ವಾರ್ಥತೆ ಮತ್ತು ಔದಾರ್ಯದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಾಲಕನ ವಿಡಿಯೊ ಇಲ್ಲಿದೆ ನೋಡಿ...



ಅವನ ಈ ನಿಸ್ವಾರ್ಥ ಸೇವೆಯ ಬಗ್ಗೆ ಆತ ಮಾಧ್ಯಮದೊಂದಿಗೆ ಮಾತನಾಡಿದ್ದು, ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೇಶಾದ್ಯಂತ ಜನರು ಅವನ ನಿಸ್ವಾರ್ಥ ಕಾರ್ಯಗಳನ್ನು ಹೊಗಳಿದ್ದಾರೆ. ಒಬ್ಬ ನೆಟ್ಟಿಗರು, "ಅವನು ತನ್ನ ಜೀವನದಲ್ಲಿ ಅತ್ಯುತ್ತಮವಾದದ್ದನ್ನು ಸಾಧಿಸಬೇಕೆಂದು ನಾನು ಬಯಸುತ್ತೇನೆ. ಸ್ಪೂರ್ತಿದಾಯಕ ಮಗು, ಮತ್ತು ಅದರ ಶ್ರೇಯಸ್ಸು ಅವನ ಹೆತ್ತವರಿಗೆ ಮತ್ತು ಇತರ ಎಲ್ಲ ಹಿರಿಯರಿಗೂ ಸಲ್ಲುತ್ತದೆ" ಎಂದು ಬರೆದಿದ್ದಾರೆ. ಮತ್ತೊಬ್ಬರು, "ಎಂತಹ ಸ್ಪೂರ್ತಿದಾಯಕ ಬಾಲಕ! ದೇಶವು ಸುರಕ್ಷಿತ ಕೈಯಲ್ಲಿದೆ ಮತ್ತು ಉಜ್ವಲ ಭವಿಷ್ಯವನ್ನು ಹೊಂದಿದೆ!" ಎಂದು ಕಾಮೆಂಟ್ ಮಾಡಿದ್ದಾರೆ.

ಈ ಹಿಂದೆ 2018ರಲ್ಲಿ ಕೇರಳದಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತ ಉಂಟಾದ ಹಿನ್ನಲೆಯಲ್ಲಿ ಭಾರೀ ನಷ್ಟವಾಗಿತ್ತು. ಹಾಗಾಗಿ ಕೇರಳದ ರಕ್ಷಣೆ, ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಲ್ಲಿ ಹಣದ ಅಗತ್ಯ ಹೆಚ್ಚಾಗಿತ್ತು. ಈ ಸಂದರ್ಭದಲ್ಲಿ ವಿಲ್ಲುಪುರಂನ 2 ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ (8) ತನ್ನ ಪಿಗ್ಗಿ ಬ್ಯಾಂಕ್ ಉಳಿತಾಯವನ್ನು ದಾನ ಮಾಡುವ ಮೂಲಕ ತನ್ನ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಳು.

ಈ ಸುದ್ದಿಯನ್ನೂ ಓದಿ:Viral Video: ನೆದರ್‌ಲ್ಯಾಂಡ್‌ ಖರೀದಿಸಿದ ಟಾಪ್‌ಗೆ.. ಇಡೀ ಪ್ರಪಂಚ ಹುಡುಕಿದ್ರೂ ಸಿಗದ ಮ್ಯಾಚಿಂಗ್‌ ಸ್ಕರ್ಟ್‌ ಸಿಕ್ಕಿದ್ದೆಲ್ಲಿ ಗೊತ್ತಾ? ಈ ವೈರಲ್‌ ವಿಡಿಯೊ ನೋಡಿ

ಕಳೆದ ನಾಲ್ಕು ವರ್ಷಗಳಿಂದ ಅವಳು ಸೈಕಲ್ ಖರೀದಿಸಲು ತನ್ನ ಪಾಕೆಟ್ ಮನಿ ಉಳಿಸುತ್ತಿದ್ದಳು. ಪಿಗ್ಗಿ ಬ್ಯಾಂಕ್‌ನಲ್ಲಿ 9,000 ರೂ.ಇದ್ದಿತ್ತು. ಆದರೆ ಕೇರಳದಲ್ಲಿನ ಕಠೋರ ಪರಿಸ್ಥಿತಿಯನ್ನು ಕಂಡು ಮನನೊಂದ ಆಕೆ ಆ ಉಳಿತಾಯ ಹಣವನ್ನು ಪರಿಹಾರ ನಿಧಿಗೆ ನೀಡಿದ್ದಳು.